Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಷ್ಟ್ರಪತಿಗಳಿಂದ ‘ಕಂದೀಲು’ ಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಭಾರತ

*ರಾಷ್ಟ್ರಪತಿಗಳಿಂದ ‘ಕಂದೀಲು’ ಚಿತ್ರದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ*

ಸೆಪ್ಟೆಂಬರ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.23 : ಸ್ವಸ್ತಿಕ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣಗೊಂಡಿರುವ ‘ಕಂದೀಲು’ ಕನ್ನಡ ಚಲನಚಿತ್ರಕ್ಕೆ ಚಿತ್ರದ ನಿರ್ದೇಶಕಿ ಕೊಡಗಿನ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ರಾಷ್ಟ್ರಪತಿಗಳಿಂದ ಇಂದು ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಪ್ರಾದೇಶಿಕ ಚಿತ್ರ ವಿಭಾಗಗಳಲ್ಲಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳ 13 ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಯಿತು. ಕೊಡಗು ಜಿಲ್ಲೆಯ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಕಂದೀಲು’ ಚಿತ್ರ ಫೀಚರ್ ಫಿಲ್ಮ್ ವಿಭಾಗದಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ‘ಕಂದೀಲು’ ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಬೆಳಕು ಚೆಲ್ಲಲಾಗಿದೆ. ‘ಕಂದೀಲು’ ಚಿತ್ರದ ಮೂಲಕ ರಾಷ್ಟ್ರೀಯ ಪ್ರಶಸ್ತಿಯನ್ನು ಗಳಿಸಿರುವ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ರಾಷ್ಟ್ರ ಪ್ರಶಸ್ತಿ ಪಡೆದ ಕೊಡಗಿನ ಮೊದಲ ಮಹಿಳಾ ನಿರ್ದೇಶಕಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ಪಡೆದು ಹರ್ಷ ವ್ಯಕ್ತಪಡಿಸಿದ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ಪತಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು ಇಡೀ ಚಿತ್ರತಂಡ ಹಾಗೂ ಕಲಾವಿದರ ಸಹಕಾರದಿಂದ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿದೆ. ಈ ಪ್ರಶಸ್ತಿ ಚಲನಚಿತ್ರ ರಂಗದಲ್ಲಿ ಮತ್ತಷ್ಟು ಸೇವೆಯನ್ನು ಸಲ್ಲಿಸಲು ಸ್ಫೂರ್ತಿ ತುಂಬಿದೆ ಎಂದರು. ಕೊಲ್ಕತ್ತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿದ್ದ “ಕಂದೀಲು” ಚಲನಚಿತ್ರ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಸಿನಿಮಾದ ಸ್ಪರ್ಧಾತ್ಮಕ ವಿಭಾಗದಲ್ಲಿ “2ನೇ ಅತ್ಯುತ್ತಮ ಚಿತ್ರ ಪ್ರಶಸ್ತಿ” ಯನ್ನು ತನ್ನದಾಗಿಸಿಕೊಂಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ಈ ಚಿತ್ರ ವಿಶ್ವ ವಿಖ್ಯಾತ ಮೈಸೂರು ದಸರಾ ಚಲನಚಿತ್ರೋತ್ಸವದಲ್ಲಿ ಇನಾಕ್ಸ್ ಚಿತ್ರಮಂದಿರದಲ್ಲಿ ಪ್ರದರ್ಶನಗೊಂಡು ಜನಮೆಚ್ಚುಗೆ ಪಡೆದುಕೊಂಡಿತ್ತು. ವಿಭಿನ್ನ ಕಥಾ ಹಂದರದ ‘ಕಂದೀಲು’ ಚಿತ್ರದ ಮುಖ್ಯಪಾತ್ರದಲ್ಲಿ ಪ್ರಭಾಕರ್ ಬಿ.ಕುಂದರ, ವಿನಿತಾ ರಾಜೇಶ್, ಗುರು ತೇಜಸ್, ಬಾಲ ನಟಿಯಾಗಿ ಈರಮಂಡ ಕುಷಿ ಕಾವೇರಮ್ಮ, ಚಂದ್ರಕಾಂತ್ ಕೋಟುಪಾಡಿ, ವೆಂಕಟೇಶ್ ಪಸಾದ್, ಹರಿಣಿ ವಿಜಯ್, ರಮೇಶ್ ಕೂಡ್ಲು, ಬಸವರಾಜ್, ಆಡುಗುಡಿ ಶ್ರೀನಿವಾಸ್, ಮಂಜುನಾಥ್, ಶಿವಕುಮಾರ್, ಹನುಮಂತ, ಜಿ.ಸಿ.ಪರಮೇಶ್ ಗೂಗರದೊಡ್ಡಿ, ದೊಡ್ಡಣ್ಣ, ಬಂಗಾರಶೆಟ್ಟಿ ಮುದುವಾಡಿ, ರತ್ನಾಕುಮಾರಿ, ರೋಹಿಣಿ ಮತ್ತಿತರರು ಅಭಿನಯಿಸಿದ್ದಾರೆ. ಶ್ರೀ ಸುರೇಶ್ ಸಂಗೀತ, ಪಿ.ವಿ.ಆರ್.ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದ್ದು, ಕಥೆ, ಸಂಕಲನ, ಸಂಭಾಷಣೆ ಎನ್.ನಾಗೇಶ್, ಚಿತ್ರಕಥೆ ಸ.ಹರೀಶ್ ಹಾಗೂ ಎನ್.ನಾಗೇಶ್ ಒದಗಿಸಿದ್ದಾರೆ. ಪ್ರಸನ್ನ ಪನಕನಹಳ್ಳಿ, ನಾಗರಾಜ್ ಡಿಕ್ಕಿ, ಇತಿಹಾಸ್ ಶಂಕರ್, ಕಲರಿಂಗ್ ಬುಟ್ಟಂಡ ನಿಖಿಲ್ ಕಾರ್ಯಪ್ಪ, ಕಲಾ ನಿರ್ದೇಶನ ಚೇತನ್ ಕೆಂಕೆರೆ, ಮೇಕಪ್ ಶಿವು, ಕಾಸ್ಟಿಮ್ ಡಿಸೈನರ್ ಸುಧಾ ಪ್ರೊಡಕ್ಸನ್ ಟೀಮ್ ಮೂರ್ತಿ, ಲೈಟಿಂಗ್ ಟೀಮ್ ಹೆಚ್‌ಎಸ್‌ಎಂ ಸಿನಿ ಸರ್ವಿಸ್, ಪೋಸ್ಟ್ ಪ್ರೊಡಕ್ಷನ್ ರಾಷ್ಟ್ರಕ್ ಮಿಡಿಯಾ ಸೆಲ್ಯೂಷನ್, ಪೋಸ್ಟ್ ಡಿಸೈನರ್ ದೇವು, ಪ್ರೊಡಕ್ಷನ್ ಡಿಸೈನರ್ ಪಿವಿಆರ್ ಸ್ವಾಮಿ ನಿರ್ವಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.