
ಮಡಿಕೇರಿ ಸೆ.28 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಸೆ.30 ರಂದು ಗಾಂಧಿ ಮೈದಾನದ ಕಲಾ ಸಂಭ್ರಮ ಸಭಾಂಗಣದಲ್ಲಿ 12ನೇ ವಷ೯ದ ಮಕ್ಕಳ ದಸರಾ ಆಯೋಜಿತವಾಗಿದೆ ಎಂದು ಮಕ್ಕಳ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಸಹಯೋಗದಲ್ಲಿ ಸೆ.30 ರಂದು ಮಂಗಳವಾರ ಬೆಳಗ್ಗೆ 9 ಗಂಟೆಯಿಂದಲೇ ಗಾಂಧಿ ಮೈದಾನದಲ್ಲಿ ಮಕ್ಕಳಿಗಾಗಿ ಮಕ್ಕಳ ಅಂಗಡಿ, ಸಂತೆ. ಮಂಟಪ , ಛದ್ಮವೇಷ ಕ್ಲೇ ಮಾಡೆಲಿಂಗ್ ಸ್ಪಧೆ೯ಗಳು ಆಯೋಜಿಸಲ್ಪಟ್ಟಿವೆ. ಜಿಲ್ಲಾದಿಕಾರಿ ವೆಂಕಟರಾಜಾ ಮಕ್ಕಳ ದಸರಾ ಉದ್ಘಾಟಿಸಲಿದ್ದು, ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ರೋಟರಿ ಮಿಸ್ಟಿ ಹಿಲ್ಸ್ , ಕಾಯ೯ದಶಿ೯ ಬಿ.ಕೆ. ಕಾಯ೯ಪ್ಪ, ದಸರಾ ಸಮಿತಿ ಅಧ್ಯಕ್ಷೆ ಕಲಾವತಿ, ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಸಮಿತಿ ಕಾಯಾ೯ಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾಯ೯ದಶಿ೯ ಅರುಣ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ. ಈ ವಷ೯ ಅತ್ಯಧಿಕ ಸಂಖ್ಯೆಯಲ್ಲಿ ಸ್ಪಧಿ೯ಗಳು ಮಕ್ಕಳ ದಸರಾಕ್ಕೆ ನೋಂದಣಿ ಮಾಡಿಕೊಂಡಿರುವ ಹಿನ್ನಲೆಯಲ್ಲಿ ಸ್ಪಧೆ೯ಗಳನ್ನು ಬೆಳಗ್ಗೆ 9 ಗಂಟೆಗೇ ಪ್ರಾರಂಭಿಸಲಾಗುತ್ತದೆ ಎಂದೂ ಅನಿಲ್ ಮಾಹಿತಿ ನೀಡಿದ್ದಾರೆ.







