Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸರ್ವರ ಒಳಿತನ್ನು ಬಯಸುವ ಸಂಸ್ಕೃತಿಯೇ ಹಿಂದೂ ಸಂಸ್ಕೃತಿ : ಪಟ್ಟಡ ಶಿವಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸರ್ವರ ಒಳಿತನ್ನು ಬಯಸುವ ಸಂಸ್ಕೃತಿಯೇ ಹಿಂದೂ ಸಂಸ್ಕೃತಿ : ಪಟ್ಟಡ ಶಿವಕುಮಾರ್*

ಸೆಪ್ಟೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಸೆ.29 NEWS DESK : ಹಿಂದೂ ಧರ್ಮದ ಪ್ರತಿಯೊಂದು ಮಂತ್ರದ ಸಾರ ಸರ್ವರ ಒಳಿತನ್ನು ಸಾಧಿಸುವುದೇ ಆಗಿದೆ ಎಂದು ಉಪನ್ಯಾಸಕ ಪಟ್ಟಡ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಮದೆ ಗ್ರಾಮದ ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಡೆದ ನವರಾತ್ರಿ ಉತ್ಸವದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಹಿಂದೂ ಧರ್ಮ ಪ್ರತಿಯೊಬ್ಬರ ಭಾವನೆಗಳಿಗೆ ಬೆಲೆ ನೀಡಿ, ಅವರಿಗಿಷ್ಟ ಬಂದ ರೀತಿಯಲ್ಲಿ ಧಾರ್ಮಿಕ ಆಚರಣೆಗಳನ್ನು ನಡೆಸಲು ಅವಕಾಶ ನೀಡಿದೆ. ಆದ್ದುದರಿಂದ ಇಲ್ಲಿ ಭಗವಂತನನ್ನು ಹಲವು ರೂಪದಲ್ಲಿ ಹಾಗೂ ಹಲವು ವಿಧಾನಗಳಲ್ಲಿ ಪೂಜಿಸುವ ಅವಕಾಶ ದೊರೆತಿದೆ ಎಂದರು. ಪ್ರಸ್ತುತ ಜಗತ್ತಿನ ಸಮಸ್ಯೆಗಳನ್ನು ಬಗೆಹರಿಸಲು ಹಿಂದೂ ಸಂಸ್ಕೃತಿಗೆ ಮಾತ್ರ ಸಾಧ್ಯವಿದೆ, ಏಕೆಂದರೆ ಹಿಂದೂ ಸಂಸ್ಕೃತಿ ಜಗತ್ತಿನ ಸರ್ವರ ಕಲ್ಯಾಣವನ್ನು ಬಯಸುತ್ತದೆ, ವಸುದೈವ ಕುಟುಂಬಕಂ, ಅಂದರೆ ಇಡೀ ಜಗತ್ತು ಒಂದೇ ಕುಟುಂಬಕ್ಕೆ ಸೇರಿದ್ದು ಎಂಬ ಭಾವನೆಯನ್ನು ಹೊಂದಿರುವ ಹಿಂದೂ ಸಂಸ್ಕೃತಿ ಅತ್ಯಂತ ಶ್ರೇಷ್ಠ ಸಂಸ್ಕೃತಿ ಎಂದು ಬಣ್ಣಿಸಿದರು. ಹಿಂದೂ ದೇವಾಲಯಗಳು ಹಾಗೂ ಮಠ ಮಂದಿರಗಳು ನಿತ್ಯ ನಿರಂತರವಾಗಿ ಅನ್ನದಾಸೋಹ, ಅಕ್ಷರ ದಾಸೋಹಗಳ ಮೂಲಕ ನಮ್ಮ ಸಮಾಜಕ್ಕೆ ಅನನ್ಯ ಕೊಡುಗೆ ನೀಡುತ್ತಾ ಬಂದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ನಮ್ಮ ದೇವಾಲಯಗಳು ಸಂಸ್ಕೃತಿ, ಕಲೆ, ಸಂಗೀತ ನೃತ್ಯಗಳಿಗೆ ಪ್ರಾಶಾಸ್ತ್ಯ ನೀಡಿ ಭಾರತದ ಸಾಂಸ್ಕೃತಿಕ ಮೌಲ್ಯವನ್ನು ಎತ್ತಿ ಹಿಡಿದಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಬೆಳಕಿಗಾಗಿ ಕಾಯುತ್ತಿದೆ ಮತ್ತು ಆ ಬೆಳಕನ್ನು ನೀಡಲು ಭಾರತ ಮಾತ್ರ ಶಕ್ತವಾಗಿದೆ ಎಂದಿದ್ದರು. ಭಾರತದ ನವ ಪೀಳಿಗೆ ಹಿಂದೂ ಸಂಸ್ಕೃತಿಯ ಒಳ್ಳೆಯ ಅಂಶಗಳನ್ನು ಮೈಗೂಡಿಸಿಕೊಂಡು ಸಂಸ್ಕಾರವನ್ನು ಬೆಳೆಸಿಕೊಳ್ಳುವ ಮೂಲಕ ಸಮಾಜಕ್ಕೆ ಮತ್ತು ದೇಶಕ್ಕೆ ಯೋಗ್ಯ ಪ್ರಜೆಗಳಾಗಿ ವಿಶ್ವಕ್ಕೆ ಮಾದರಿಯಾಗಿ ಬೆಳೆಯಬೇಕೆಂದು ಅವರು ಕರೆ ನೀಡಿದರು. ಇತ್ತೀಚೆಗೆ ಹಲವಾರು ಹಳ್ಳಿಹಳ್ಳಿಗಳಲ್ಲಿ ಮಹಿಳೆಯರು ಪುರುಷರೆನ್ನದೆ ಭಜನಾ ತಂಡಗಳನ್ನು ಕಟ್ಟಿಕೊಳ್ಳುವ ಮೂಲಕ, ಮಕ್ಕಳಲ್ಲಿ ಸಂಸ್ಕಾರದ ಬೀಜವನ್ನು ಬಿತ್ತುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಹಿಂದೂ ಧರ್ಮವೆನ್ನುವುದು ಕೇವಲ ಧರ್ಮವಲ್ಲ ಅದೊಂದು ಜೀವನ ಸಂಸ್ಕೃತಿಯಾಗಿದೆ, ಪ್ರತಿಯೊಂದು ಜೀವಿಯಲ್ಲೂ ದೇವರನ್ನು ಕಾಣುವ ಈ ಸಂಸ್ಕೃತಿ ಪ್ರಕೃತಿಯನ್ನೇ ತಾಯಿಯ ರೂಪದಲ್ಲಿ ಅಂದರೆ ದೇವಿಯ ರೂಪದಲ್ಲಿ ಪೂಜಿಸುವ ಪದ್ಧತಿಯನ್ನು ಅನುಸರಿಸುತ್ತಿದೆ, ಇದು ಭಾರತೀಯ ಸಂಸ್ಕೃತಿಯೂ ಆಗಿದ್ದು, ಇಂದು ವಿಶ್ವದ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಆದುದರಿಂದ ಈ ಸಂಸ್ಕೃತಿಯಲ್ಲಿ ಹುಟ್ಟಿದ್ದಕ್ಕೆ ನಾವು ಹೆಮ್ಮೆ ಪಟ್ಟುಕೊಂಡು ಭಾರತವನ್ನು ವಿಶ್ವ ಗುರುವಾಗಿಸುವತ್ತ ಮುನ್ನಡೆಸಬೇಕೆಂದು ಮನವಿ ಮಾಡಿದರು. ಮದೆನಾಡು ಕಾಫಿ ಲಿಂಕ್ಸ್ ಉದ್ಯಮಿ ಬಿ.ಸಿ.ಕೀರ್ತಿ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೋಡು ಪಾಲ ಗೌರಿ ಗಣೇಶ ಸಮಿತಿ ಅಧ್ಯಕ್ಷ ದೀಕ್ಷಿತ್, 2ನೇ ಮೊಣ್ಣಂಗೇರಿಯ ಬಿ.ಎಂ.ಬಾಬು, ಬೆಂಗಳೂರಿನ ಲೋಕನಾಥ್ ಮುಳ್ಯ, ಜೋಡುಪಾಲದ ಜಸ್ಮಿತಾರಾಜು, ಭವ್ಯ ಸಣ್ಣಮನೆ ಉಪಸ್ಥಿತರಿದ್ದರು. ಚಾಮುಂಡೇಶ್ವರಿ ದೇವಸ್ಥಾನ ಮಂಡಳಿಯ ಉಪಾಧ್ಯಕ್ಷ ಕೆ.ಆರ್.ರಾಜು ಸ್ವಾಗತಿಸಿದರು, ಧರ್ಮಸ್ಥಳ ಜನಜಾಗೃತಿ ಸಮಿತಿ ಉಪಾಧ್ಯಕ್ಷ ಆಗೋಳಿಕಜೆ ಧನಂಜಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವರದಿ : ದುಗ್ಗಳ ಸದಾನಂದ 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.