
ಮಡಿಕೇರಿ ಸೆ.25 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಅರ್ಜಿ ಸಲ್ಲಿಸಬಹುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಶಿಕ್ಷಕರು, ನಿವೃತ್ತ ಶಿಕ್ಷಕರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಕಾನೂನು ಕ್ಷೇತ್ರದಲ್ಲಿ ತೊಡಗಿಸಿಕೊಂಡ ಸಾಮಾಜಿಕ ಕಾರ್ಯಕರ್ತರು, ಎಂಎಸ್‍ಡಬ್ಲ್ಯೂ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು, ಕಾನೂನು ವಿದ್ಯಾರ್ಥಿಗಳು, ರಾಜಕೀಯ ಪಕ್ಷಕ್ಕೆ ಸೇರದ ಸಂಘದವರು, ಸ್ವ ಸಹಾಯ ಮಹಿಳಾ ಗುಂಪಿನವರು, ಮಾಜಿ ಸೈನಿಕರು ಹಾಗೂ ಸೈನಿಕರ ಪತ್ನಿಯರು ಅಥವಾ ವಯಸ್ಕ ಮಕ್ಕಳು ಅರ್ಜಿ ಸಲ್ಲಿಸಬಹುದು. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸಮಿತಿ ರಚನೆಯಾಗಿದ್ದು, ಅವಶ್ಯಕತೆ ಇದ್ದಲ್ಲಿ ಸಂದರ್ಶನದ ಮೂಲಕ ಅರೆಕಾಲಿಕ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗುತ್ತದೆ. ಅರೆಕಾಲಿಕ ಸ್ವಯಂ ಸೇವಕರು ಸಲ್ಲಿಸುವ ಸೇವೆಗೆ ಯಾವುದೇ ವೇತನ, ಶುಲ್ಕ ಇರುವುದಿಲ್ಲ. ಆದರೆ ಕೆಲವೊಮ್ಮೆ ಗೌರವಧನಕ್ಕಾಗಿ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ 2025 ರ ಸೆಪ್ಟೆಂಬರ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಅಥವಾ ದೂ.ಸಂ.08272-222373 ನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ.








