Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*
  • *ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*
  • *ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*
  • *ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*
  • *ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಳೆದ 25 ವರ್ಷಗಳಿಂದ ಸರ್ವಋತು ರಸ್ತೆ ನಿರ್ಮಿಸಲಾಗದವರು ಈಗ ಪ್ರತಿಭಟನೆ ಮಾಡುತ್ತಿದ್ದಾರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಳೆದ 25 ವರ್ಷಗಳಿಂದ ಸರ್ವಋತು ರಸ್ತೆ ನಿರ್ಮಿಸಲಾಗದವರು ಈಗ ಪ್ರತಿಭಟನೆ ಮಾಡುತ್ತಿದ್ದಾರೆ*

ಸೆಪ್ಟೆಂಬರ್ 28, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.28 : ಕಳೆದ 25 ವರ್ಷಗಳಿಂದ ಅಧಿಕಾರದಲ್ಲಿದ್ದರೂ ಅತಿಹೆಚ್ಚು ಮಳೆಯಾಗುವ ಕೊಡಗು ಜಿಲ್ಲೆಯಲ್ಲಿ ಸರ್ವಋತು ರಸ್ತೆಗಳನ್ನು ನಿರ್ಮಿಸಲಾಗದ ಬಿಜೆಪಿ ಮಂದಿ ಇಂದು ಶಾಸಕದ್ವಯರ ಜನಪ್ರಿಯತೆಯನ್ನು ಸಹಿಸದೆ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಹಾಗೂ ಬಗರ್ ಹುಕುಂ ಸಮಿತಿಯ ಸದಸ್ಯ ಜೆ.ಎಲ್.ಜನಾರ್ಧನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ 25 ವರ್ಷಗಳಿಂದ ಅವೈಜ್ಞಾನಿಕ ರೂಪದ ಮತ್ತು ಕಳಪೆ ಗುಣಮಟ್ಟದ ಕಾಮಗಾರಿಗಳನ್ನು ಮಾಡಿರುವುದೇ ಇಂದು ಜಿಲ್ಲೆಯ ರಸ್ತೆಗಳು ಇಷ್ಟೊಂದು ಹದಗೆಡಲು ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ಜನ ನಿರಂತರವಾಗಿ ಅಧಿಕಾರವನ್ನು ನೀಡಿದರೂ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಕಾರಣ ಈ ಬಾರಿ ಇಬ್ಬರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿದ್ದಾರೆ. ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ ಶಾಸಕದ್ವಯರು ಅಭಿವೃದ್ಧಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ. ಗ್ರಾಮೀಣ ರಸ್ತೆ, ಸೇತುವೆಗಳು ಅಭಿವೃದ್ಧಿ ಹೊಂದುತ್ತಿವೆ, ಬಡವರ ನಿವೇಶನ, ಮನೆಗಳಿಗೆ ಹಕ್ಕುಪತ್ರ ದೊರೆಯುತ್ತಿದೆ. ಕ್ರೀಡಾಂಗಣಗಳು ಅಭಿವೃದ್ಧಿಯಾಗುತ್ತಿವೆ, ಅರ್ಧದಲ್ಲೇ ನಿಂತಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಾರೆ. ಆಸ್ಪತ್ರೆಗಳು ಮೇಲ್ದರ್ಜೆಗೇರುತ್ತಿದ್ದು, ನೂತನ ವೈದ್ಯಕೀಯ ವ್ಯವಸ್ಥೆಗಳು ಲಭ್ಯವಾಗುತ್ತಿದೆ. ಸರಕಾರದ ಮಟ್ಟದಲ್ಲಿ ವ್ಯವಹರಿಸಿ ಜಿಲ್ಲೆಯಲ್ಲಿರುವ ಎಲ್ಲಾ ಸಮಾಜಗಳ ಅಭ್ಯುದಯಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಎಲ್ಲಾ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಆದರೆ ನಿರಂತರ ಮಳೆಯ ಕಾರಣದಿಂದ ರಸ್ತೆಗಳ ಕಾಮಗಾರಿ ವಿಳಂಬವಾಗುತ್ತಿದೆ. ಇದನ್ನು ಜನರು ಕೂಡ ಅರ್ಥ ಮಾಡಿಕೊಂಡಿದ್ದಾರೆ. ಸರಕಾರದ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ, ಕೊಡಗಿನ ಇಬ್ಬರು ಶಾಸಕರ ಕಳೆದ ಎರಡು ವರ್ಷಗಳ ಅಭಿವೃದ್ಧಿ ಕಾರ್ಯಗಳು ಮತ್ತು ಜನಪ್ರಿಯತೆಯನ್ನು ಸಹಿಸದ ಬಿಜೆಪಿ ಮಂದಿ ರಸ್ತೆಯನ್ನು ನೆಪ ಮಾಡಿಕೊಂಡು ಮಳೆಯಲ್ಲಿ ಪ್ರತಿಭಟನೆ ಮಾಡಿ ಜನರ ಹಾದಿ ತಪ್ಪಿಸುವ ಯತ್ನ ಮಾಡಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ. ಕೊಡ್ಲಿಪೇಟೆಯಿಂದ ಮಡಿಕೇರಿ ವರೆಗಿನ ರಸ್ತೆ ಬಿಜೆಪಿ ಅವಧಿಯಲ್ಲೇ ಆಗಿದ್ದು, ಕಾಮಗಾರಿ ಸಮರ್ಪಕವಾಗಿರದ ಕಾರಣ ಹದಗೆಟ್ಟಿದೆ. ಇದಕ್ಕೆ ಈಗಿನ ಶಾಸಕರು ಹೊಣೆಯಲ್ಲ, ಈ ಹಿಂದಿನ ಶಾಸಕರ ಅವಧಿಯ ರಸ್ತೆಗಳ ಗುಂಡಿಗಳನ್ನು ಮುಚ್ಚುವುದಕ್ಕೇ ಒಂದು ವರ್ಷ ಬೇಕಾಯಿತು. ಶಾಸಕ ಡಾ.ಮಂತರ್ ಗೌಡ ಅವರು ಲೋಕೋಪಯೋಗಿ ಇಲಾಖೆ ಮತ್ತು ಮಲೆನಾಡು ಅಭಿವೃದ್ಧಿ ಯೋಜನೆ ಮೂಲಕ ಕೋಟ್ಯಾಂತರ ರೂ. ಅನುದಾನ ತಂದಿದ್ದಾರೆ. ಇತಿಹಾಸದಲ್ಲೇ ಸುಗ್ಗಿಕಟ್ಟೆಗಳಿಗೆ ಅನುದಾನ ನೀಡಿದ ಮೊದಲ ಶಾಸಕರಾಗಿದ್ದಾರೆ.
ಲೋಕೋಪಯೋಗಿ ಇಲಾಖೆ ಮೂಲಕ 186 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಅಭಿವೃದ್ಧಿ ಕಾಣಲಿವೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಮಳೆ ನಿಂತ ತಕ್ಷಣ ಕಾಮಗಾರಿ ಆರಂಭಗೊಳ್ಳಲಿದೆ. ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 116 ಕೋಟಿ ರೂ. ವೆಚ್ಚದಲ್ಲಿ 1522 ಕಾಮಗಾರಿಗಳು ನಡೆಯಲಿವೆ. ಜಿಲ್ಲೆಯ ಎಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಕಾಮಗಾರಿಗಾಗಿ ಕ್ರಿಯಾಯೋಜನೆ ಸಿದ್ದಗೊಂಡಿದ್ದು, ತಾಂತ್ರಿಕ ಅನುಮೋದನೆ ದೊರಕಿದೆ. ಕೆ.ಆರ್.ಐ.ಡಿ.ಎಲ್ ಸಂಸ್ಥೆ ಮೂಲಕ ಜಿಲ್ಲೆಯಲ್ಲಿ 83 ಕೋಟಿ ರೂ. ವೆಚ್ಚದಲ್ಲಿ ಒಟ್ಟು 408 ಆಯ್ದ ಕಾಮಗಾರಿ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಜೆ.ಎಲ್.ಜನಾರ್ಧನ್ ವಿವರಿಸಿದ್ದಾರೆ. ಅಭಿವೃಧ್ಧಿಪರ ಚಿಂತನೆಯ ಶಾಸಕರಿಬ್ಬರ ಜನಪ್ರಿಯತೆಯನ್ನು ಕ್ಷುಲ್ಲಕ ರಾಜಕಾರಣದ ಮೂಲಕ ಕುಗ್ಗಿಸಲು ಸಾಧ್ಯವಿಲ್ಲ ಎನ್ನುವುದನ್ನು ಬಿಜೆಪಿ ಮಂದಿ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಮಲೆ ಮಹದೇಶ್ವರ ದೇವಾಲಯದ ವಾರ್ಷಿಕ ಉತ್ಸವ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಮಾ.15 ರಂದು ಮೂರ್ನಾಡು ಗೌಡ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.17 NEWS DESK : ಮೂರ್ನಾಡು ಗೌಡ ಮಹಿಳಾ ಒಕ್ಕೂಟ ವತಿಯಿಂದ ಮಾ.15 ರಂದು ಮಹಿಳಾ ದಿನಾಚರಣೆ ಹಾಗೂ…

*ವಿರಾಜಪೇಟೆ ಶ್ರೀ ಮುತ್ತಪ್ಪ ದೇವಾಲಯದ ತೆರೆ ಮಹೋತ್ಸವಕ್ಕೆ ಚಾಲನೆ*

ಮಾರ್ಚ್ 17, 2026

*ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಕೋಟ್ಪಾ ಕಾಯ್ದೆ ಉಲ್ಲಂಘನೆ : 1800 ರೂ.ದಂಡ*

ಮಾರ್ಚ್ 17, 2026

*ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 17, 2026

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.