
ಮಡಿಕೇರಿ NEWS DESK ಸೆ.21 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಪಾಲ್ಗೊಂಡು ಶುಭ ಹಾರೈಸಿದರು. ಈದ್ ಮಿಲಾದ್ ಹಬ್ಬ ಪ್ರಪಂಚದಾದ್ಯಂತ ಆಚರಿಸಲ್ಪಡುತ್ತಿದ್ದು, ಇದು ಶಾಂತಿಯ ಸಂದೇಶವನ್ನು ಸಾರುವ ಹಬ್ಬವಾಗಿದೆ. ಈ ಕಾರ್ಯಕ್ರಮವು ನಾಡಿನ ಎಲ್ಲಾ ಜನಾಂಗದವರು ಶಾಂತಿ ಸೌಹಾರ್ದತೆಯಿಂದ ಸಹಬಾಳ್ವೆ ಮಾಡಬೇಕೆಂಬ ಸಂದೇಶವನ್ನು ಸಾರುತ್ತದೆ ಹಾಗೂ ಇದನ್ನು ನಾವೆಲ್ಲರೂ ಅಳವಡಿಸಿಕೊಂಡಲ್ಲಿ ಸೌಹಾರ್ದ-ಸದೃಢ ಭಾರತ ನಿರ್ಮಾಣವಾಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದು ಬಣ್ಣಿಸಿದರು. ಇದೇ ಸಂದರ್ಭದಲ್ಲಿ ಸ್ಮಾರ್ಟ್ ಕ್ಲಾಸ್ ಕೊಠಡಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಿತಿಮತಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನವೀನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪೃಥ್ವಿ, ಮುನೀರ್, ಮುಸ್ತಾಫಾ, ರಫೀಕ್ ವಾಕವಿ, ರಾಮಕೃಷ್ಣ, ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









