Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*
  • *ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*
  • *ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*
  • *ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*
  • *ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*
  • *ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*
  • *ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*
  • *ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*
  • *’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ : ಕೊಡಗಿನ ಕಲಾವೈಭವವನ್ನು ಪ್ರಪಂಚದಾದ್ಯಂತ ಪರಿಚಯಿಸಿ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ : ಕೊಡಗಿನ ಕಲಾವೈಭವವನ್ನು ಪ್ರಪಂಚದಾದ್ಯಂತ ಪರಿಚಯಿಸಿ : ಶಾಸಕ ಎ.ಎಸ್.ಪೊನ್ನಣ್ಣ*

ಸೆಪ್ಟೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.29 NEWS DESK : ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಆ ನಿಟ್ಟಿನಲ್ಲಿ ದಸರಾ ಸಂಸ್ಕೃತಿ ಮತ್ತು ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ..ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಮಳೆಯ ನಡುವೆಯೂ ದಸರಾಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು. ನಾಡಹಬ್ಬ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾಗೆ ಹೆಚ್ಚಿನ ಸ್ಪಂದನೆ ದೊರೆತಿರುವುದು ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಸಾಂಸ್ಕೃತಿಕ ಹಿನ್ನೆಲೆ ಇರುವ ತಮ್ಮದೇ ಆಚರಣೆ ಸಂಸ್ಕೃತಿ, ಕಲೆಗಳ ಪ್ರದರ್ಶನಕ್ಕೆ ಜಾನಪದ ದಸರಾ ಉತ್ತಮ ವೇದಿಕೆಯಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಕೃಷಿಕ ಮಹಿಳೆ ಭಾಗೀರಥಿ ಹುಲಿತಾಳ ಅವರು ಮಾತನಾಡಿ ಜಾನಪದ ಹಾಡು, ಕತೆಗಳು ಎಂದೆಂದಿಗೂ ಸಾರ್ವಕಾಲೀಕವಾಗಿವೆ ಎಂದರು. ಜಾನಪದ ಹಾಡು ಕತೆಗಳು ಪ್ರತಿಯೊಬ್ಬರ ಮನಸ್ಸಿಗೆ ಮುದ ನೀಡುತ್ತವೆ. ಜೊತೆಗೆ ಮನಸ್ಸಿನ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ ಎಂದು ಹುಲಿತಾಳ ಅವರು ಹೇಳಿದರು. ಭಾವಪೂರ್ಣವಾಗಿ ಜಾನಪದ ಗೀತೆಗಳನ್ನು ಹಾಡುವುದು ಇಂದಿಗೂ ಸಹ ಇದೆ. ಜಾನಪದ ಸಾಹಿತ್ಯ ಹಾಡುವುದು ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ವಿಜೃಂಭಣೆಯಿಂದ ನಡೆಯುತ್ತಿರುವುದು ವಿಶೇಷವಾಗಿದೆ. ಮಡಿಕೇರಿ ದಸರಾದಲ್ಲಿ ಜಾನಪದಕ್ಕೂ ಒತ್ತು ನೀಡಿರುವುದು ಶ್ಲಾಘನೀಯ ಎಂದರು. ಮಡಿಕೇರಿ ದಸರಾ ಕರಗ ಉತ್ಸವದೊಂದಿಗೆ ಆರಂಭವಾಗಿ ಮಹಿಳಾ, ಮಕ್ಕಳ, ಯುವ, ಕಾಫಿ ಹೀಗೆ ಹಲವು ದಸರಾವನ್ನು ಆಚರಿಸುತ್ತಿರುವುದು ಮೆಚ್ಚುವಂತದ್ದು ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಕಲೆ ಸಂಸ್ಕೃತಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅರೆಭಾಷೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಶ್ರಮಿಸಲಾಗಿದೆ ಎಂದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ ಅವರು ಮಾತನಾಡಿ ದೇಶ ಬಹು ಸಂಸ್ಕೃತಿ, ಬಹು ಪರಂಪರೆ ವೈವಿದ್ಯತೆಯನ್ನು ಒಳಗೊಂಡಿದ್ದು, ನಾಡಹಬ್ಬ ದಸರಾದಲ್ಲಿಯೂ ಸಹ ವೈವಿದ್ಯತೆಯಲ್ಲಿ ಏಕತೆಯನ್ನು ಕಾಣುತ್ತೇವೆ ಎಂದರು. ಕೊಡಗು ಜಿಲ್ಲಾ ಜಾನಪದ ಪರಿಷತ್ತು ಅಧ್ಯಕ್ಷರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಪಾರಂಪರಿಕ ಜಾನಪದ ದಸರಾವನ್ನು ಉಳಿಸಿ ಬೆಳೆಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು. ನಾಡಿನಲ್ಲಿ ಜಾನಪದ ಕಲೆ, ಸಂಸ್ಕೃತಿಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು ಎಂದರು. ಜಾನಪದ ದಸರಾ ಸಂಚಾಲಕರಾದ ಎಚ್.ಟಿ.ಅನಿಲ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ‘ಜಾನಪದ ವಸ್ತು ಸಂಗ್ರಹಾಲಯಕ್ಕೆ’ ಜಾಗ ಒದಗಿಸುವಂತಾಗಬೇಕು. ಇದರಿಂದ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಮನವಿ ಮಾಡಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್ ಅವರು ಮಾತನಾಡಿದರು. ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಕುಡೆಕಲ್ ಸಂತೋಷ್, ಜಾನಪದ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷರಾದ ಚಂದ್ರಮೋಹನ್, ಪ್ರಕಾಶ್, ಟೋನಿ ಥಾಮಸ್, ಸುಜಲಾದೇವಿ, ಪ್ರಶಾಂತ್, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಲೋಕೇಶ್ ಸಾಗರ್ ಇತರರು ಇದ್ದರು. ಜಾನಪದ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹ್ಮದ್ ಸ್ವಾಗತಿಸಿದರು. ಖಜಾಂಜಿ ಸಂಪತ್ ಕುಮಾರ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಡುಗೆ ಅನಿಲದ ಕೊರತೆ : ಕೇಂದ್ರ ವಿರುದ್ಧ ಕುಶಾಲನಗರದಲ್ಲಿ ಪ್ರತಿಭಟನೆ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಕನ್ನಡ ಸಾಹಿತ್ಯ ಸುದೀರ್ಘವಾದ ಕಾಲದಿಂದ ಜೀವಂತಿಕೆ ಉಳಿಸಿಕೊಂಡು ಬೆಳೆಯುತ್ತಿರುವ ಸಾಹಿತ್ಯ : ಪ್ರೊ.ಡಿ.ಕೆ.ಸರಸ್ವತಿ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.17 NEWS DESK : ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಚಯಿಸುವುದರೊಂದಿಗೆ ಹೊಸ ವಿಚಾರಗಳನ್ನು ತಿಳಿಸಿ ಕನ್ನಡ…

*ಸೋಮವಾರಪೇಟೆ : ಹೋಟೆಲ್ ಹಾಗೂ ಬೇಕರಿಗಳಿಗೆ ಆಹಾರ ನಿರೀಕ್ಷಕರ ಭೇಟಿ*

ಮಾರ್ಚ್ 17, 2026

*ಶ್ರೀ ಚೈತನ್ಯ ಮಠಪುರ ಮುತ್ತಪ್ಪ ದೇವಸ್ಥಾನಕ್ಕೆ ಬೃಹತ್ ಗಾತ್ರದ ಸ್ಟೀಲ್ ಪಾತ್ರೆಯ ಕೊಡುಗೆ*

ಮಾರ್ಚ್ 17, 2026

*ಮಾ.18 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಕೊಡಗಿನಲ್ಲಿ 6,183 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ*

ಮಾರ್ಚ್ 17, 2026

*ಮಾ.27 ರಂದು ಸೋಮವಾರಪೇಟೆಯಲ್ಲಿ ಶ್ರೀ ರಾಮನವಮಿ ಉತ್ಸವ*

ಮಾರ್ಚ್ 17, 2026

*ಮಾ.22 ರಿಂದ ಬಿಳಿಗೇರಿಯ ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 17, 2026

*ಕೊಡಗು ಮಹಿಳಾ ಕಾಂಗ್ರೆಸ್ ನೂತನ ಬ್ಲಾಕ್ ಅಧ್ಯಕ್ಷರುಗಳ ನೇಮಕ*

ಮಾರ್ಚ್ 17, 2026

*ಮಡಿಕೇರಿಯಲ್ಲಿ 132ನೇ ವರ್ಷದ ಶ್ರೀ ರಾಮೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.19 ರಿಂದ ಆರಂಭ*

ಮಾರ್ಚ್ 17, 2026

*’ರತ್ನ ಶ್ರೀ’ ರಾಜ್ಯಮಟ್ಟದ ಪ್ರಶಸ್ತಿಗೆ ಕೂರ್ಗ್ ಬ್ಲಡ್ ಫೌಂಡೇಶನ್ ಕರ್ನಾಟಕ (ರಿ) ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಸಮೀರ್ ಆಯ್ಕೆ*

ಮಾರ್ಚ್ 17, 2026

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.