Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ರೆಸಾರ್ಟ್, ಹೋಟೆಲ್, ಹೊಂ-ಸ್ಟೇ ಮಾಲೀಕರ ಗಮನಕ್ಕೆ : ಈ ನಿಯಮಗಳ ಪಾಲನೆ ಕಡ್ಡಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ರೆಸಾರ್ಟ್, ಹೋಟೆಲ್, ಹೊಂ-ಸ್ಟೇ ಮಾಲೀಕರ ಗಮನಕ್ಕೆ : ಈ ನಿಯಮಗಳ ಪಾಲನೆ ಕಡ್ಡಾಯ*

ಸೆಪ್ಟೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.25 NEWS DESK : ಸೆಪ್ಟೆಂಬರ್ 22 ರಿಂದ ಅ.2 ರವರೆಗೆ 2025 ನೇ ಸಾಲಿನ ದಸರಾ ಉತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದಾರೆ. ಪ್ರವಾಸಿಗರು ತಂಗುವ ಹೋಂ-ಸ್ಟೇ/ ರೆಸಾರ್ಟ್/ ಹೋಟೆಲ್-ಲಾಡ್ಜ್ ಗಳಲ್ಲಿ ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರೆಸಾರ್ಟ್/ ಹೋಟೆಲ್/ ಹೊಂ-ಸ್ಟೇ ಮಾಲೀಕರಿಗೆ ಸೂಚಿಸುವಂತೆ ಉಲ್ಲೇಖಿತ ಸಭೆಯಲ್ಲಿ ತಿರ್ಮಾನಿಸಲಾಗಿದೆ. ಅದರಂತೆ ಜಿಲ್ಲೆಯ ಎಲ್ಲ ರೆಸಾರ್ಟ್/ ಹೋಟೆಲ್/ ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸಾ ಪಾಸ್ ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು. ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು. ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ ಬಗ್ಗೆ ತಿಳಿಸುವುದು. ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಎಚ್ಚರಿಕೆ ವಹಿಸುವುದು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಹಾಗೂ ಬೆಂಕಿ ನಂದಕವನ್ನು ಕಡ್ಡಾಯವಾಗಿ ಅಳವಡಿಸುವುದು.ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವುದು, ಸಿ.ಸಿ ಟಿವಿಯ 45 ದಿನಗಳ ಫೂಟೇಜ್‍ಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು ಹಾಗೂ ಸಿಸಿ ಟಿವಿಯನ್ನು ಸರಿಯಾಗಿ ನಿರ್ವಹಿಸುವುದು. ಹಾಗೂ “ನೀವು ಸಿಸಿಟಿವಿ ಕಣ್ಗಾವಲಿನಲ್ಲಿರುತ್ತೀರಿ” ಎಂಬ ಫಲಕವನ್ನು ಕಡ್ಡಾಯವಾಗಿ ಅಳವಡಿಸುವುದು. ಯಾವುದೇ ಅಹಿತಕರ ಘಟನೆ ಅಥವಾ ತಪ್ಪುಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಸರ್ಕಾರದ ಗಮನಕ್ಕೆ ತರತಕ್ಕದ್ದು, ಇಲ್ಲವಾದಲ್ಲಿ ಮಾಲೀಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕಾನೂನು ಕ್ರಮಕೈಗೊಳ್ಳುವುದು. ಯಾವುದೇ ಮಾದಕ ವಸ್ತುಗಳು ಹಾಗೂ ಮದ್ಯಪಾನ ಇತ್ಯಾದಿಗಳಿಗೆ ಅವಕಾಶ ನೀಡದಂತೆ ಕ್ರಮವಹಿಸುವುದು. ಅ.1 ರಂದು ಸಂಜೆ 6 ರಿಂದ ಅಕ್ಟೋಬರ್ 3 ರ ಮುಂಜಾನೆ 6 ರ ತನಕ ದಸರಾ ಹಾಗೂ ಗಾಂಧಿ ಜಯಂತಿ ಇರುವ ಹಿನ್ನೆಲೆಯಲ್ಲಿ ಎಲ್ಲ ಮದ್ಯ ಮಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಈ ಕಾರಣ ಯಾವುದೇ ಮದ್ಯದ ಬಾಟಲ್‍ಗಳನ್ನು ಹಾಗೂ ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸಂಗ್ರಹಣೆ/ಬಳಕೆ/ಮಾರಾಟ ಮಾಡುವಂತಿಲ್ಲ. ಹಾಗೂ ಮದ್ಯಪಾನ ಮಾಡಿ ಬಂದ/ ಸಂಗ್ರಹಣೆ ಮಾಡಿಕೊಂಡ ಬಂದಂತಹ ಪ್ರವಾಸಿಗರಿಗೆ ಕೊಠಡಿಗಳನ್ನು ನೀಡಲು ನಿರಾಕರಿಸುವುದು. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅವರ ಪರವಾನಿಗೆ ರದ್ದುಗೊಳಿಸಲಾಗುವುದು ಹಾಗೂ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಡ್ಡಾಯವಾಗಿ ಒಣತ್ಯಾಜ್ಯ ಹಾಗೂ ಹಸಿ ತ್ಯಾಜ್ಯಗಳ ಸಂಗ್ರಹಣೆಗೆ ಪ್ರತ್ಯೇಕ ಕಸದ ಬುಟ್ಟಿಗಳನ್ನು ಇಡುವುದು. ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ 2 ಲೀಟರ್‍ಗಳಿಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಿದ್ದು, ಅದರಂತೆ ಸೂಕ್ತ ಕ್ರಮ ವಹಿಸುವುದು. ದಯವಿಟ್ಟು ಯಾವುದೇ ಪ್ರವಾಸಿಗರು ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಲು ಪ್ರೋತ್ಸಾಹಿಸಬಾರದು. ತುರ್ತು ಸಮಯದಲ್ಲಿ 24×7 ಕಾರ್ಯನಿರ್ವಹಿಸುವ ಜಿಲ್ಲಾಧಿಕಾರಿ ಅವರ ಕಚೇರಿ ಸಹಾಯವಾಣಿ ಸಂಖ್ಯೆ 08272-221077, 08272-221099, ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ: 9480804900, 08272-228330 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಬಿ.ಬಸಪ್ಪ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.