Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಾಳೆಯಡ ಕಿಶನ್ ಪೂವಯ್ಯ ರಚಿತ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಾಳೆಯಡ ಕಿಶನ್ ಪೂವಯ್ಯ ರಚಿತ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆ*

ಸೆಪ್ಟೆಂಬರ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.23 NEWS DESK : ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ರಚಿಸಿರುವ ಕೊಡವ ಮಕ್ಕಡ ಕೂಟದ 118ನೇ ಪುಸ್ತಕ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಬಿಡುಗಡೆಗೊಂಡಿತು. ನಗರದ ಕರ್ಣಂಗೇರಿಯ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ, ಪುಸ್ತಕಕ್ಕೆ ಹೆಚ್ಚು ಜನಮನ್ನಣೆ ದೊರಕಲಿ ಎಂದು ಶುಭ ಹಾರೈಸಿದರು. ನಂತರ ಮಾತನಾಡಿದ ಲೇಖಕ ಬಾಳೆಯಡ ಕಿಶನ್ ಪೂವಯ್ಯ ಅವರು ಸಮಾಜದಲ್ಲಿನ ಭ್ರಷ್ಟಾಚಾರ, ಆಡಳಿತಗಳ ನ್ಯೂನತೆ, ಪ್ರಕೃತಿ ನಾಶ, ಪ್ರವಾಸೋದ್ಯಮದ ಅನಾಹುತಗಳು, ಮೂಢನಂಬಿಕೆಗಳು ಸೇರಿದಂತೆ ವಿಭಿನ್ನ ವಿಚಾರಧಾರೆಗಳನ್ನು ಪುಸ್ತಕದ ರೂಪದಲ್ಲಿ ಹೊರ ತರಲಾಗಿದೆ ಎಂದರು. ಜನರು ನನ್ನ ಬರವಣಿಗೆಯನ್ನು ಮೆಚ್ಚಿಕೊಂಡಿದ್ದಾರೆ, ಆದರೆ ಜೀವನದಲ್ಲಿ ಅಳವಡಿಕೊಂಡಿಲ್ಲ. ಪ್ರತಿಯೊಬ್ಬರು ಪುಸ್ತಕಗಳನ್ನು ಓದಬೇಕು ಮತ್ತು ಅದರಲ್ಲಿರುವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಸಿರ ಕೊಡಗನ್ನು ಕೊಡಗಾಗಿ ಉಳಿಸಿಕೊಳ್ಳಲು ಪಣತೊಡಬೇಕು ಎಂದು ಕರೆ ನೀಡಿದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಹಾಗೂ ಕಿಶನ್ ಪೂವಯ್ಯ ಅವರ ಪತ್ನಿ ಬಾಳೆಯಡ ಸವಿತಾ ಪೂವಯ್ಯ ಅವರು ಮಾತನಾಡಿ, ಪುಸ್ತಕದಲ್ಲಿ ಸಾಮಾಜಿಕ ಚಿಂತನೆಯೊಂದಿಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈಗಾಗಲೇ ಪ್ರಕಟಗೊಂಡಿರುವ ಲೇಖನಗಳನ್ನು ಜನ ಮೆಚ್ಚಿಕೊಂಡಿದ್ದು, ಓದುಗರಿಂದ ಹಲವು ಪತ್ರಗಳು ಬಂದಿವೆ. ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಪುಸ್ತಕ ಈ ಲೇಖನಗಳ ಸಂಗ್ರಹವಾಗಿದೆ ಎಂದರು. ಪ್ರತಿಯೊಬ್ಬರು ಪುಸ್ತಕವನ್ನು ಓದುವ ಮೂಲಕ ಸಾಮಾಜಿಕ ಕಳಕಳಿ ತೋರಬೇಕು ಹಾಗೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಕರೆ ನೀಡಿದರು. ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಾತನಾಡಿ, ಒಂದು ಕಾಲದಲ್ಲಿ ಕೊಡಗು ಸಾಹಿತ್ಯ ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆ ಎಂಬ ಅಪಕೀರ್ತಿಗೆ ಒಳಗಾಗಿತ್ತು ಎಂಬ ಮಾತು ಹಿರಿಯರ ಬಾಯಿಂದ ಕೇಳಿದ್ದೇವೆ. ಇದನ್ನೊಂದು ಸವಾಲಾಗಿ ಸ್ವೀಕರಿಸಿ ಸಾಮಾಜಿಕ ಕಳಕಳಿ, ಕೊಡಗಿನ ಅಭ್ಯುದಯದ ಕಾಳಜಿ, ಸಂಸ್ಕøತಿ, ಸಾಹಿತ್ಯದ ಬೆಳೆವಣಿಗೆಯ ಮೇಲಿನ ಆಸಕ್ತಿಯಿಂದ 2013ರಲ್ಲಿ ಸಮಾನ ಮನಸ್ಕ ಯುವಕ, ಯುವತಿಯರು ಸೇರಿ ಕೊಡವ ಮಕ್ಕಡ ಕೂಟ ಎಂಬ ಸಂಘಟನೆಯನ್ನು ರಚಿಸಲಾಯಿತು. ನಂತರ ನಿರಂತರ ಕಾರ್ಯನಿರ್ವಹಣೆಯಲ್ಲಿ ತೊಡಗಿಸಿಕೊಂಡು ಸಾಹತ್ಯ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಒತ್ತು ನೀಡಲಾಯಿತು ಎಂದು ತಿಳಿಸಿದರು. ದುಬಾರಿ ವೆಚ್ಚವನ್ನು ಭರಿಸಿ ಪುಸ್ತಕ ಪ್ರಕಟಿಸುವುದು ತುಂಬಾ ಕಷ್ಟದ ಕಾರ್ಯವಾಗಿದೆ. ಆದರೂ ದಾನಿಗಳ ಸಹಕಾರದಿಂದ ಇಲ್ಲಿಯವರೆಗೆ ಜಿಲ್ಲೆಯ ಹಲವು ಬರಹಗಾರರು, ಸಾಹಿತಿಗಳು ಬರೆದ ಕೊಡವ, ಕನ್ನಡ, ಇಂಗ್ಲೀಷ್, ಹಿಂದಿ ಸೇರಿದಂತೆ ಅನೇಕ ಕೃತಿಗಳನ್ನು ಬಿಡುಗಡೆ ಮಾಡಲಾಗಿದೆ. ಇದೀಗ 118ನೇ ಪುಸ್ತಕವಾಗಿ ‘ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ’ ಯನ್ನು ಬಿಡುಗಡೆಗೊಳಿಸಲಾಗಿದೆ ಎಂದರು. ಬಾಳೆಯಡ ಕಿಶನ್ ಪೂವಯ್ಯ ಅವರು ಕೇವಲ ವಕೀಲಿ ವೃತ್ತಿಯಲ್ಲಿ ಮಾತ್ರ ಪರಿಣಿತರಲ್ಲ, ತಮ್ಮ ಮೊನಚಾದ ಬರಹಗಳ ಮೂಲಕ ಸಮಾಜದ ಅಂಕುಡೊಂಕುಗಳ ಮೇಲೆ ಬೆಳಕು ಚೆಲ್ಲಿದ್ದಾರೆ. ಯಾರ ಮನಸ್ಸಿಗೂ ನೋವಾಗದ ರೀತಿಯಲ್ಲಿ ಪ್ರಸ್ತುತದ ಪರಿಸ್ಥಿತಿಯನ್ನು ಪುಸ್ತಕದಲ್ಲಿ ವಿವರಿಸಿದ್ದಾರೆ. ಮುಂದಿನ ಭವಿಷ್ಯದ ಯುವ ಪೀಳಿಗೆಯ ಮೇಲೆ ಬೀರುವ ದುಷ್ಪರಿಣಾಮ, ಕೊಡಗಿನ ಆಸ್ತಿಯೇ ಆಗಿರುವ ಪ್ರಕೃತಿಯ ವಿನಾಶ ಸೇರಿದಂತೆ ಹಲವು ವಿಚಾರಗಳನ್ನು ಪುಸ್ತಕದಲ್ಲಿ ಮನಮುಟ್ಟುವಂತೆ ವಿವರಿಸಿದ್ದಾರೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಹೇಳಿದರು. ಕಿಶನ್ ಪೂವಯ್ಯ ಅವರು ತಂದೆ ಬಾಳೆಯಡ ಚರ್ಮಣ್ಣ, ಶ್ರೀ ರಾಜರಾಜೇಶ್ವರಿ ದೇವಾಲಯ ಸಮಿತಿಯ ಟ್ರಸ್ಟಿ ದೇವರಾಜು (ಮಣಿ), ಪ್ರಮುಖರಾದ ಪಕ್ತಿ, ಸತೀಶ್, ಕಿರಣ್ ಕುಮಾರ್, ಪ್ರಧಾನ ಅರ್ಚಕ ಶ್ರೀನಿವಾಸ್ ಸ್ವಾಮಿ, ರಾಜರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ದಾಕ್ಷಾಯಿಣಿ ವಾಸುದೇವ್, ಭಕ್ತರಾದ ಸೂದನ ಹರೀಶ್, ಮೊಟ್ಟೇರ ಹೇಮಾವತಿ, ನೆರವಂಡ ಉಷಾ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.