
ಸೋಮವಾರಪೇಟೆ NEWS DESK ಸೆ.26 : ಕರ್ನಾಟಕ ರಕ್ಷಣಾ ವೇದಿಕೆಯ ಹಾಲಿ ಕೊಡಗು ಜಿಲ್ಲಾದ್ಯಕ್ಷ ಸೇರಿದಂತೆ ಹಲವರು ಪ್ರವೀಣ್ ಶೆಟ್ಟಿ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷ ಸೇರಿದಂತೆ ಹಲವು ಮಂದಿ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆ ಸೇರುವ ಮೂಲಕ ನಾರಾಯಣ ಗೌಡ ಬಣಕ್ಕೆ ಸಡ್ಡು ಹೊಡೆದಿದ್ದಾರೆ. ಇದೀಗ ಪ್ರವೀಣ್ ಶೆಟ್ಟಿ ಬಣದ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರಾಗಿ ದೀಪಕ್ ನೇಮಕಗೊಂಡಿದ್ದಾರೆ. ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾಗಿ ಸಂಧ್ಯಾ ಗಣೇಶ ನೇಮಕಗೊಂಡಿದ್ದಾರೆ.










