

ಬೆಂಗಳೂರು ಸೆ.26 NEWS DESK : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮುಖಂಡರು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಸಮಾಲೋಚಿಸಿದರು. ಬೆಂಗಳೂರಿನ ವಸಂತನಗರದಲ್ಲಿ ಇರುವ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ವಸತಿ ಸಚಿವರ ಅದ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಕ್ರಿಶ್ಚಿಯನ್ ಸಮುದಾಯದ ಮೂಲ ಸೌಲಭ್ಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲಾಯಿತಲ್ಲದೆ, ಸಚಿವರು ಮುಖಂಡರುಗಳ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ವಿರಾಜಪೇಟೆ ತಾಲೂಕಿನ ಕ್ರಿಶ್ಚಿಯನ್ ಧರ್ಮ ಗುರಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.








