Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*
  • *ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 
  • *ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 
  • *ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಯಾಮರಣ ನೀಡಲು ಹೊಸಳ್ಳಿ ಗ್ರಾಮಸ್ಥರ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಯಾಮರಣ ನೀಡಲು ಹೊಸಳ್ಳಿ ಗ್ರಾಮಸ್ಥರ ಆಗ್ರಹ*

ಸೆಪ್ಟೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಸೆ.25 : ಸೋಮವಾರಪೇಟೆ ತಾಲ್ಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಲವು ಕಲ್ಲುಗಣಿಗಾರಿಕೆ ಅಕ್ರಮವಾಗಿದೆ. ಅವೈಜ್ಞಾನಿಕ ನಿರ್ವಹಣೆಯಿಂದಾಗಿ ವಾತಾವರಣ ಕಲುಷಿತಗೊಂಡು ಗ್ರಾಮದ ಶೇ.90ರಷ್ಟು ಮಂದಿಗೆ ಶ್ವಾಸಕೋಶದ ತೊಂದರೆ ಎದುರಾಗಿದೆ ಎಂದು ಹೊಸಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕಲ್ಲುಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಬೇಕು, ಇಲ್ಲದಿದ್ದಲ್ಲಿ ದಯಾಮರಣ ನೀಡಿ ಎಂದು ಗ್ರಾಮಸ್ಥರು ವಿವಿಧ ಇಲಾಖಾ ಅಧಿಕಾರಿಗಳ ಎದುರು ಅಸಹಾಯಕತೆ ವ್ಯಕ್ತಪಡಿಸಿದರು. ತಾಲ್ಲೂಕು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರ ನೇತೃತ್ವದಲ್ಲಿ, ವಿವಿಧ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಹೊಸಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ, ಕಲ್ಲುಗಣಿಗಾರಿಕೆಯ ವಿರುದ್ಧ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಲುಗಣಿಗಾರಿಕೆಯಿಂದ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದ್ದು, ಭಾರೀ ಸಮಸ್ಯೆ ಸೃಷ್ಟಿಯಾಗಿದೆ. ಅತೀ ಹೆಚ್ಚು ಭಾರದ ವಾಹನಗಳ ಸಂಚಾರದಿಂದ ರಸ್ತೆಗಳು ಹದಗೆಟ್ಟಿವೆ. ಇಲ್ಲಿನ ಜನರ ಬದುಕು ದುಸ್ತರವಾಗಿದೆ ಎಂದು ಗ್ರಾಮಸ್ಥರು ಅಧಿಕಾರಿಗಳೆದುರು ಅಳಲು ತೋಡಿಕೊಂಡರು. ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ಕಳೆದ ಹಲವು ವರ್ಷಗಳಿಂದ ಸಂಬಂಧಪಟ್ಟ ಇಲಾಖೆಗೆ ದೂರು ಸಲ್ಲಿಸಿದ್ದರೂ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರ ಯಾವುದೇ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದರು. ಗ್ರಾಮೀಣ ರಸ್ತೆಯಲ್ಲಿ ಹತ್ತು ಚಕ್ರದ ಟಿಪ್ಪರ್‌ಗಳು ಓಡಾಡುತ್ತಿವೆ. ಸಂಜೆ ವೇಳೆ ಎಲ್ಲಾ ಕೋರೆಗಳಲ್ಲಿ ಸ್ಫೋಟಕ ಬಳಸಲಾಗುತ್ತಿದೆ. ಅಕ್ಕಪಕ್ಕದ ಮನೆಗಳು ಬಿರುಕು ಬಿಟ್ಟಿವೆ, ಕ್ರಷರ್‌ಗಳಿಂದ ಧೂಳು ಬರುತ್ತಿದ್ದು, ವ್ಯವಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಶ್ವಾಸಕೋಶದ ಸಮಸ್ಯೆಯಿಂದ ಜನರ ಜೀವನ ನರಕವಾಗಿದೆ. ಅಧಿಕಾರಿಗಳೇ ಮುತುವರ್ಜಿ ವಹಿಸಿ ಈ ಭಾಗದ ಗ್ರಾಮಸ್ಥರ ಆರೋಗ್ಯ ತಪಾಸಣೆ ಮಾಡಿ ಎಂದು ಒತ್ತಾಯಿಸಿದರು. ಈ ಭಾಗದಲ್ಲಿ ಸಿ ಮತ್ತು ಡಿ ವರ್ಗದ ಜಮೀನಿದೆ, ಪರಿಸರ ಸೂಕ್ಮ ವಲಯ ಎಂದು ಗುರುತಿಸಲ್ಪಟ್ಟಿರುವ ಜೇನುಕಲ್ಲು ಬೆಟ್ಟ ಹತ್ತಿರದಲ್ಲೇ ಇದೆ. ಕ್ರಷರ್‌ಗೆ ಸಂಬಂಧಿಸಿದಂತೆ ಹತ್ತಾರು ನಿಯಮಗಳಿದ್ದರೂ, ಎಲ್ಲವನ್ನೂ ಗಾಳಿಗೆ ತೂರಿ ಗಣಿಗಾರಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಸಭೆಯಲ್ಲಿ ಕೇಳಿ ಬಂದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಿ, ಕಾನೂನಿನನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ತಿಳಿಸಿದರು. ಈಗಲೇ ಗಣಿಗಾರಿಕೆ ನಡೆಯುತ್ತಿರುವ ಸ್ಥಳವನ್ನು ಪರಿಶೀಲನೆ ಮಾಡಿ ಎಂದು ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದರು. ಗ್ರಾಮಸ್ಥರ ಕೋರಿಕೆಯಂತೆ ಎಲ್ಲಾ ಗಣಿಗಾರಿಕೆ ಸ್ಥಳವನ್ನು ಪರಿಶೀಲನೆ ಮಾಡಲಾಯಿತು. ದಾಖಲೆ ಪರಿಶೀಲಿಸಿ ನಿಯಮ ಬಾಹಿರವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ತಹಶೀಲ್ದಾರ್ ಕೃಷ್ಣಮೂರ್ತಿ ಆದೇಶಿಸಿದರು. ಬಾಕಿ ಉಳಿದ ಕೋರೆಗಳನ್ನು ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೇ ನಡೆಸಿ, ಲೋಪದೋಷ ಕಂಡು ಬಂದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಕೃಷ್ಣಮೂರ್ತಿ ಭರವಸೆ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್, ಠಾಣಾಧಿಕಾರಿ ಮುದ್ದುಮಹದೇವ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ರೋಜಾ, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಕುಮಾರ್, ಆರ್.ಟಿ.ಓ., ಸರ್ವೇ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 3: ವಲಯ ಮಟ್ಟದ ಕ್ರೀಡಾಕೂಟಗಳಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ದ್ವಿತೀಯ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಅಥ್ಲೆಟಿಕ್ಸ್‌ : ಕಾವೇರಿ ಶಾಲಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಸೆಪ್ಟೆಂಬರ್ 2, 2026

*ವಲಯ ಮಟ್ಟದ ಕ್ರೀಡಾ ಕೂಟ : ಖೋ ಖೋ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ರನ್ನರ್ಸ್ ಆದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿ : ವಿಜೇತರಾದ ಕಾವೇರಿ ಶಾಲಾ ತಂಡ* 

ಸೆಪ್ಟೆಂಬರ್ 2, 2026

*ಸೆ.5 ರಂದು ಪ್ರಜಾಸೇವಾ ಆಂದೋಲನಾ ಸಭೆ*

ಸೆಪ್ಟೆಂಬರ್ 2, 2026

*ಸೆ.5 ಮತ್ತು 6 ರಂದು ಮಡಿಕೇರಿಯಲ್ಲಿ ‘KOA-MYCON’ ಮಧ್ಯವಾರ್ಷಿಕ ಸಮ್ಮೇಳನ*

ಸೆಪ್ಟೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.