Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕಿಟ್ ವಿತರಣೆ : ಸಮಾಜ ಸೇವೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕಿಟ್ ವಿತರಣೆ : ಸಮಾಜ ಸೇವೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ : ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ*

ಸೆಪ್ಟೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.26 : ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಂಘ ಸಂಸ್ಥೆಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಸಮಾಜ ಸೇವೆಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಬಹಳ ಮುಖ್ಯ ಎಂದು ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಅನುದಾನ ಮತ್ತು ಲಯನ್ಸ್ ಜಿಲ್ಲೆ 317-ಆ ಇದರ ಸಹಯೋಗದೊಂದಿಗೆ ಮಡಿಕೇರಿ ಲಯನ್ಸ್ ಸಂಸ್ಥೆ ಸಮಾಜಮುಖಿ ಸೇವಾ ಕಾರ್ಯಕ್ರಮದ ಭಾಗವಾಗಿ ಬಡವರಿಗೆ ದಿನಸಿ ಕಿಟ್ ಮತ್ತು ಕಂಬಳಿಗಳನ್ನು ವಿತರಿಸಿತು. ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪ ವಿಭಾಗಾಧಿಕಾರಿಗಳು ಲಯನ್ಸ್ ಸಂಸ್ಥೆಯ ಸಮಾಜಮುಖಿ ಕಾರ್ಯಗಳ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು. ಕೆಲವು ವರ್ಷಗಳ ಹಿಂದೆ ಕೊಡಗಿನಲ್ಲಿ ಅತಿವೃಷ್ಟಿಯಿಂದ ಅನಾಹುತಗಳು ಸಂಭವಿಸಿದಾಗ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ನೀಡಿದ ಸೇವೆ ಶ್ಲಾಘನೀಯ. ಸಮಾಜದಲ್ಲಿ ಯಾವುದೇ ರೀತಿಯ ಸಮಸ್ಯೆ ಮತ್ತು ಸಂಕಷ್ಟ ಎದುರಾದಾಗ ಸರಕಾರದೊಂದಿಗೆ ಸೇವಾಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಪರಿಹಾರೋಪಾಯಗಳು ಯಶಸ್ವಿಯಾಗಲು ಸಾಧ್ಯ ಎಂದರು.
ಲಯನ್ಸ್ ಪ್ರಾಂತೀಯ ಅಧ್ಯಕ್ಷ ಲಯನ್ ಡಾ.ಪಂಚಮ್ ತಿಮ್ಮಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಮೂಲಕ ನಡೆಯುತ್ತಿರುವ ಸೇವಾ ಚಟುವಟಿಕೆಗಳ ಕುರಿತು ವಿವರಿಸಿದರು.
ಬಡಜನರಿಗೆ ನೆರವಾಗುವ ಉದ್ದೇಶದಿಂದ ಅನುಷ್ಠಾನಗೊಳಿಸುತ್ತಿರುವ ಈ ರೀತಿಯ ಯೋಜನೆಗಳು ಸಮಾಜದಲ್ಲಿ ಉತ್ತಮ ಬದಲಾವಣೆಗೆ ಕಾರಣವಾಗುತ್ತವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ರಾಯಬಾರಿ ಲಯನ್ ಬಿ.ವಿ.ಮೋಹನ್ ದಾಸ್ PMJF, ಪ್ರಾಂತೀಯ ರಾಯಭಾರಿ ಲಯನ್ ನವೀನ್ ಅಂಬೆಕಲ್ MJF, ವಲಯ್ಯಾಧ್ಯಕ್ಷ ಲಯನ್ ನಟರಾಜು ಕೆಸ್ತೂರ್ MJF, ಕೋಶಾಧಿಕಾರಿ ಲಯನ್ ಕೆ.ಕೆ.ದಾಮೋದರ್ ಮತ್ತಿತರರು ಉಪಸ್ಥಿತರಿದ್ದರು. ಮಡಿಕೇರಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಲಯನ್ ಮದನ್ ಮಾದಯ್ಯ ಸ್ವಾಗತಿಸಿ, ಲಯನ್ ಕನ್ನು ಅಪ್ಪಚ್ಚು ಪ್ರಾರ್ಥಿಸಿ, ಕಾರ್ಯದರ್ಶಿ ಲಯನ್ ಕೆ.ಮಧುಕರ್ ವಂದಿಸಿದರು. ಬಡತನ ರೇಖೆಗಿಂತ ಕೆಳಗಿರುವ ಸುಮಾರು 13 ಬಡ ಹಾಗೂ ಅಗತ್ಯವಿರುವ ಕುಟುಂಬಗಳನ್ನು ಗುರುತಿಸಿ ದಿನಸಿ ಸಾಮಾಗ್ರಿಗಳ ಕಿಟ್ ಮತ್ತು ಕಂಬಳಿಗಳನ್ನು ವಿತರಿಸಲಾಯಿತು. ಇದೇ ಸಂದರ್ಭ ಕೊಡಗಿನ ಲಯನ್ಸ್ ಪ್ರಾಂತ್ಯದ 12 ಲಯನ್ಸ್ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಬಡವರಿಗೆ ಹಂಚಿಕೆ ಮಾಡಲೆಂದು 110 ಕಿಟ್ ಗಳನ್ನು ಉಪವಿಭಾಗಾಧಿಕಾರಿಗಳ ಮೂಲಕ ಹಸ್ತಾಂತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಜನಸಂಪರ್ಕ ಅಭಿಯಾನದ ಅಂಗವಾಗಿ ಸೆ.5ರಂದು ಮಾದಾಪುರದಲ್ಲಿ ಸಿಎನ್‌ಸಿ ಮಾನವ ಸರಪಳಿ*

ಸೆಪ್ಟೆಂಬರ್ 2, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಸೆ.2 : ಶಬ್ದ ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ಶಬ್ದ ಮಾಲಿನ್ಯ (ನಿಯಂತ್ರಣ ಮತ್ತು…

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.