Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಾಪುರ ಕಾಲೇಜಿನ ಎನ್‍ಎಸ್‍ಎಸ್ ಶಿಬಿರ : ಅಚ್ಚರಿ ಹುಟ್ಟಿಸಿದ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಾಪುರ ಕಾಲೇಜಿನ ಎನ್‍ಎಸ್‍ಎಸ್ ಶಿಬಿರ : ಅಚ್ಚರಿ ಹುಟ್ಟಿಸಿದ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ*

ಸೆಪ್ಟೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ, ಸೆ.25 NEWS DESK : ಸಮಾಜದಲ್ಲಿ ಮೌಢ್ಯಾಚರಣೆ ಹೆಸರಿನಲ್ಲಿ ಕೆಲವು ದೇವಮಾನವ ರೆಂಬ ಸೋಗಿನಲ್ಲಿ ಜನರಿಗೆ ಮೋಸ, ವಂಚನೆ ಮಾಡುತ್ತಿರುವುದು ಕಂಡುಬರುತ್ತಿದೆ. ಕೆಲವು ಮುಗ್ಧರು ಇದನ್ನು ನಂಬಿ ಶೋಷಣೆಗೆ ಒಳಗಾಗು ತ್ತಿದ್ದಾರೆ. ಇಂತಹ ಶೋಷಣೆಯನ್ನು ತಡೆಗಟ್ಟುವ ದಿಸೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಶಿಕ್ಷಣ ಸಂಸ್ಥೆಗಳು ಮತ್ತು ಪ್ರಗತಿಪರ ಸಂಘಟನೆಗಳು ಮುಂದಾಗಬೇಕಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಹಾಗೂ ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಅಧ್ಯಾಪಕ ಎಂ.ಎನ್.ವೆಂಕಟನಾಯಕ್ ಹೇಳಿದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಮಾದಾಪುರ ಶ್ರೀಮತಿ ಡಿ.ಚನ್ನಮ್ಮ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ( ಎನ್‍ಎಸ್‍ಎಸ್ ) ಘಟಕದ ವತಿಯಿಂದ “ನಶಮುಕ್ತ ಭಾರತ ಅಭಿಯಾನ:2025” ಎಂಬ ಕೇಂದ್ರ ವಿಷಯದಡಿ ಗರಗಂದೂರು ಗ್ರಾಮದಲ್ಲಿ ಎನ್‍ಎಸ್‍ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಏರ್ಪಡಿಸಿದ್ದ
ಪವಾಡ ರಹಸ್ಯ ಬಯಲು ಕಾರ್ಯಕ್ರಮ ದಲ್ಲಿ ವಿವಿಧ ಪವಾಡಗಳ ಪ್ರಾತ್ಯಕ್ಷಿಕೆಗಳನ್ನು ನಡೆಸಿಕೊಡುವ ಮೂಲಕ ಪವಾಡಗಳ ಹಿಂದಿರುವ ಸತ್ಯ ಹಾಗೂ ವೈಜ್ಞಾನಿಕ ಕಾರಣಗಳ ಕುರಿತು ಮಾಹಿತಿ ನೀಡಿದರು.  ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವನೆ ಬೆಳೆಸಿಕೊಂಡು ಪವಾಡಗಳ ಹಿಂದಿರುವ ವೈಜ್ಞಾನಿಕ ಸತ್ಯವನ್ನು ಜನರಿಗೆ ತಿಳಿಸಬೇಕು ಎಂದರು. ಶೂನ್ಯದಿಂದ ಬೂದಿ, ನೀರು ಸೃಷ್ಟಿ ಮತ್ತಿತರ ಪವಾಡಗಳ ಹಿಂದಿರುವ ವೈಜ್ಞಾನಿಕ ಕಾರಣಗಳನ್ನು ವಿದ್ಯಾರ್ಥಿಗಳಿಗೆ‌ ಮನವರಿಕೆ ಮಾಡಿಕೊಟ್ಟರು. ತಮ್ಮ ಬಾಯಿಯಲ್ಲಿ ಮತ್ತು ಕೈಯಲ್ಲಿ ಕರ್ಪೂರ ಹಚ್ಚಿ ಅದು ಉರಿಯುತ್ತಿದ್ದಂತೆ ಅಚ್ಚರಿಯೊಂದಿಗೆ ನೆರೆದಿದ್ದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂತೋಷ ವಕ್ತಪಡಿಸಿದರು. ಕೈ ಗಳಿಗೆ ಬಣ್ಣ ಹಚ್ಚಿ ಮೋಸ ಮಾಡುವ ಹಿಂದಿರುವ ಸತ್ಯವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ನಾವು ಯಾವಾಗಲೂ ಬದುಕಿನಲ್ಲಿ ನಡೆಯುವ ಘಟನೆಗಳನ್ನ ತರ್ಕಗಳ ಆಧಾರದ ಮೇಲೆ, ಕಾರಣಗಳ ಮೇಲೆ ವಿಶ್ಲೇಷಿಸುವ ಪ್ರಯತ್ನ ಮಾಡುತ್ತಲೇ ಇರಬೇಕು. ಪವಾಡಗಳ‌ನ್ನು ಮಾಡುವ ಮೂಲಕ ಜನರಿಗೆ ಮೋಸ, ವಂಚನೆ ಮಾಡುವವರ ವಿರುದ್ಧ ಧ್ವನಿಯೆತ್ತಿ ಹೋರಾಟ ಮಾಡಬೇಕು ಎಂದು ವೆಂಕಟನಾಯಕ್ ಹೇಳಿದರು. “ವೈಜ್ಞಾನಿಕ ಮನೋಭಾವ ಬೆಳವಣಿಗೆ” ಕುರಿತು ಮಾಹಿತಿ ನೀಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಾಗೂ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಹಾಗೂ ವಿಜ್ಞಾನ ವಿಷಯದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಸಮಾಜದಲ್ಲಿ ಬೇರೂರಿರುವ ಕಂದಾಚಾರ, ಅಂಧಶ್ರದ್ಧೆ ಹಾಗೂ ಮೌಢ್ಯಾಚರಣೆ ನಿರ್ಮೂಲನೆ ಬಗ್ಗೆ ಜನಜಾಗೃತಿ ಮೂಡಿಸಲು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಪವಾಡ ರಹಸ್ಯ ಬಯಲು ಕಾರ್ಯಕ್ರಮದ ಮೂಲಕ ಪವಾಡಗಳ ಹಿಂದಿರುವ ವೈಜ್ಞಾನಿಕ ಸತ್ಯವನ್ನು ಜನರಿಗೆ‌ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು. ವಿದ್ಯಾರ್ಥಿಗಳು ಕಲಿಕೆಯ ಹಂತದಲ್ಲಿ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು.ತಮಗೆ ಇದ್ದ ಸಮಸ್ಯೆಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಪರಿಹಾರ ಹುಡುಕಿಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಪ್ರೇಮಕುಮಾರ್ ಹೇಳಿದರು. ಕಾಲೇಜಿನ ಪ್ರಾಂಶುಪಾಲ ಸಿ.ಜಿ.ಮಂದಪ್ಪ ಮಾತನಾಡಿ, ಯಾವುದೇ ಸಮಸ್ಯೆಯನ್ನು ನಾವು ವೈಜ್ಞಾನಿಕವಾಗಿ ಚಿಂತನೆ ಮಾಡಿದರೆ. ಅದಕ್ಕೆ ಪರಿಹಾರವನ್ನು ಸುಲಭವಾಗಿ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ಕೆ.ವಿ. ರಾಜಸುಂದರಂ ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿ ಎನ್.ಎನ್. ಮನೋಹರ್, ಹರದೂರು ಗ್ರಾಮ ಪಂಚಾಯತಿ ಸದಸ್ಯೆ ಉಷಾ ಇದ್ದರು. :: ಸಂವಾದ :: ಪವಾಡ ರಹಸ್ಯ ಕಾರ್ಯಕ್ರಮದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ವೆಂಕಟನಾಯಕ್ ಅವರೊಂದಿಗೆ ಎನ್ನೆಸ್ಸೆಸ್ ಶಿಬಿರಾರ್ಥಿಗಳು ಪವಾಡಗಳ ಹಿಂದಿರುವ ರಹಸ್ಯಗಳ ಬಗ್ಗೆ ಹಲವಾರು ಪ್ರಶ್ನೆಗಳನ್ನು ಕೇಳುವ‌ ಮೂಲಕ ತಮ್ಮ ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.