Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಬೇಡ : 10 ಸ್ಥಳಗಳಲ್ಲಿ ಕುಡಿಯುವ ನೀರಿನ ಫಿಲ್ಟರ್ ಅಳವಡಿಸಿ : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ ಬೇಡ : 10 ಸ್ಥಳಗಳಲ್ಲಿ ಕುಡಿಯುವ ನೀರಿನ ಫಿಲ್ಟರ್ ಅಳವಡಿಸಿ : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯ*

ಸೆಪ್ಟೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.26 NEWS DESK : ಸರಕಾರಿ ಕಾರ್ಯಕ್ರಮ ಸೇರಿದಂತೆ ಎಲ್ಲಾ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆಯನ್ನು ನಿಷೇಧಿಸಬೇಕು ಮತ್ತು ನಗರಸಭೆ ನಗರದ 10 ಸ್ಥಳಗಳಲ್ಲಿ ಕುಡಿಯುವ ನೀರಿನ ಫಿಲ್ಟರ್ ಗಳನ್ನು ಅಳವಡಿಸಬೇಕು ಎಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಚೇಂಬರ್ ಆಫ್ ಕಾಮರ್ಸ್‍ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಹಾಗೂ ಜಿಲ್ಲಾ ನಿರ್ದೇಶಕ ಧನಂಜಯ ಎಂ. ಅವರು ಸ್ವತ: ಸರಕಾರದ ಕಾರ್ಯದರ್ಶಿಗಳೇ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನೀರು ಮತ್ತು ಪ್ಲಾಸ್ಟಿಕ್ ಲೋಟಗಳನ್ನು ಬಳಸಬಾರದೆಂದು ಆದೇಶ ಮಾಡಿದ್ದರೂ ಸರಕಾರಿ ಕಾರ್ಯಕ್ರಮಗಳಲ್ಲಿ ಕೂಡ ಇವುಗಳನ್ನು ಬಳಸಲಾಗುತ್ತಿದೆ. ಸ್ವಚ್ಛ ಪರಿಸರಕ್ಕಾಗಿ ತಕ್ಷಣ ಇದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದಂತೆ ಸಗಟು ವ್ಯಾಪಾರಸ್ಥರು ಹಾಗೂ ಚಿಲ್ಲರೆ ಮಾರಾಟ ಅಂಗಡಿ ಮಾಲೀಕರಲ್ಲಿ ಕಳೆದ ಜನವರಿಯಿಂದ ಮನವಿ ಮಾಡಿಕೊಂಡು ಬರಲಾಗಿದೆ. ಇದೇ ಆ.1 ರಿಂದ ಈ ನೀರಿನ ಬಾಟಲಿಗಳ ಮಾರಾಟವನ್ನು ನಗರಸಭೆ ಕಡ್ಡಾಯವಾಗಿ ನಿಷೇಧಿಸಿದೆ. ಆದರೆ ನಗರದಲ್ಲಿ ನೀರಿನ ಬಾಟಲ್ ಗಳನ್ನು ಮಾರಾಟ ಮತ್ತು ಬಳಕೆ ಮಾಡಲಾಗುತ್ತಿದೆ. ದಸರಾದ ಈ ದಿನಗಳಲ್ಲಿ ಬಾಟಲಿಗಳ ತ್ಯಾಜ್ಯದ ರಾಶಿ ಸುಂದರ ಪರಿಸರಕ್ಕೆ ಹಾನಿ ಉಂಟು ಮಾಡುತ್ತಿದೆ.  2024-25ರ ಪ್ರವಾಸೋದ್ಯಮ ಇಲಾಖೆಯ ಅಂಕಿ ಅಂಶದ ಪ್ರಕಾರ 45 ಲಕ್ಷಕ್ಕೂ ಅಧಿಕ ಪ್ರವಾಸಿಗರು ಮಡಿಕೇರಿ ನಗರಕ್ಕೆ ಭೇಟಿ ನೀಡಿದ್ದಾರೆ. ಕನಿಷ್ಠ 25 ರಿಂದ 30 ಲಕ್ಷ ನೀರಿನ ಬಾಟಲ್ ಮಡಿಕೇರಿ ನಗರ ಒಂದರಲ್ಲೇ ಕಂಡು ಬಂದಿದೆ. ಈ ಬಾಟಲ್ ಗಳು ತೋಡು, ಚರಂಡಿಗಳಲ್ಲಿ, ಕಾಡಿನ ಮಧ್ಯ ಭಾಗದಲ್ಲಿ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಮರುಬಳಕೆಯಾಗದ ಸ್ಥಿತಿಯಲ್ಲಿ ರಾಶಿ ಬಿದ್ದಿರುವುದನ್ನು ಗಮನಿಸಿದ್ದೇವೆ. ಚರಂಡಿ ಮತ್ತು ತೋಡುಗಳಲ್ಲಿ ನೀರು ಸರಾಗವಾಗಿ ಹರಿಯಲು ಪ್ಲಾಸ್ಟಿಕ್ ಬಾಟಲಿಗಳು ಅಡಚಣೆಯನ್ನುಂಟು ಮಾಡುತ್ತಿವೆ. ಎಲ್ಲೆಂದರಲ್ಲಿ ಬಿದ್ದಿರುವ ಖಾಲಿ ಬಾಟಲಿಗಳಿಂದ ಸೊಳ್ಳೆ, ಕ್ರಿಮಿ, ಕೀಟಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವುದಕ್ಕೂ ಕಾರಣವಾಗುತ್ತಿದೆ. ಪರಿಸರದ ಮೇಲೂ ನೀರಿನ ಪ್ಲಾಸ್ಟಿಕ್ ಬಾಟಲಿಗಳು ದುಷ್ಪರಿಣಾಮ ಉಂಟು ಮಾಡುತ್ತಿರುವುದರಿಂದ ಜಿಲ್ಲಾಡಳಿತ ಮತ್ತು ನಗರಸಭೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ವರ್ತಕರು 2 ಲೀಟರ್ ಗಿಂತ ಕಡಿಮೆ ಪ್ರಮಾಣದ ನೀರಿನ ಬಾಟಲ್ ಮಾರಾಟ ಮಾಡದೆ ಮಡಿಕೇರಿ ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕೆಂದು ಸಂತೋಷ್ ಅಣ್ವೇಕರ್ ಹಾಗೂ ಧನಂಜಯ ಎಂ. ಮನವಿ ಮಾಡಿದ್ದಾರೆ. ನಗರಸಭೆ ಕೂಡ ಪರಿಸರ ಮತ್ತು ಪ್ರವಾಸಿಗರ ಹಿತದೃಷ್ಟಿಯಿಂದ ನಗರದ 10 ಸ್ಥಳಗಳಲ್ಲಿ ಕುಡಿಯುವ ನೀರಿನ ಫಿಲ್ಟರ್ ಗಳನ್ನು ಅಳವಡಿಸುವ ಕಾರ್ಯವನ್ನು ಆಯುಧ ಪೂಜೆಯೊಳಗೆ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲಿ ಪ್ಲಾಸ್ಟಿಕ್ ಚೀಲಗಳ ಬಳಕೆಗೆ ನಿಷೇಧವಿದ್ದರೂ ಇತ್ತೀಚಿನ ದಿನಗಳಲ್ಲಿ ಇದರ ಬಳಕೆ ಹೆಚ್ಚಾಗುತ್ತಿದೆ. ವರ್ತಕರು ಹಾಗೂ ಗ್ರಾಹಕರು ಸ್ವಯಂ ಪ್ರೇರಿತರಾಗಿ ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.