Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಸರಾ ಸಂಭ್ರಮದ ಜೊತೆ ಸುರಕ್ಷತೆಯಿರಲಿ : ಸಾರ್ವಜನಿಕರಿಗೆ ಸೆಸ್ಕ್‌ನಿಂದ ವಿಶೇಷ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಸರಾ ಸಂಭ್ರಮದ ಜೊತೆ ಸುರಕ್ಷತೆಯಿರಲಿ : ಸಾರ್ವಜನಿಕರಿಗೆ ಸೆಸ್ಕ್‌ನಿಂದ ವಿಶೇಷ ಮನವಿ*

ಸೆಪ್ಟೆಂಬರ್ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.24 NEWS DESK : ನಾಡಹಬ್ಬ ದಸರಾ ಮಹೋತ್ಸವದ ಹಿನ್ನಲೆಯಲ್ಲಿ ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್ ದೀಪಾಲಂಕಾರಗಳನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದಸರಾ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅತ್ಯಾಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ನಗರದ ಸೌಂದರ್ಯ ಹೆಚ್ಚಿಸುವ ದಸರೆಯ ಸಂಭ್ರಮ, ಸಡಗರವನ್ನು ಇಮ್ಮಡಿಗೊಳಿಸಲು ವಿದ್ಯುತ್ ದೀಪಾಲಂಕಾರ ವೀಕ್ಷಿಸಲು ಲಕ್ಷಾಂತರ ಜನ ಆಗಮಿಸುತ್ತಾರೆ. ಆದ್ದರಿಂದ ದೀಪಾಲಂಕಾರದ ಅಂದ ಕಣ್ತುಂಬಿಕೊಳ್ಳುವ ಸಂದರ್ಭದಲ್ಲಿ ಸುರಕ್ಷತೆಗೂ ಆದ್ಯತೆ ನೀಡುವುದು ಅತ್ಯಂತ ಅವಶ್ಯಕವಾಗಿದೆ ಎಂದು ಹೇಳಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಸೆಸ್ಕ್ ಆದ್ಯತೆ ನೀಡುತ್ತಿದೆ. ಆದರೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ. ಇದಕ್ಕಾಗಿ ನಿಗಮದ ವತಿಯಿಂದ ಸಾರ್ವಜನಿಕರ ಸುರಕ್ಷತೆಗೆ ಕೆಲವು ಸಲಹೆಗಳನ್ನು ನೀಡಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ದೀಪಾಲಂಕಾರದ ಸಂಭ್ರಮವನ್ನು ನಿರಾತಂಕವಾಗಿ ಆನಂದಿಸುವಂತೆ ಸೆಸ್ಕ್ ಪ್ರಕಟಣೆಯಲ್ಲಿ ಕೋರಿದೆ. ಸುರಕ್ಷತಾ ಸಲಹೆಗಳು: ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳುವುದು ದೀಪಾಲಂಕಾರದ ಕಂಬಗಳ ಹತ್ತಿರ ಫೋಟೋ/ವೀಡಿಯೋ ಶೂಟ್ ಮಾಡುವುದನ್ನು ತಪ್ಪಿಸಿ. ಮಳೆ ಸಂದರ್ಭದಲ್ಲಿ ವಿದ್ಯುತ್/ ದೀಪಾಲಂಕಾರದ ಕಂಬಗಳ ಹತ್ತಿರ ಹೋಗದೆ ಎಚ್ಚರವಹಿಸಿ. ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ದೀಪಾಲಂಕಾರಕ್ಕಾಗಿ ಕಂಬಗಳನ್ನು ಅಳವಡಿಸಿದ್ದು, ಕೆಲವು ಕಡೆಗಳಲ್ಲಿ ದೀಪಾಲಂಕಾರದ ಪ್ರತಿಕೃತಿಗಳನ್ನು ಇರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಮತ್ತು ಪಾದಚಾರಿಗಳು ಇವುಗಳನ್ನು ಗಮನಿಸಿ ಸುರಕ್ಷಿತವಾಗಿ ಸಂಚರಿಸಲು ಕೋರಲಾಗಿದೆ. ಗ್ರಾಹಕರು ಮತ್ತು ಸಾರ್ವಜನಿಕರ ಸುರಕ್ಷತೆಗೆ ಸೆಸ್ಕ್ ಪ್ರಥಮ ಆಧ್ಯತೆ ನೀಡುತ್ತದೆ. ಸಾರ್ವಜನಿಕರು ದಸರಾ ದೀಪಾಲಂಕಾರ ಕಣ್ತುಂಬಿಕೊಳ್ಳುವಾಗ ಸುರಕ್ಷತೆಗೂ ನಿಗಾವಹಿಸಬೇಕು. ಆದ್ದರಿಂದ ದೀಪಾಲಂಕಾರದ ಕಂಬಗಳನ್ನು ಮುಟ್ಟದೆ, ಅಂತರ ಕಾಯ್ದುಕೊಳ್ಳಬೇಕಿದೆ. ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ಹೆಚ್ಚಿನ ಮುಂಜಾಗ್ರತೆ ವಹಿಸಬೇಕು ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್(ವಿ) ಎಂ.ರಾಮಚಂದ್ರ ಅವರು ಕೋರಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.