Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ, ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಆಭರಣಗಳ ಮೌಲ್ಯ ಮಾಪನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ, ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಆಭರಣಗಳ ಮೌಲ್ಯ ಮಾಪನ*

ಸೆಪ್ಟೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.27 : ಶ್ರೀ ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನೂತನ ಆಡಳಿತ ಮಂಡಳಿ ಪ್ರಸಕ್ತ ಸಾಲಿನ ಮಾರ್ಚ್ನಲ್ಲಿ ರಚನೆಯಾಯಿತು. ಆ ಬಳಿಕ ದೇವಸ್ಥಾನದ ಸ್ವತ್ತುಗಳ ಬಗ್ಗೆ ಪಾರದರ್ಶಕತೆಯನ್ನು ಕಂಡುಕೊಳ್ಳ್ಳುವ ಸಲುವಾಗಿ ಸಮಿತಿಯ ವ್ಯಾಪ್ತಿಗೆ ಒಳಪಡುವ ಶ್ರೀ ಓಂಕಾರೇಶ್ವರ, ಶ್ರೀ ಆಂಜನೇಯ ಹಾಗೂ ಕೋಟೆ ಶ್ರೀ ಮಹಾಗಣಪತಿ ದೇವಾಲಯಗಳಲ್ಲಿನ ಚಿನ್ನ, ಬೆಳ್ಳಿ ಮತ್ತು ಇತರೆ ಆಭರಣಗಳ ಮೌಲ್ಯಮಾಪನವನ್ನು ಮಾಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಮಿತಿಯ ಸದಸ್ಯರು, ಅರ್ಚಕ ವೃಂದ, ದೇವಾಲಯ ಸಿಬ್ಬಂದಿ, ಆರಕ್ಷಕ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿಗಳ ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ವಿಡಿಯೋ ಚಿತ್ರೀಕರಣದೊಂದಿಗೆ ಇದೇ ಸಾಲಿನ ಜೂ.11 ರಂದು ಮೌಲ್ಯಮಾಪನ ನಡೆಸಲಾಯಿತೆಂದು ವಿವರಿಸಿದರು. ಮೌಲ್ಯಮಾಪನದಂತೆ ಶ್ರೀ ಓಂಕಾರೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದಂತೆ 22 ಗ್ರಾಂ 100 ಮಿಲಿ ಗ್ರಾಂ ಚಿನ್ನ, 83 ಕೆ.ಜಿ 472 ಗ್ರಾಂ ಬೆಳ್ಳಿ ಆಭರಣಗಳು, 40 ಕೆ.ಜಿ. 810 ಗ್ರಾಂ ಹಿತ್ತಾಳೆ ಮತ್ತು 3 ಕೆ.ಜಿ. ಕಂಚಿನ ಸಾಮಾಗ್ರಿಗಳಿವೆ. ಶ್ರೀ ಆಂಜನೇಯ ದೇವಾಲಯಕ್ಕೆ ಸಂಬಂಧಿಸಿದಂತೆ 1 ಗ್ರಾಂ ಚಿನ್ನ, 19 ಕೆ.ಜಿ. 609 ಗ್ರಾಂ ಬೆಳ್ಳಿ ಆಭರಣಗಳಿವೆ. ಕೋಟೆ ಶ್ರೀ ಗಣಪತಿ ದೇವಾಲಯಕ್ಕೆ ಸಂಬಂಧಿಸಿದಂತೆ 120 ಗ್ರಾಂ 840 ಮಿಲಿ ಗ್ರಾಂ ಚಿನ್ನ, 18 ಗ್ರಾಂ 450 ಮಿಲಿ ಗ್ರಾಂ ಬೆಳ್ಳಿ ಆಭರಣಗಳಿವೆ ಎಂದರು. ನಮ್ಮ ನೂತನ ಆಡಳಿತ ಮಂಡಳಿ ದೇವಸ್ಥಾನದ ಉಸ್ತುವಾರಿಯ ಹಂತಗಳಲ್ಲಿ ಸಂಪೂರ್ಣ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಮೌಲ್ಯಮಾಪನ ಮಾಡಲಾಗಿದೆ. ಈ ಎಲ್ಲಾ ಮಾಹಿತಿ ಜಿಲ್ಲಾಡಳಿತಕ್ಕೂ ತಿಳಿದಿದೆ ಎಂದು ಹೇಳಿದರು. ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ವಕೀಲರಾದ ಎಂ.ಎ.ನಿರಂಜನ್ ಅವರು ಮಾತನಾಡಿ, ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ದೇವಸ್ಥಾನಕ್ಕೆ ಸೇರಿರಬಹುದಾದ ಆಸ್ತಿಗಳ ದಾಖಲೆಗಳನ್ನು ಪರಿಶೀಲಿಸಿದಾಗ, ಶ್ರೀ ಓಂಕಾರೇಶ್ವರ ದೇವಸ್ಥಾನಕ್ಕೆ ಈ ಹಿಂದೆ ದಾನ ನೀಡಿದ ಆಸ್ತಿಗಳಲ್ಲಿ ಯಾವೊಂದು ಆಸ್ತಿಯು ದೇವಸ್ಥಾನದ ಸ್ವಾಧೀನದಲ್ಲಿ ಇಲ್ಲದಿರುವುದು ಕಂಡು ಬರುತ್ತಿದ್ದು, ಇದೊಂದು ದುಃಖಕರ ವಿಚಾರ. ಈ ಸಂಬಂಧ ಇದೀಗ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನ ಪ್ರಯತ್ನ ನಡೆಸಿರುವುದಾಗಿ ತಿಳಿಸಿದರು.
ವ್ಯವಸ್ಥಾಪನಾ ಸಮಿತಿಯ ಸದಸ್ಯ ಜಿ.ರಾಜೇಂದ ಅವರು ಮಾತನಾಡಿ, ತಾಂಬೂಲ ಪ್ರಶ್ನೆಯಲ್ಲಿ ಕಂಡು ಬಂದಂತೆ ಶ್ರೀ ಆಂಜನೇಯ ದೇವಸ್ಥಾನದ ಒಳಭಾಗದಲ್ಲಿ ‘ನವಗ್ರಹ ಪ್ರತಿಷ್ಠಾಪನೆ’ಯನ್ನು ದಾನಿಗಳ ನೆರವಿನೊಂದಿಗೆ ಮಾಡಲು ಸಮಿತಿ ನಿರ್ಧರಿಸಿದೆ. ಇದರೊಂದಿಗೆ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸರಕಾರದ ಸಹಕಾರದೊಂದಿಗೆ 5 ಕೋಟಿ ರೂ. ವೆಚ್ಚದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದರು. ಉದ್ದೇಶಿತ ಅಭಿವೃದ್ಧಿ ಕಾರ್ಯಗಳಂತೆ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಕ್ಕೆ ಹೊಂದಿಕೊಂಡಿರುವ ಪ್ರವೇಶ ದ್ವಾರವನ್ನು ಎಡಬದಿಗೆ ಶಿವಲಿಂಗ ಮತ್ತು ನಂದಿಯ ಮೂರ್ತಿ, ಮಧ್ಯ ಭಾಗದಲ್ಲಿ ಪಟ್ಟಾಭಿರಾಮ, ಲಕ್ಷ್ಮಣ, ಸೀತೆಯ ವಿಗ್ರಹ, ಬಲಭಾಗದಲ್ಲಿ ಕೈಮುಗಿದು ಕುಳಿತಿರುವ ಭಂಗಿಯಲ್ಲಿನ ಆಂಜನೇಯ ಮೂರ್ತಿಯನ್ನು ಅಳವಡಿಸಲು ಉದ್ದೇಶಿಸಲಾಗಿದೆ. ಎರಡು ದೇವಸ್ಥಾನಗಳಲ್ಲಿ ಪ್ರವೇಶ ದ್ವಾರ, ಪ್ರಾರ್ಥನಾ ಕೇಂದ್ರ, ನವಗ್ರಹ ವೃಕ್ಷೋದ್ಯಾನ, ಕೆರೆ ಅಂಗಣ ಜೀರ್ಣೋದ್ಧಾರ ಕಾರ್ಯಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿಯ ಸದಸ್ಯ ಅಂಬೆಕಲ್ಲು ಕುಶಾಲಪ್ಪ ಹಾಗೂ ವೀಣಾಕ್ಷಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾ.15 ರಂದು ಮಹಿಳಾ ದಿನಾಚರಣೆ ಹಾಗೂ…

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.