Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಗಳ 158ನೇ ಜನ್ಮದಿನಾಚರಣೆ : ಕೊಡವ ನಾಟಕ ಪ್ರದರ್ಶನ ಕೇಂದ್ರದ ಸ್ಥಾಪನೆಯಾಗಲಿ : ಅಪ್ಪನೆರವಂಡ ಮನೋಜ್ ಮಂದಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿಗಳ 158ನೇ ಜನ್ಮದಿನಾಚರಣೆ : ಕೊಡವ ನಾಟಕ ಪ್ರದರ್ಶನ ಕೇಂದ್ರದ ಸ್ಥಾಪನೆಯಾಗಲಿ : ಅಪ್ಪನೆರವಂಡ ಮನೋಜ್ ಮಂದಪ್ಪ*

ಸೆಪ್ಟೆಂಬರ್ 24, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.24 NEWS DESK :  ಕೊಡಗಿನ ಕಾಳಿದಾಸ ಎಂದೇ ಪ್ರಖ್ಯಾತರಾಗಿರುವ ಕೊಡವ ಭಾಷಾ ಸಾಹಿತಿ ‘ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ’ಗಳ 158ನೇ ಜನ್ಮದಿನಾಚರಣೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು. ಅಲ್ಲಾರಂಡ ರಂಗಚಾವಡಿ ಮತ್ತು ಮಡಿಕೇರಿ ಕೊಡವ ಸಮಾಜದ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಅಪ್ಪಚ್ಚಕವಿ ಕಲಾಭವನ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ಅಪ್ಪನೆರವಂಡ ಮನೋಜ್ ಮಂದಪ್ಪ ಅಪ್ಪಚ್ಚ ಕವಿಯ ಭಾವ ಚಿತ್ರಕ್ಕೆ ಜ್ಯೋತಿಯನ್ನು ಬೆಳಗಿ, ‘ಮೀದಿ’ಯನ್ನಿರಿಸಿ ಉದ್ಘಾಟಿಸಿದರು. ಕೊಡವ ‘ನಾಟಕ ಪ್ರದರ್ಶನ ಕೇಂದ್ರ’ದ ಸ್ಥಾಪನೆಯಾಗಲಿ :: ಕಾರ್ಯಕ್ರಮ ಉದ್ಘಾಟಿಸಿದ ಅಪ್ಪನೆರವಂಡ ಮನೋಜ್ ಮಂದಪ್ಪ ಮಾತನಾಡಿ, ಕೊಡವ ಭಾಷಾ ಸಂಸ್ಕೃತಿ, ನಾಟಕಗಳ ಪ್ರದರ್ಶನ ಸಾಹಿತ್ಯಿಕವಾದ ಕಾರ್ಯಕ್ರಮಗಳಿಗಾಗಿ ಕೊಡವ ನಾಟಕ ಪ್ರದರ್ಶನ ಕೇಂದ್ರ (ಡ್ರಾಮಾ ಸೆಂಟರ್) ಸ್ಥಾಪನೆ ಅತ್ಯವಶ್ಯಕವಾಗಿ ಆಗಬೇಕಿದೆಯೆಂದು ಅಭಿಪ್ರಾಯಿಸಿದರು. ಶತಮಾನಗಳ ಹಿಂದೆ ಅತ್ಯಂತ ಸಂಕಷ್ಟದ ಬದುಕಿನ ನಡುವೆಯೂ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಕೊಡವ ಭಾಷೆಯಲ್ಲಿ ಸಾಕಷ್ಟು ಹಾಡುಗಳನ್ನು, ನಾಟಕಗಳನ್ನು ರಚಿಸುವ ಮೂಲಕ ಕೊಡವ ಭಾಷಾ ಆದಿ ಕವಿಯಾಗಿ ಗುರುತಿಸಿಕೊಂಡಿದ್ದಾರೆ. ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿಗಳ ಬೆಳವಣಿಗೆಗೆ ಪೂರಕವಾಗಿ ಕೊಡವ ನಾಟಕ ಪ್ರದರ್ಶನ ಕೇಂದ್ರದ ಅಗತ್ಯತೆ ಇರುವುದಾಗಿ ಅವರು ತಿಳಿಸಿದರು. ಮಡಿಕೇರಿ ತಾಲ್ಲೂಕಿನ ಪಾರಾಣೆ ಬಳಿಯ ಕಿರುಂದಾಡು ಗ್ರಾಮದಲ್ಲಿ 1868ರಲ್ಲಿ ಜನಿಸಿದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಅವರ ಕಾಲ ಘಟ್ಟದಲ್ಲಿ ಜಿಲ್ಲೆಯಲ್ಲಿ ಆರ್ಥಿಕ ಬೆಳೆೆ ಕಾಫಿಯಾಗಲಿ, ಸುಗಮ ಸಂಚಾರಕ್ಕೆ ಪೂರಕ ವ್ಯವಸ್ಥೆಗಳಾಗಲಿ ಇರಲಿಲ್ಲ. ಅಂತಹ ಸಂಕಷ್ಟದ ಸಂದರ್ಭದಲ್ಲು ಸಾಹಿತ್ಯದತ್ತ ಒಲವು ತೋರಿ, ನಾಟಕ ಮತ್ತು ಹಾಡುಗಳನ್ನು ರಚಿಸಿದರೆಂದು ಕವಿಯನ್ನು ಅವರು ಸ್ಮರಿಸಿದರು. :: ಸಾಕ್ಷ್ಯ ಚಿತ್ರ ಪ್ರದರ್ಶನ :: ಕಾರ್ಯಕ್ರಮದಲ್ಲಿ ಅಲ್ಲಾರಂಡ ವಿಠಲ ನಂಜಪ್ಪ ಅವರ ನಿರ್ಮಾಣ, ನಿರ್ದೇಶನದಲ್ಲಿ ಹೊರತರಲಾಗಿರುವ ‘ಹರದಾಸ ಅಪ್ಪಚ್ಚ ಕವಿ’ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು. ಇದರಲ್ಲಿ ಕವಿಯ ಬದುಕಿನ ಪಥವನ್ನು ಸರಳ ಸುಂದರವಾಗಿ ಪ್ರಸ್ತುತ ಪಡಿಸಲಾಗಿದೆ. :: ದೊರಕದ ಪ್ರೋತ್ಸಾಹ ಬೆಂಬಲ :: ಸಾಕ್ಷ್ಯ ಚಿತ್ರವನ್ನು ಉದ್ಘಾಟಿಸಿದ ಬರಹಗಾರ್ತಿ ಹಾಗೂ ಕೊಡವ ಭಾಷಾ ಚಲನ ಚಿತ್ರ ನಿಮಾಪಕಿ ಈರಮಂಡ ಹರಿಣಿ ವಿಜಯ್, ಅಪ್ಪನೆರವಂಡ ಅಪ್ಪಚ್ಚ ಕವಿಯ ಬದುಕಿನ ಘಟ್ಟಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಸಾಕ್ಷ್ಯ ಚಿತ್ರದ ಮೂಲಕ ಪ್ರತಿಬಿಂಬಿಸಲಾಗಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿ, ಕೊಡಗಿನ ಕೊಡವ ಭಾಷೆಯಲ್ಲಿ ರಚಿಸಿರುವ ಸಾಹಿತ್ಯಕ್ಕಾಗಲಿ,ಸಿನಿಮಾಗಳಿಗೆ ಇಂದಿಗೂ ಸೂಕ್ತ ಪ್ರೋತ್ಸಾಹ ಬೆಂಬಲಗಳು ದೊರಕುತ್ತಿಲ್ಲವೆಂದು ಅತೀವ ಬೇಸರವನ್ನು ಇದೇ ಸಂದರ್ಭ ವ್ಯಕ್ತಪಡಿಸಿದರು.
ಕೊಡವ ಭಾಷಾ ಸಾಹಿತಿಗೆ ಆತ್ಮೀಯ ಸನ್ಮಾನ- ಕೊಡವ ಭಾಷಾ ಸಾಹಿತಿ ನಾಗೇಶ್ ಕಾಲೂರು ಅವರನ್ನು ಅಲ್ಲಾರಂಡ ರಂಗ ಚಾವಡಿಯ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಸೇರಿದಂತೆ ಅಪ್ಪನೆರವಂಡ ಕುಟುಂಬಸ್ಥರು ಹಾಗೂ ಗಣ್ಯರು ಸನ್ಮಾನಿಸಿ ಗೌರವಿಸಿದರು. ಸಾಂಪ್ರದಾಯಿಕ ಉಡುಪುತೊಟ್ಟ ಸಾಹಿತಿ ನಾಗೇಶ್ ಕಾಲೂರು ಅವರನ್ನು ಕೊಡವ ಸಾಂಪ್ರದಾಯಿಕ ವಾಲಗದೊಂದಿಗೆ ವೇದಿಕೆಗೆ ಕರೆತಂದುದು ಗಮನ ಸೆಳೆಯಿತು. :: ರಾಜಕೀಯ ಕಾರಣಗಳಿಂದ ದ್ವೇಷ ಭಾವನೆ ::  ಸನ್ಮಾನ ಸ್ವೀಕರಿಸಿ ಮಾತನಾಡಿದ ನಾಗೇಶ್ ಕಾಲೂರು, ಕೊಡಗಿನ ಕುಲದೇವತೆ ಕಾವೇರಿ, ಲೋಕಕಲ್ಯಾಣಕ್ಕಾಗಿ ಅಗಸ್ತ್ಯರ ಕುಂಡಿಕೆಯಿಂದ ಹೊರ ಚಿಮ್ಮಿ ನದಿಯಾಗಿ ಹರಿದ ಕಾಲ ಘಟ್ಟದಿಂದಲು ಕೊಡಗಿನ ಕೊಡವರು ಮತ್ತು ಬ್ರಾಹ್ಮಣ ಸಮುದಾಯದ ನಡುವೆ ಅವಿನಾಭಾವ ಸಂಬಂಧಗಳಿವೆ. ಇಂದಿನ ಕಾಲ ಘಟ್ಟದಲ್ಲಿ ಜಾತಿ-ಜಾತಿಗಳ ನಡುವೆ ಮೂಡುತ್ತಿರುವ ದ್ವೇಷ ಭಾವನೆ ಕೇವಲ ರಾಜಕೀಯ ಕಾರಣಗಳಿಂದ ಮೂಡಿದೆಯೆಂದು ಅನಿಸಿಕೆ ವ್ಯಕ್ತಪಡಿಸಿದರು. ನಮ್ಮ ಆಚಾರ ವಿಚಾರ, ಸಂಪ್ರದಾಯಗಳು ನಮ್ಮಲ್ಲಿರಲಿ. ಇದೇ ಹಂತದಲ್ಲಿ ಮತ್ತೊಬ್ಬರ ಆಚಾರ ವಿಚಾರಗಳನ್ನು ಗೌರವಿಸುವ ಮನಸ್ಥಿತಿಯನ್ನು ಪ್ರತಿಯೊಬ್ಬರಲ್ಲು ಕಾಣುವ ಅಗತ್ಯವಿದೆ. ಇತರೆ ಜಾತಿಗಳ ದೂಷಣೆ, ಅಪಹಾಸ್ಯ ಎಂದಿಗೂ ಸಲ್ಲ ಮತ್ತು ನಮ್ಮ ನಂಬುಗೆ ವಿಚಾರಗನ್ನು ಇತರರ ಮೇಲೆ ಹೇರುವುದು ಒಳ್ಳೆಯದಲ್ಲ. ಇದಕ್ಕೆ ಒದಲಾಗಿ ಪರಸ್ಪರರನ್ನು ಗೌರವಿಸಿದಾಗ ಮಾತ್ರ ನಮ್ಮ ಗೌರವ ಹೆಚ್ಚುತ್ತದೆಂದು ದೃಢವಾಗಿ ನುಡಿದರು. :: ಪುಸ್ತಕಗಳ ವಿಮರ್ಶೆ ::  ಕಾರ್ಯಕ್ರಮದ ಭಾಗವಾಗಿ ಉಳ್ಳಿಯಡ ಡಾಟಿ ಪೂವಯ್ಯ ಅವರು ಬರೆದ ‘ತೇನೆತ್ತಕಾರ’, ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಅವರು ರಚಿಸಿರುವ ‘ನೆಲಂಜಪ್ಪೆ’, ದಿ.ಪಳಂಗಂಡ ಚಂಗಪ್ಪ ಅವರ ಅನುವಾದ ಕೃತಿ ‘ಕೊಡಗ್‌ರ ಗೌರಮ್ಮಂಡ ಕಥೆ ಮೊತ್ತೆ’ ಪುಸ್ತಕಗಳ ಕುರಿತು ಕಲಿಯಂಡ ಸರಸ್ವತಿ ಚಂಗಪ್ಪ, ಮಾಳೇಟಿರ ಸೀತಮ್ಮ, ಐಚಂಡ ರಸ್ಮಿ ಮೇದಪ್ಪ ಅವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಅಲ್ಲಾರಂಡ ರಂಗ ಚಾವಡಿ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ 23 ವರ್ಷಗಳಿಂದ ರಂಗ ಚಾವಡಿ ಕೊಡವ ಭಾಷಾ ಸಾಹಿತ್ಯದ ಬೆಳವಣಿಗೆಯ ಚಿಂತನೆಯೊಂದಿಗೆ, ಪ್ರಗತಿಪರವಾದ ಕಾರ್ಯಕ್ರಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಅಪ್ಪಚ್ಚ ಕವಿ ಅವರ ಸಾಹಿತ್ಯಿಕ ಬೆಳವಣಿಗೆಗೆ ವೆಂಕಟಾದ್ರಿ ಶಾಮರಾವ್, ಕಿರುಂದಾಡು ಸಾವಿತ್ರಿ ಮೊದಲಾದವರು ಸಹಕರಿಸಿದ್ದರು. ಈ ಹಿನ್ನೆಲೆಯಲ್ಲಿ ಕೊಡವ ಭಾಷಾ ಸಾಹಿತ್ಯಕ್ಕೆ ಕೊಡುಗೆ ನೀಡುತ್ತಿರುವ ನಾಗೇಶ್ ಕಾಲೂರು ಅವರನ್ನು ಸನ್ಮಾನಿಸಿರುವುದಾಗಿ ತಿಳಿಸಿದರು.  ಮಡಿಕೇರಿ ಕೊಡವ ಸಮಾಜದ ನಿರ್ದೇಶಕಿ ಬೊಪ್ಪಂಡ ಸರಳ ಕರುಂಬಯ್ಯ ಅವರು ಅಪ್ಪನೆರವಂಡ ಅಪ್ಪಚ್ಚ ಕವಿಗಳು ರಚಿಸಿದ ‘ಶಂಭುವೇ ನಿನ್ನ ನಂಬಿಯೆ ನಾ’ ಹಾಡನ್ನು ಸುಮಧುರವಾಗಿ ಹಾಡಿದರು. ಲೇಖಕಿ ಬೊಟ್ಟೋಳಂಡ ನಿವ್ಯ ದೇವಯ್ಯ ಕಾರ್ಯಕ್ರಮ ನಿರೂಪಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.