Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೋಣಿಕೊಪ್ಪದಲ್ಲಿ ಗಮನ ಸೆಳೆದ ಕಿವುಡರ ಇಂಟರ್ ಶಾಲಾ ಅಥ್ಲೆಟಿಕ್ ಚಾಂಪಿಯನ್ ಶಿಪ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೋಣಿಕೊಪ್ಪದಲ್ಲಿ ಗಮನ ಸೆಳೆದ ಕಿವುಡರ ಇಂಟರ್ ಶಾಲಾ ಅಥ್ಲೆಟಿಕ್ ಚಾಂಪಿಯನ್ ಶಿಪ್*

ಸೆಪ್ಟೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.24 NEWS DESK : ಗೋಣಿಕೊಪ್ಪ ಕಾಲ್ಸ್ ಶಾಲಾ ಮೈದಾನದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘ ಹಾಗೂ ಕರ್ನಾಟಕ ಕಿವುಡರ ಕ್ರೀಡಾ ಒಕ್ಕೂಟದ ವತಿಯಿಂದ 1ನೇ ಕರ್ನಾಟಕ ರಾಜ್ಯ ಕಿವುಡರ ಇಂಟರ್ ಶಾಲಾ ಅಥ್ಲೆಟಿಕ್ ಚಾಂಪಿಯನ್‍ಶಿಪ್ ಕ್ರೀಡಾಕೂಟ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳಾದ ಬಾಗಲಕೋಟೆ, ಗದಗ, ಕೋಲಾರ, ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು ಸೇರಿದಂತೆ 16 ಜಿಲ್ಲೆಯ ಶಾಲೆಗಳ ಒಟ್ಟು 250 ವಿಶೇಷಚೇತನ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ 800ಮೀ, 400ಮೀ, 200ಮೀ, 100 ಮೀ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಭಾರದ ಗುಂಡು ಎಸೆತ ಇನ್ನಿತರ ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಕ್ರೀಡೆಯಲ್ಲಿ ಜಯಗಳಿಸಿದ ವಿಶೇಷಚೇತನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಪದಕವನ್ನು ಸಂಸ್ಥೆಯ ವತಿಯಿಂದ ನೀಡಲಾಯಿತು. ಕ್ರೀಡಾಕೂಟವನ್ನು ಕಾಲ್ಸ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲರಾದ ಗೌರಮ್ಮ ನಾಚಪ್ಪ ಶುಭ ಹಾರೈಸಿದರು. ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾದ ಗೌರು ಸೋಮಣ್ಣ ಮಾತನಾಡಿ, ಈ ರೀತಿಯ ಕ್ರೀಡೆಗಳಿಂದ ವಿಶೇಷ ಚೇತನ ಮಕ್ಕಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಸಿಗುವಂತಾಗುತ್ತದೆ, ಸರ್ಕಾರದಿಂದ ಈ ರೀತಿಯ ಕ್ರೀಡಾಕೂಟಗಳಿಗೆ ಅನುದಾನ ದೊರೆತರೆ ಇನ್ನೂ ದೊಡ್ಡ ಮಟ್ಟದಲ್ಲಿ ಕ್ರೀಡಾಕೂಟ ನಡೆಸಲು ಸಾಧ್ಯವಾಗುತ್ತದೆ ಎಂದರು. ಕೊಡಗು ಜಿಲ್ಲಾ ಕಿವುಡರ ಗೌರವ ಅಧ್ಯಕ್ಷರಾದ ಜೋಸೆಫ್ ಶ್ಯಾಮ್ ಮಾತನಾಡಿ, ಜಿಲ್ಲಾ ಕಿವುಡರ ಸಂಘದಿಂದ ರಾಜ್ಯಮಟ್ಟದ ಕ್ರೀಡಾಕೂಟ ನಡೆಸಲು ಕೊಡಗಿನ ದಾನಿಗಳ ಸಹಕಾರದಿಂದ ಸಾಧ್ಯವಾಯಿತು ಎಂದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ವಿರಾಜಪೇಟೆಯ ಲಿಟಲ್ ಸ್ಕಾಲರ್ ಅಕಾಡೆಮಿ ಮುಖ್ಯಸ್ಥರಾದ ಪೂಜಾ ಸಜೆಸ್ ಅವರು ಪ್ರಶಸ್ತಿ ಪಡೆದ ಮಕ್ಕಳಿಗೆ ಶುಭ ಹಾರೈಸಿದರು. ಕ್ರೀಡಾಕೂಟದಲ್ಲಿ ಮೈಸೂರು ಜಿಲ್ಲೆಯ ತಂಡ 23 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಪ್ರಥಮ ಸ್ಥಾನ ಪಡೆದು ಚಾಂಪಿಯನ್ ಆದರೆ, ದಾವಣಗೆರೆ ಹಾಗೂ ಮಂಡ್ಯ ತಂಡ ತಲಾ 13 ಅಂಕ ಪಡೆಯುವ ಮೂಲಕ ಸಮಬಲದ ಹೋರಾಟದಲ್ಲಿ ಅಂತಿಮವಾಗಿ ದಾವಣಗೆರೆ ದ್ವಿತೀಯ ಸ್ಥಾನ ಪಡೆದು ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರು ಹಾಗೂ ಮಂಡ್ಯ ತೃತೀಯ ಸ್ಥಾನ ಪಡೆದುಕೊಂಡಿತು. ಈ ಸಂದರ್ಭ ಆಲ್ ಇಂಡಿಯಾ ಕಿವುಡರ ಒಕ್ಕೂಟದ ಅಧ್ಯಕ್ಷರಾದ ಕುಮಾರ್ ವಿ, ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಕಾರ್ಯದರ್ಶಿ ನವೀನ್ ಕುಮಾರ್ ಜಿ.ಎಸ್, ಗೋಣಿಕೊಪ್ಪ ಲಯನ್ಸ್ ಕ್ಲಬ್ ಕಾರ್ಯದರ್ಶಿ ಸೌಮ್ಯ ಎಂ.ಬಿ, ಕೊಡಗು ಕಾಫಿ ಎಸ್ಟೇಟ್ ಮಾಲೀಕರಾದ ಪಳಂಗಪ್ಪ ಕೆ.ಎಸ್, ರಾಜ್ಯ ಕಿವುಡರ ಒಕ್ಕೂಟದ ಅಧ್ಯಕ್ಷರಾದ ಎಂ.ಕಂಡ್ಕೂರ್ ಹಾಗೂ ಕೋಶಾಧಿಕಾರಿ ಸುರೇಶ್, ಆಯಿಷಾ, ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ್ ನಾರಾಯಣ, ಚೆರ್‍ಮೆನ್ ಜೋಸೆಫ್ ಸಾಮ್, ಪ್ರಧಾನ ಕಾರ್ಯದರ್ಶಿ ರಂಜಿತ್ ಪುದಿಯತಂಡ, ಖಜಾಂಚಿ ಕೆ.ಎ.ಸುರೇಶ್ ಸೇರಿದಂತೆ ಕೊಡಗು ಕಿವುಡರ ಸಂಘದ ಪದಾಧಿಕಾರಿಗಳು ಹಾಗೂ ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಸದಸ್ಯರು 16 ಶಾಲೆಗಳ ಶಿಕ್ಷಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.