Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗೆ ಚಾಲನೆ : ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಡಾ.ಜೆ ಸೋಮಣ್ಣ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗೆ ಚಾಲನೆ : ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲು ಡಾ.ಜೆ ಸೋಮಣ್ಣ ಸಲಹೆ

ಸೆಪ್ಟೆಂಬರ್ 27, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಸೆ.27 NEWS DESK  : ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವಂತೆ ವಿದ್ಯಾರ್ಥಿಗಳಾಗಿರುವಾಗಲೇ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ.ಜೆ ಸೋಮಣ್ಣ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ 2025-26ನೇ ಸಾಲಿನ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾಯಕರಾಗಬೇಕಾದರೆ ವಿನಯ ಬೆಳೆಸಿಕೊಳ್ಳಬೇಕು. ವಿಚಾರ ವಿನಿಮಯ ತಿಳಿದುಕೊಳ್ಳಬೇಕು. ಯುವ ಪೀಳಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸಿಕೊಳ್ಳುವ ಜವಾಬ್ದಾರಿ ಇದೆ. ಅದನ್ನು ಅರಿತುಕೊಂಡು ಮುನ್ನಡೆಯಬೇಕು ಎಂದರು. ಮಾನವೀಯತೆಯ ಭದ್ರ ಬುನಾದಿ ಮೇಲೆ ನಮ್ಮ ಸಮಾಜ ಕಟ್ಟಲಾಗಿದೆ. ಅಂತಹ ಸಮಾಜ ಉಳಿಸಿಕೊಳ್ಳಬೇಕು. ಭಾರತ ಸಮಾಜವಾದಿ ರಾಷ್ಟ್ರವಾಗಿದೆ. ಭಾರತದ ಹೆಸರು ದೇಶ ವಿದೇಶದಲ್ಲಿ ಮೊಳಗುವಂತೆ ಯುವ ಪೀಳಿಗೆಯು ಸಾಧಿಸಬೇಕೆಂದು ತಿಳಿಸಿದರು. ಪಂಪ ಹೇಳಿದಂತೆ ಮಾನವ ಕುಲ ಒಂದೇ, ಭಾರತವು ಸಮಾಜವಾದಿ, ಸರ್ವಧರ್ಮ ರಾಷ್ಟ್ರ ವಿದ್ಯಾರ್ಥಿಗಳು ಇದನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು. ಸಂವಿಧಾನ ಉಳಿಯಬೇಕೆಂದರೆ ಯುವ ಪೀಳಿಗೆಯೂ ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ರಾಜಕೀಯ, ಶೈಕ್ಷಣಿಕ, ಸಾಮಾಜಿಕ ವ್ಯವಸ್ಥೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ನುಡಿದರು. ತಂದೆ-ತಾಯಿ ಮಾಡಿದ ಆಸ್ತಿ ಅನುಭವಿಸಬಾರದು. ನಮ್ಮ ಆಸ್ತಿಯನ್ನು ನಾವೇ ಸಂಪಾದಿಸಬೇಕು ಕನಸು ಕಾಣುವುದಕ್ಕಿಂತ ಮುಂಚೆ ಆಲೋಚಿಸಿ ಕನಸನ್ನು ಕಂಡು ನನಸು ಮಾಡಲು ಪ್ರಯತ್ನಿಸಿ ಎಂದು ನುಡಿದರು. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗೀಳಿನಿಂದ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಗುರುತಿಸಿಕೊಳ್ಳಲಾರರು. ತಮ್ಮ-ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಮಾತ್ರ ಸಾಮಾಜಿಕ ಜಾಲತಾಣ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಎಚ್ಚರಿಸಿದರು. ಸೋಲನ್ನು ಸವಾಲಾಗಿ ಸ್ವೀಕರಿಸಿ ಮುನ್ನುಗಬೇಕು. ಕಷ್ಟಗಳು ನಿರ್ಜೀವ ವಸ್ತುಗಳಿಗೆ ಬರುವುದಿಲ್ಲ ಜೀವವಿರುವ ಜೀವಿಗಳಿಗೆ ಬರುವುದು ಪ್ರತಿಯೊಂದು ಹಂತವನ್ನು ಬಗೆಹರಿಸಿ ಮುಂದೆ ಸಾಗಬೇಕು ಎಂದು ನುಡಿದರು.  ಹಣದಿಂದ ಯಾವುದನ್ನು ಗೆಲ್ಲಲು ಸಾಧ್ಯವಿಲ್ಲ ಮನಸ್ಥೈರ್ಯ, ಧೈರ್ಯ, ಛಲ ಇದ್ದರೆ ಯಾವುದನ್ನು ಏನನ್ನಾದರೂ ಯಾವಾಗ ಬೇಕಾದರೂ ಸಾಧಿಸಬಹುದು ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚು ಮಹತ್ವವನ್ನು ನೀಡಬೇಕು ಕಲಿಕೆಯ ಜೊತೆಗೆ ಕ್ರೀಡೆಯು ಬಹು ಮುಖ್ಯವಾಗಿದೆ. ಪಠ್ಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ಗಮನ ನೀಡಬೇಕು ಎಂದರು.  ಶ್ರೇಷ್ಠ ಸಾಧುಸಂತರ, ಮಹಾನ್ ವ್ಯಕ್ತಿಗಳ, ವಿಜ್ಞಾನಿಗಳ ಬದುಕನ್ನು ತಿಳಿದುಕೊಂಡು ವಿದ್ಯಾರ್ಥಿಗಳು ತಮ್ಮ ಜೀವನದದುದ್ದಕ್ಕೂ ರೂಪಿಸಿಕೊಳ್ಳಬೇಕು ಎಂದರು. ದೊಡ್ಡ-ದೊಡ್ಡ ಕನಸು ಕಂಡು ತಮ್ಮ ಬದುಕು ಕಟ್ಟುವ ಜೊತೆಗೆ ದೇಶದ ಬದುಕನ್ನು ಕಟ್ಟಬೇಕು. ಪ್ರತಿಯೊಬ್ಬರಲ್ಲಿಯೂ ಕಲೆ ಅಡಗಿದೆ. ಅದನ್ನು ಹೊರ ತರುವ ಪ್ರಯತ್ನ ನಡೆಸಿ ಮುಂದೆ ಸಾಗಬೇಕು ಹಾಗೆ ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ರೂಪಿಸಿಕೊಂಡು ಬದುಕಬೇಕು ಎಂದು ತಿಳಿಸಿದರು. ಪ್ರಮುಖರಾದ ನವೀನ್ ಅಂಬೆಕಲ್ಲು ಮಾತನಾಡಿ ವಿದ್ಯಾರ್ಥಿ ಜೀವನ ಮರುಕಳಿಸಲಾರದು ಕಲಿಕೆ ಹಂತವು ಮುಖ್ಯ ಹಂತವಾಗಿರುವುದರಿಂದ ವಿದ್ಯಾರ್ಥಿಗಳು ಗುರಿಯನ್ನು ನಿರ್ಧರಿಸಿಕೊಂಡು ಗುರಿ ತಲುಪುವ ಕಾರ್ಯನಿರ್ವಹಿಸಬೇಕು ಹಾಗೆಯೇ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ನೆರದಿರುವ ವಿದ್ಯಾರ್ಥಿಗಳಿಗೆ ತಿಳಿಸಿದರು. ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಶುಭ ಕೋರಿದರು. ಪಠ್ಯ ಜೊತೆಗೆ ಪಠ್ಯೇತರ ಕಾರ್ಯಕ್ರಮಗಳಲ್ಲೂ ಭಾಗವಹಿಸಬೇಕು, ಭಿನ್ನ-ಭಿನ್ನವಾದ ಕ್ಷೇತ್ರಗಳಿಗೆ ವಿದ್ಯಾರ್ಥಿಗಳು ಆಸಕ್ತಿ ನೀಡಬೇಕು ಎಂದು ನುಡಿದರು. ಕಳೆದ ಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ಕಾಲೇಜಿಗೆ ನೀಡಬೇಕು ಎಂದು ಆಶಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ ಮಾತನಾಡಿ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಕೊರತೆ ಇಲ್ಲ. ಪ್ರತಿಯೊಂದು ಅವ್ಯವಸ್ಥೆಯನ್ನು ಸರಿಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಸಂಪೂರ್ಣ ವಿದ್ಯೆ ಒದಗಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿರುವದರಿಂದ ಅದನ್ನು ಸಂಪೂರ್ಣವಾಗಿ ನಿಭಾಯಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ವಿದ್ಯಾರ್ಥಿಗಳ ಗುಣ ಮತ್ತು ಸ್ವಭಾವ ಹೇಗಿರುವುದೋ ಅದೇ ರೀತಿಯಲ್ಲಿಯೇ ಕಾಲೇಜಿನ ಸ್ವಭಾವ ಇರುವುದು. ಆದ್ದರಿಂದ ವಿದ್ಯಾರ್ಥಿಗಳು ತಮ್ಮ-ತಮ್ಮ ಗುಣ ಸ್ವಭಾವ ನಡವಳಿಕೆಯನ್ನು ಉತ್ತಮವಾಗಿ ನಡೆಸಿಕೊಂಡು, ಕಾಲೇಜಿಗೆ ಗೌರವ ತರಬೇಕು ಎಂದು ನುಡಿದರು. ಜಿಲ್ಲಾ ಪರಿಸರ ಅಧಿಕಾರಿ ರಘುರಾಮ್ ಅವರು ಮಾತನಾಡಿ ಮಕ್ಕಳಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಗೃತಿ ಮೂಡಿಸಿದರೆ, ಇಡೀ ಸಮುದಾಯದಲ್ಲಿ ಅರಿವು ಮೂಡಿಸಿದಂತಾಗುತ್ತದೆ ಎಂದರು. ಪರಿಸರ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಕ್ರೀಡಾ ಕಾರ್ಯದರ್ಶಿಯಾದ ಧನರಾಜ್, ಸಿಡಿಸಿ ಘಟಕದಿಂದ ಶಶಿ, ನೂರ್ ಜಹಾನ್ ಬೇಗಮ್, ವಿದ್ಯಾರ್ಥಿಗಳ ಕ್ಷೇಮ ಪಾಲನಾಧಿಕಾರಿ ಡಾ.ಅನುಪಮಾ, ಎನ್.ಎಸ್.ಎಸ್ ಘಟಕದ ಕಾರ್ಯದರ್ಶಿ ಸುಧಾಕರ್, ಪ್ರಾಧ್ಯಾಪಕರಾದ ಚೈತ್ರ, ಇತರರು ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.