
ಮಡಿಕೇರಿ ಸೆ.29 NEWS DESK : ವಿಶ್ವ ಹಿಂದೂ ಪರಿಷತ್, ಭಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮೂರ್ನಾಡು ಘಟಕ ಹಾಗೂ ಕೊಡಗು ಆಯುರ್ವೇದ ಕೇರ್ ನ ಸಹಯೋಗದಲ್ಲಿ ಕಾಂತೂರು-ಮೂರ್ನಾಡು ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಘಟಕದ ಅಧ್ಯಕ್ಷ ಚಾರಿಮಂಡ ಚಂಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ತಾಲ್ಲೂಕು ಪ್ರಮುಖ್ ಸಜೀವ, ಭಜರಂಗದಳದ ಪ್ರಮುಖ್ ಮಂಜುನಾಥ್, ಸಹ ಕಾರ್ಯದರ್ಶಿ ಪ್ರದೀಪ್, ಪ್ರಮುಖರಾದ ಪಂದ್ಯಂಡ ರಮೇಶ್, ಆಯುರ್ವೇದ ಕೇರ್ ನ ವೈದ್ಯರುಗಳು ಹಾಗೂ ಸಹಾಯಕಿಯರು ಪಾಲ್ಗೊಂಡಿದ್ದರು.









