
ಮಡಿಕೇರಿ ಸೆ.26 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕøತಿ, ಶಾಲಾ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ, ನಗರಸಭೆ ಕನ್ನಡ ಸಾಹಿತ್ಯ ಪರಿಷತ್ತು, ಸರ್ವೋದಯ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜಾನಪದ ಪರಿಷತ್ತು ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156 ನೇ ಜನ್ಮ ವರ್ಷಾಚರಣೆಯು ಅಕ್ಟೋಬರ್ 2 ರಂದು ಬೆಳಗ್ಗೆ 10 :30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಮೋಹನ್ ದಾಸ್, ಮಡಿಕೇರಿ ನಗರಾಭಿವೃದ್ಧಿ ಪ್ರಧಿಕಾರ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ ಅನಂತಶಯನ, ಸ್ಕೌಟ್ಸ್ ಮತ್ತು ಗೈಡ್ಸ್, ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯೂ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಕೆ.ಸಿ.ದಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ. ಮಹಾತ್ಮ ಗಾಂಧೀಜಿಯವರು ಇಡೀ ಜಗತ್ತೇ ನಿಬ್ಬೆರಗಾಗುವಂತ, ಇನ್ನೊಬ್ಬರಿಗಾಗಿ ಬದುಕನ್ನು ಸವೆಸಿದ ಮಹಾನ್ ಚೇತನ. ಗಾಂಧಿಜಿಯವರನ್ನು ಹಾಗೂ ಅವರ ವಿಚಾರಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವುದು, ದಾಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆ ದಿಸೆಯಲ್ಲಿ ಮಹಾತ್ಮ ಗಾಂಧಿಜಿಯವರ 156 ನೇ ಜಯಂತಿಯನ್ನು ಅಕ್ಟೋಬರ್, 02 ರಂದು ಆಚರಿಸಲಾಗುತಿದ್ದು, ಈ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ ಸಹಬಾಳ್ವೆ, ಅಸ್ಪ್ರಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಮೂರು ವಿಭಾಗದಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ ಹಾಗೂ ತೃತೀಯ ಸ್ಥಾನಕ್ಕೆ 1 ಸಾವಿರ ರೂ ನಗದು ಬಹುಮಾನ ನೀಡಲಾಗುತ್ತದೆ. :: ವಿಜೇತರ ಪಟ್ಟಿ :: ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರ ವಿವರ ಇಂತಿದೆ. ಪ್ರೌಢಶಾಲಾ ವಿಭಾಗ;- ಪಿ.ಎಸ್.ಯಶಸ್ವಿ (ಪ್ರಥಮ) 9 ನೇ ತರಗತಿ, ಸರ್ಕಾರಿ ಪ್ರೌಡಶಾಲೆ, ಹಾಕತ್ತೂರು ಮಡಿಕೇರಿ ತಾಲ್ಲೂಕು, ಕೆ.ಆರ್.ಲಿಪೀಕ್ಷಾ (ದ್ವಿತೀಯ) 9 ನೇ ತರಗತಿ, ಡಿ ವಿಭಾಗ ಸಂತ ಮೈಕಲರ ಪ್ರೌಢಶಾಲೆ, ಮಡಿಕೇರಿ, ಡಿ.ಎಂ ಚರಿತ (ತೃತೀಯ) 9ನೇ ತರಗತಿ, ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ, ಸೋಮವಾರಪೇಟೆ. ಪದವಿ ಪೂರ್ವ ವಿಭಾಗದಿಂದ:- ಬಿ.ಆರ್.ನವ್ಯ(ಪ್ರಥಮ) ಮೂರ್ನಾಡು ಪದವಿ ಪೂರ್ವ ಕಾಲೇಜು, ಮೂರ್ನಾಡು, ಎ.ಆರ್ ಮೋಕ್ಷಾ (ದ್ವಿತೀಯ) ಸರ್ಕಾರಿ ಪದವಿ ಪೂರ್ವ ಕಾಲೇಜು, ಮಡಿಕೇರಿ, ಯು.ಎನ್ ಚಂದನ(ತೃತೀಯ) ಲಯನ್ಸ್ ಪಿಯು ಕಾಲೇಜು, ವಿರಾಜಪೇಟೆ. ಪದವಿ/ ಸ್ನಾತಕೋತ್ತರ ಪದವಿ ವಿಭಾಗದಿಂದ:- ಯು.ಆರ್.ರಕ್ಷಿತ್ ಕುಮಾರ್(ಪ್ರಥಮ), ತೃತೀಯ ಬಿಸಿಎ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಶಾಲನಗರ, ಎಸ್.ಮಂಜುಳ(ದ್ವಿತೀಯ) ತೃತೀಯ ಬಿಸಿಎ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ಕೀರ್ತನ(ತೃತೀಯ) ತೃತೀಯ ಬಿ.ಎ.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿರಾಜಪೇಟೆ ಇವರು ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.








