Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರು ಕೊಡವ ಧರ್ಮಕ್ಕೆ ಸೇರಿದವರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರು ಕೊಡವ ಧರ್ಮಕ್ಕೆ ಸೇರಿದವರು*

ಸೆಪ್ಟೆಂಬರ್ 22, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.22 NEWS DESK : ಕೊಡವರು ಕೊಡವ ಧರ್ಮಕ್ಕೆ ಸೇರಿದವರಾಗಿರುವುದರಿಂದ ಸರಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭ ಕೊಡವರು ತಮ್ಮ ಜಾತಿ, ಧರ್ಮವನ್ನು ‘ಕೊಡವ’ ಎಂದೇ ನಮೂದಿಸಬೇಕೆಂದು ಹಿರಿಯ ಕೊಡವ ಅಭಿಮಾನಿಗಳ ಸಂಘದ ಪ್ರಮುಖ ಉಳ್ಳಿಯಡ ಎಂ.ಪೂವಯ್ಯ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡವ ಧರ್ಮ’ ವಿಚಾರಕ್ಕೆ ಸಂಬಂಧಿಸಿದಂತೆ ಅಖಿಲ ಕೊಡವ ಸಮಾಜದಿಂದ ಕರೆಯಲಾಗಿದ್ದ ಸಭೆಯಲ್ಲಿ, ಒಂದು ಗುಂಪಿನ ಕೆಲವರು ವಿನಾಕಾರಣ ಗದ್ದಲವೆಬ್ಬಿಸಿ ಸಭೆಯನ್ನೇ ನಡೆಯದಂತೆ ಮಾಡಿರುವುದು ಖಂಡನೀಯವೆಂದು ತಿಳಿಸಿದರು. ಕೊಡವರು ಮೂಲದಲ್ಲಿ ‘ಕೊಡವ ಧರ್ಮ’ದವರೇ ಆಗಿದ್ದಾರೆ. 15ನೇ ಶತಮಾನದವರೆಗೂ ಇತರೆ ಯಾವುದೇ ಧರ್ಮಗಳ ಚೌಕಟ್ಟಿಗೆ ಒಳಪಡದೆ ತಮ್ಮದೇ ಆದ ಬದುಕಿನ ಪದ್ಧತಿ, ರೀತಿ ರಿವಾಜುಗಳೊಂದಿಗೆ ಬದುಕುತ್ತಿದ್ದರು. 16ನೇ ಶತಮಾನದ ಮಧ್ಯಭಾಗ 1540ರಿಂದ ಇಕ್ಕೇರಿ ರಾಜವಂಶಸ್ಥ ಲಿಂಗಾಯಿತ ರಾಜರು 1834ರವರೆಗೆ ಕೊಡಗನ್ನಾಳಿದರು. ಈ ಹಂತದಲ್ಲಿ ಕೊಡಗಿನ ಕೊಡವರ ಕೊಡವ ಧರ್ಮದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬಂದವು, ನಮ್ಮಲ್ಲಿ ಇಲ್ಲದ ಹಬ್ಬಗಳ ಆಚರಣೆಗಳನ್ನು ಅನುಸರಿಸಲಾರಂಭಿಸಿದರು ಎಂದು ಅಭಿಪ್ರಾಯಪಟ್ಟರು. ಕೊಡವ ಸಮುದಾಯದವರು ಕಳೆದ ಕೆಲವು ಶತಮಾನಗಳಿಂದ ಅನ್ಯ ಧರ್ಮದ ಪ್ರಭಾವಕ್ಕೆ ಒಳಗಾಗಿ ಇತರೆ ಧರ್ಮದ ಆಚರಣೆಗಳನ್ನು ತಮ್ಮಲ್ಲಿ ಅಳವಡಿಸಿಕೊಂಡರು. ಈ ರೀತಿ ಕಾಲಾಂತರದಲ್ಲಿ ಆಗಿರುವ ತಪ್ಪನ್ನು ತಿದ್ದಿಕೊಂಡು ಪರಿವರ್ತನೆಯ ಈ ಸಮಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆಯ ಸಂದರ್ಭ ನಮ್ಮ ಮೂಲ ಧರ್ಮವನ್ನು ಸಾರುವುದರೊಂದಿಗೆ, ಕೊಡವ ಧರ್ಮದಲ್ಲಿಯೇ ಬದುಕನ್ನು ಮುಂದುವರೆಸುವುದು ಸೂಕ್ತ ಎಂದರು. ಸಂಘದ ಸದಸ್ಯರಾದ ಉಳ್ಳಿಯಡ ಡಾಟಿ ಪೂವಯ್ಯ ಅವರು ಮಾತನಾಡಿ, ಶತ ಶತಮಾನಗಳಿಂದ ಕೊಡಗಿನಲ್ಲಿರುವ ಕೊಡವರು ತಮ್ಮ ಆಚಾರ ವಿಚಾರ ಸಂಸ್ಕೃತಿಗಳೊಂದಿಗೆ ಬದುಕು ನಡೆಸುತ್ತಿದ್ದವರು. ಕೊಡವ ಧರ್ಮ ಸಂವಿಧಾನ ಬದ್ಧವಾಗಿ ಅಧಿಕೃತವಾಗಿಲ್ಲವಾದರು, ಈ ಬಗ್ಗೆ ಬೇಡಿಕೆಯನ್ನು ಮುಂದಿಟ್ಟು, ಅದನ್ನು ಪಡೆಯುವ ನಿಟ್ಟಿನಲ್ಲಿ ಮುನ್ನಡಿಯನ್ನಿಡುವುದಾಗಿ ತಿಳಿಸಿದರು. ಕೊಕ್ಕಲೇರ ಎ.ಕಾರ್ಯಪ್ಪ ಅವರು ಮಾತನಾಡಿ, ಕೊಡವರಿಗೆ ಕಾವೇರಿ ಸಂಕ್ರಮಣ, ಪುತ್ತರಿ, ಕೈಲ್ ಪೋಲ್ದ್ ಪ್ರಮುಖ ಹಬ್ಬಗಳು. ಕೊಡವರಿಗೆ ಹಿಂದಿನಿಂದಲೂ ಯಾವುದೇ ಮಠಗಳಾಗಲಿ, ಗುರುಗಳಾಗಲಿ ಇಲ್ಲ. ನಮ್ಮ ದೇವರು ಎಂದರೆ ಅದು ‘ಗುರು ಕಾರೋಣ’ರು ಮಾತ್ರ. ಹೀಗಿದ್ದೂ ಇತರೆ ಧರ್ಮದ ಪ್ರಭಾವಗಳಿಂದ ನಾವು ನಮ್ಮದಲ್ಲದ ಹಬ್ಬಹರಿದಿನಗಳನ್ನು ಆಚರಿಸುತ್ತಿರುವುದಾಗಿ ಗಮನ ಸೆಳೆದರು. ಮಣವಟ್ಟಿರ ಪಾಪು ಚಂಗಪ್ಪ ಮಾತನಾಡಿ, ಹುಟ್ಟಿನಿಂದ ಸಾವಿನವರೆಗಿನ ಕೊಡವ ಸಮುದಾಯದ ಆಚರಣೆಗಳು ಸಂಪೂರ್ಣ ವಿಭಿನ್ನವಾಗಿದೆ. ಇತ್ತೀಚಿನ ದಿನಗಳಲ್ಲಿ ಹಿಂದೂ ಆಚರಣೆಗಳಿಗೆ ಕೊಡವರು ಒತ್ತು ನೀಡಿದ್ದಾರೆ ಎಂದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.