Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ*

ಸೆಪ್ಟೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.26 NEWS DESK : ಮಡಿಕೇರಿ ದಸರಾ ಸಮಿತಿ ಮತ್ತು ಯುವ ದಸರಾ ಸಮಿತಿ ವತಿಯಿಂದ ಸೆ.26 ಮತ್ತು 27ರಂದು ಯುವ ದಸರಾ ಪ್ರಯುಕ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ ತಿಳಿಸಿದರು. ನಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಯುವ ದಸರಾವನ್ನು ವಿಜೃಂಭಣೆಯಿಂದ ನಡೆಸಲು ಯುವಕರ ತಂಡ ಸಜ್ಜಾಗಿದ್ದು, ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ಸೆ.26 ರಂದು ನಗರದ ಬಾಲಭವನದಲ್ಲಿ ಉದ್ಯೋಗ ವಿನಿಮಯ ಕಚೇರಿ ಸಹಭಾಗಿತ್ವದಲ್ಲಿ ಮೊದಲ ಬಾರಿಗೆ ಯುವದಸರಾದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಹಲವು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಯುವಜನತೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕವನ್ ಕೊತ್ತೋಳಿ ಮನವಿ ಮಾಡಿದರು. ಅಂದು ಬೆಳಗ್ಗೆ 10 ಗಂಟೆಗೆ ನಗರಸಭೆ ಅಧ್ಯಕ್ಷೆ ಹಾಗೂ ದಸರಾ ಸಮಿತಿ ಅಧ್ಯಕ್ಷೆ ಪಿ.ಕಲಾವತಿ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರಮುಖರಾದ ಪ್ರಕಾಶ್ ಆಚಾರ್ಯ, ಹರಿಪ್ರಸಾದ್ ಕೋಚನ, ಹಬೀಬ್ ಅಹ್ಮದ್, ಶರಣ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಅಲ್ಲದೆ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಗರದ ಗಾಂಧಿ ಮೈದಾನದಲ್ಲಿ ಶ್ವಾನ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಮಂತರ್‍ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮೂಡ ಅಧ್ಯಕ್ಷ ಬಿ.ವೈ.ರಾಜೇಶ್, ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಲಿಂಗರಾಜು ದೊಡ್ಡಮಾನಿ, ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸೆ.27 ರಂದು ಬೆಳಗ್ಗೆ 7 ಗಂಟೆಗೆ ಸೈಕಲ್ ಜಾಥಾ ಮತ್ತು ಬೆಳಗ್ಗೆ 10.30 ಗಂಟೆಗೆ ಬೈಕ್ ಜಾಥಾ ನಡೆಯಲಿದೆ. ನಗರದ ಸುದರ್ಶನ ವೃತ್ತದಿಂದ ಜನರಲ್ ತಿಮ್ಮಯ್ಯ ವೃತ್ತ, ಖಾಸಗಿ ಬಸ್ ನಿಲ್ದಾಣ, ಕಾವೇರಿ ಹಾಲ್ ಮುಖಾಂತರ ಎಲ್‍ಐಸಿಯಾಗಿ ಗಾಂಧಿ ಮೈದಾನದಲ್ಲಿ ಕೊನೆಗೊಳ್ಳಲಿದೆ. ಸೈಕಲ್ ಜಾಥಾವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜ್ ಉದ್ಘಾಟಿಸಲಿದ್ದಾರೆ. ಬೈಕ್ ಜಾಥಾಕ್ಕೆ ಉಪ ವರಿಷ್ಠಾಧಿಕಾರಿ ದಿನೇಶ್ ಬಾರಿಕೆ ಅವರು ಚಾಲನೆ ನೀಡಲಿದ್ದಾರೆ. ಸಂಜೆ 6 ಗಂಟೆಗೆ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯುವ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕವನ್ ಕೊತ್ತೋಳಿ ವಹಿಸಲಿದ್ದು, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್.ಎಂ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗ್ಯಾರೆಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹಾರೋಜ್ ಖಾನ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಯುವ ದಸರಾ ಆಕರ್ಷಣೆಯಾಗಿ ಐಶ್ವರ್ಯ ರಂಗರಾಜನ್ ತಮ್ಮ ಹಾಡಿನ ಮೂಲಕ ಜನರನ್ನು ರಂಜಿಸಲಿದ್ದಾರೆ. ಲೈವ್ ಮಸಿಕ್, ಡಿಜೆ ಹಾಗೂ ಜನಪ್ರಿಯ ಸೆಲೆಬ್ರಿಟಿಗಳಿಂದ ವಿಶೇಷ ಕಾರ್ಯಕ್ರಮಗಳಿದೆ ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಯುವ ದಸರಾ ಸಮಿತಿ ಉಪಾಧ್ಯಕ್ಷ ಟಿ.ಆರ್.ಅರ್ಜುನ್, ಖಜಾಂಚಿ ಸುನೀಲ್, ಪ್ರಧಾನ ಕಾರ್ಯದರ್ಶಿ ಕೆ.ಶರಣ್, ಕಾರ್ಯದರ್ಶಿ ಲಿನೇಶ್, ಸಂಘಟನಾ ಕಾರ್ಯದರ್ಶಿ ಪವಿತ್ರ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.2 ರಂದು ಸೋಮವಾರಪೇಟೆ ತಾ.ಪಂ.ಕೆಡಿಪಿ ಸಭೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ವಿರಾಜಪೇಟೆ ಸಮೀಪದ ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರುವಾಸಿಯಾಗಿರುವ ಮಲೆ ಮಹದೇಶ್ವರ…

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.