Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಚತಾ ಹೀ ಸೇವಾ ಪಾಕ್ಷಿಕ ಅಭಿಯಾನ : ಸ್ವಚ್ಛ ಪರಿಸರಕ್ಕೆ ಆದ್ಯತೆ ನೀಡಲು ಟಿ.ಜಿ.ಪ್ರೇಮಕುಮಾರ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಚತಾ ಹೀ ಸೇವಾ ಪಾಕ್ಷಿಕ ಅಭಿಯಾನ : ಸ್ವಚ್ಛ ಪರಿಸರಕ್ಕೆ ಆದ್ಯತೆ ನೀಡಲು ಟಿ.ಜಿ.ಪ್ರೇಮಕುಮಾರ್ ಮನವಿ*

ಸೆಪ್ಟೆಂಬರ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಸೆ.22 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಕೊಡಗು ಜಿಲ್ಲಾ ಪಂಚಾಯ್ತಿಯ ಸ್ವಚ್ಛತಾ ಅಭಿಯಾನ ಯೋಜನೆ, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲೆಯ
ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವತಿಯಿಂದ ಸ್ವಚ್ಚತಾ ಹೀ ಸೇವಾ*ಪಾಕ್ಷಿಕ *ಅಭಿಯಾನ 2025 ಕ್ಕೆ ಶ್ರಮದಾನದ ಮೂಲಕ ಚಾಲನೆ ನೀಡಲಾಯಿತು.  ಸ್ವಚ್ಛತಾ ಹೀ ಸೇವಾ ಅಭಿಯಾನ ಹಾಗೂ ಶ್ರಮದಾನದ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ‘ಸ್ವಚ್ಛ ಭಾರತ್ ಮಿಷನ್ ಮೂಲಕ ದೇಶದ ಜನರಲ್ಲಿ ಸ್ವಚ್ಛತೆ, ಆರೋಗ್ಯ, ನೈರ್ಮಲ್ಯ ಮತ್ತು ನೈರ್ಮಲ್ಯದ ಮಹತ್ವದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ನಾವು ಸ್ವಚ್ಛ , ಸುಂದರ ಮತ್ತು ಹಸಿರು ಪರಿಸರಕ್ಕೆ ಆದ್ಯತೆ ನೀಡುವ ಮೂಲಕ ನಮ್ಮ ಸುತ್ತಲಿನ ಪರಿಸರ
ಸಂರಕ್ಷಣೆಗೆ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸ್ವಚ್ಛತೆಗಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಶ್ರಮದಾನ ಚಟುವಟಿಕೆಗಳನ್ನು ಹಮ್ಮಿಕೊಂಡು ಸಮುದಾಯದಲ್ಲಿ ಸ್ವಚ್ಛತೆಯ ಆಶಯಗಳನ್ನು ಬಲಪಡಿಸಲು 2017 ರಿಂದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ. ಸೆ.17 ರಿಂದ ಆರಂಭಗೊಂಡಿರುವ ಅಕ್ಟೋಬರ್ 2 ರ ಗಾಂಧಿ ಜಯಂತಿ ತನಕ ಹಮ್ಮಿಕೊಂಡಿರುವ
ಸ್ವಚ್ಚತಾ ಹೀ ಸೇವಾ ಅಭಿಯಾನ ದ ಮೂಲಕ ವಿದ್ಯಾರ್ಥಿಗಳು ಕೂಡ್ಲೂರು ಗ್ರಾಮದ ಜನರಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.
ನಾವು ನಮ್ಮ ದಿನನಿತ್ಯದ ಬಳಕೆಯಲ್ಲಿ ಮಾಲಿನ್ಯಕಾರಿ ಪ್ಲಾಸ್ಟಿಕ್ ತ್ಯಜಿಸಿ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳಾದ ಬಟ್ಟೆ, ಸೆಣಬು, ಕಾಗದ
ಬ್ಯಾಗ್‌ಗಳು ಇತ್ಯಾದಿ ವಸ್ತುಗಳನ್ನು ಬಳಕೆ ಮಾಡಬೇಕು ಎಂದು ತಿಳಿಸಿದ ಪ್ರೇಮಕುಮಾರ್ ಅವರು, ವಿದ್ಯಾರ್ಥಿಗಳು ತಮ್ಮ ಮನೆ, ಶಾಲೆ, ಗ್ರಾಮ , ಜನ ವಸತಿ ಪ್ರದೇಶ ಸೇರಿದಂತೆ ತಮ್ಮ ಸುತ್ತಲಿನ ಪರಿಸರದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ನಾವು ನಮ್ಮ ದಿನನಿತ್ಯದ ಬಳಕೆಯಲ್ಲಿ ಮಾಲಿನ್ಯಕಾರಿ ಪ್ಲಾಸ್ಟಿಕ್ ತ್ಯಜಿಸಿ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳಾದ ಬಟ್ಟೆ, ಸೆಣಬು, ಕಾಗದದ ಬ್ಯಾಗ್‌ಗಳು ಇತ್ಯಾದಿ ವಸ್ತುಗಳನ್ನು ಸ್ವಚ್ಛತೆಯ ಉದ್ದೇಶ ಕುರಿತು ಮಾಹಿತಿ ನೀಡಿದ ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಪ್ಲಾಸ್ಟಿಕನ್ನು ಹೆಚ್ಚು ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಮೂಲಕ ಅನೇಕ ಕಾಯಿಲೆಗಳು ಉದ್ಭವಿಸುತ್ತದೆ. ಈ ದಿಸೆಯಲ್ಲಿ ನಾವು ಪ್ಲಾಸ್ಟಿಕ್ ಬಳಕೆಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡಲು ಜನಜಾಗೃತಿ ಮೂಡಿಸಬೇಕಿದೆ ಎಂದರು. ಅಭಿಯಾನದಲ್ಲಿ ಶಿಕ್ಷಕರಾದ ದಯಾನಂದ ಪ್ರಕಾಶ್, ಕೆ.ಗೋಪಾಲಕೃಷ್ಣ, ಬಿ.ಎನ್. ಸುಜಾತ, ಎಸ್.ಎಂ.ಗೀತಾ, ಬಿ.ಎಸ್. ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಸಿಬ್ಬಂದಿ ಎಂ.ಉಷಾ ಇದ್ದರು.
ವಿದ್ಯಾರ್ಥಿಗಳು ಸ್ವಚ್ಚತೆಯೇ ಸೇವೆ, ಸ್ವಚ್ಚತೆ ಇದ್ದಲ್ಲಿ ಆರೋಗ್ಯ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ನಮ್ಮ ಕಸ – ನಮ್ಮ ಹೊಣೆ ಎಂಬಿತ್ಯಾದಿ ಸ್ವಚ್ಚತೆಯ ಕುರಿತಾದ ಘೋಷಣಾ ಫಲಕಗಳನ್ನು ಹಿಡಿದು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು. ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಸೆಪ್ಟೆಂಬರ್ 25 ರಂದು ‘ಒಂದು ದಿನ, ಒಂದು ಗಂಟೆ, ಎಲ್ಲರೂ ಒಟ್ಟಿಗೆ ಸೇರಿ ‘ಶ್ರಮದಾನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಚ್ಛತಾ ಕಾರ್ಯದಲ್ಲಿ ತೊಡಗಲು ನಾಗರಿಕರು ಕೈಜೋಡಿಸಲು ಮನವಿ ಮಾಡಲಾಗಿದೆ ಎಂದು ಟಿ.ಜಿ.ಪ್ರೇಮಕುಮಾರ್ ತಿಳಿಸಿದರು. ಅಭಿಯಾನದಲ್ಲಿ ಆರೋಗ್ಯ, ನೈರ್ಮಲ್ಯ ಹಾಗೂ ಪರಿಸರ ಕಾಪಾಡಿಕೊಳ್ಳಲು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಶಿಕ್ಷಕರು ಮಕ್ಕಳಿಗೆ ಮಾಹಿತಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.