Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*
  • *ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*
  • *ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*
  • *ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*
  • *ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*
  • *ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಕಾಂತಪ್ಪಗೆ ಪಿಎಚ್‍ಡಿ ಪದವಿ*
  • *ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*
  • *ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*
  • *ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕರ್ನಾಟಕ ರಾಜ್ಯ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಭೇಟಿ ನೀಡಿದ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ*

ಸೆಪ್ಟೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಸೆ.26 NEWS DESK : ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ–ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು ಭೇಟಿ ನೀಡಿತು. ಈ ಸಂದರ್ಭ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮಥ್ರ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು. ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮಥ್ರ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು. ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಅಡಿಯಲ್ಲಿ ಸುಗಮಗೊಳಿಸಲಾದ ಈ ಕಾರ್ಯಕ್ರಮವು ಬಾಹ್ಯಾಕಾಶ ಅನ್ವಯಿಕೆಗಳು, ಏರೋಸ್ಪೇಸ್ ತಂತ್ರಜ್ಞಾನಗಳು ಮತ್ತು ರಕ್ಷಣಾ ನಾವೀನ್ಯತೆಗಳಲ್ಲಿ ಸಹಯೋಗವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಜಂಟಿ ಸಂಶೋಧನೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಪ್ರತಿಭಾ ವಿನಿಮಯದಲ್ಲಿ ಭಾರತ–ಇಟಲಿ ಸಹಕಾರವನ್ನು ವೃದ್ಧಿಸುವುದು, ಮಾರುಕಟ್ಟೆ ಪ್ರವೇಶ, ಸಹ ಅಭಿವೃದ್ಧಿ, ಕೈಗಾರಿಕೆ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಅವಕಾಶಗಳನ್ನು ತೆರೆಯುವುದು ಹಾಗೂ ಬಾಹ್ಯಾಕಾಶ, ನಾವೀನ್ಯತೆ ಮತ್ತು ತಂತ್ರಜ್ಞಾನ ನೇತೃತ್ವದ ಬೆಳವಣಿಗೆಯಲ್ಲಿ ಕರ್ನಾಟಕವನ್ನು ಇಟಲಿಗೆ ಕಾರ್ಯತಂತ್ರದ ಪಾಲುದಾರರನ್ನಾಗಿ ಸ್ಥಾನೀಕರಿಸುವುದಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಯಿತು. ಈ ಭೇಟಿಯು ಭಾರತ–ಇಟಲಿಯ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಒಂದು ಪ್ರಮುಖ ಮೈಲುಗಲ್ಲನ್ನು ಗುರುತಿಸುವುದಲ್ಲದೇ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ನಾವೀನ್ಯತೆಯಲ್ಲಿ ಜಾಗತಿಕ ಕೇಂದ್ರವಾಗಿ ಕರ್ನಾಟಕದ ಪಾತ್ರವನ್ನು ಬಲಪಡಿಸಲಿದೆ ಎಂದರು. ನಿಯೋಗದಲ್ಲಿ ಇಟಾಲಿಯನ್ ಬಾಹ್ಯಾಕಾಶ ಸಂಸ್ಥೆಯ ಉಪ ನಿರ್ದೇಶಕರಾದ ಮಾರಿಯಾ ಚಿಯಾರಾ ನೊಟೊ, ನವದೆಹಲಿಯ ಇಟಲಿಯ ವ್ಯಾಪಾರ ಆಯುಕ್ತರಾದ ಆಂಟೋನಿಯೆಟ್ಟಾ ಬಕ್ಕನಾರಿ, ಬೆಂಗಳೂರಿನಲ್ಲಿನ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಹಾಗೂ ಇಟಲಿಯ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಎಂದು ಕನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿಳಿ ಫಲಕದ ವಾಹನಗಳಿಂದ ಹಳದಿ ಫಲಕದ ವಾಹನಗಳಿಗೆ ನಷ್ಟ : ಸೂಕ್ತ ಕ್ರಮಕ್ಕೆ ಆಗ್ರಹ*

ಸೆಪ್ಟೆಂಬರ್ 22, 2026

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಶಾಂತಿನಿಕೇತನ ಯುವಕ ಸಂಘದಿoದ ಯಶಸ್ವೀ ರಕ್ತದಾನ ಶಿಬಿರ*

ಸೆಪ್ಟೆಂಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.22 : ಶಾಂತಿನಿಕೇತನ ಯುವಕ ಸಂಘದ ವತಿಯಿಂದ 48ನೇ ವರ್ಷದ ಅದ್ದೂರಿ ಗಣೇಶೋತ್ಸವದ ಅಂಗವಾಗಿ ಬೃಹತ್…

*ಮೂರ್ನಾಡಿನಲ್ಲಿ ಶ್ರದ್ಧಾಭಕ್ತಿಯಿಂದ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆ*

ಸೆಪ್ಟೆಂಬರ್ 21, 2026

*ಭಗವದ್ಗೀತೆ ಶ್ಲೋಕ ಮತ್ತು ಭಾವಾರ್ಥ ಪಠಣ ಸ್ಪರ್ಧೆಯಲ್ಲಿ ಎಸ್.ಎಸ್. ದಿವಿತ್‌ಗೆ ಪ್ರಥಮ ಸ್ಥಾನ*

ಸೆಪ್ಟೆಂಬರ್ 21, 2026

*ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿ.ಆರ್.ವರ್ಷ ಪ್ರಥಮ*

ಸೆಪ್ಟೆಂಬರ್ 21, 2026

*ವಾಲಿಬಾಲ್ ಪಂದ್ಯಾವಳಿ : ಸರ್ವದೈವತ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 21, 2026

*ಕಾಂತಪ್ಪಗೆ ಪಿಎಚ್‍ಡಿ ಪದವಿ*

ಸೆಪ್ಟೆಂಬರ್ 21, 2026

*ಎಫ್‌.ಎಂ.ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ*

ಸೆಪ್ಟೆಂಬರ್ 21, 2026

*ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟನೆ*

ಸೆಪ್ಟೆಂಬರ್ 21, 2026

*ವಿರಾಜಪೇಟೆ ಗಣೇಶೋತ್ಸವ: ಸೆ.25ರಿಂದ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ*

ಸೆಪ್ಟೆಂಬರ್ 21, 2026

*ಸೋಮವಾರಪೇಟೆಯಲ್ಲಿ ಓಣಂ ಉತ್ಸವ ಹಾಗೂ ಹಿಂದೂ ಮಲಯಾಳ ಸಮಾಜದ ದಶಮಾನೋತ್ಸವ*

ಸೆಪ್ಟೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.