
ಮಡಿಕೇರಿ ಸೆ.23 NEWS DESK : ಕುಶಾಲನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ಬಾಣಾವಾರದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಭಿಮಾನಿಗಳು ದಿನೇಶ್ ಗುಂಡೂರಾವ್ ಅವರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.









