Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾರ್ಗ ಮಧ್ಯೆ ಕೆಟ್ಟು ನಿಂತ ಬಸ್‌ : ನೂತನ ಬಸ್ ನಿಯೋಜನೆಗೆ ಸಾರ್ವಜನಿಕರ ಆಗ್ರಹ*
ಇತ್ತೀಚಿನ ಸುದ್ದಿಗಳು

*ಮಾರ್ಗ ಮಧ್ಯೆ ಕೆಟ್ಟು ನಿಂತ ಬಸ್‌ : ನೂತನ ಬಸ್ ನಿಯೋಜನೆಗೆ ಸಾರ್ವಜನಿಕರ ಆಗ್ರಹ*

ಸೆಪ್ಟೆಂಬರ್ 30, 20251 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಸೋಮವಾರಪೇಟೆ ಸೆ.30 NEWS DESK : ಸಕಲೇಶಪುರ ಡಿಪ್ಪೋಗೆ ಸೇರಿದ ಹಳೆಯ ಕೆ.ಎಸ್.ಆರ್.ಟಿ.ಸಿ ಬಸ್ ಒಂದು ಮಾರ್ಗ ಮಧ್ಯೆಯೇ ಹಲವು ಬಾರಿ ನಿಂತು ಪ್ರಯಾಣಿಕರಿಗೆ ತೊಂದರೆ ಉಂಟುಮಾಡಿದ ಘಟನೆ ಕೂತಿ–ತೋಳುರುಶೆಟ್ಟಳ್ಳಿ ಮಾರ್ಗದಲ್ಲಿ ನಡೆದಿದೆ. ಹೆತ್ತೂರು–ವನಗೂರು–ಕೂಡುರಸ್ತೆ–ಕೂತಿ–ತೋಳುರುಶೆಟ್ಟಳ್ಳಿ ಮಾರ್ಗವಾಗಿ ಸೋಮವಾರಪೇಟೆಗೆ ಮಧ್ಯಾಹ್ನ 12 ಗಂಟೆಗೆ ತಲುಪಬೇಕಾದ ಸರ್ಕಾರಿ ಸಾರಿಗೆ ಬಸ್ ಇಂದು ಹಲವೆಡೆ ನಿಂತು, ಎತ್ತರದ ಪ್ರದೇಶದ ರಸ್ತೆಯಲ್ಲಿ ಚಳಿಸದೇ ಪ್ರಯಾಣಿಕರನ್ನು ಕೆಳಗಿಳಿಸಿ ನಂತರ ಮತ್ತೆ ಹತ್ತಿಸಿಕೊಂಡು ಸಾಗುವ ಪರಿಸ್ಥಿತಿ ಎದುರಾಯಿತು. ಇದರಿಂದಾಗಿ ಬಸ್ ಸುಮಾರು ಒಂದು ಗಂಟೆ ತಡವಾಗಿ ಸೋಮವಾರಪೇಟೆಗೆ ತಲುಪಿತು. ಈ ಘಟನೆಯಿಂದ ಬೇಸತ್ತ ಸಾರ್ವಜನಿಕರು ಸೋಮವಾರಪೇಟೆ ಸಂಚಾರಿ ನಿರೀಕ್ಷಕ ಹಾಗೂ ಬಸ್ ಚಾಲಕ ಮತ್ತು ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯು ನಡೆಯಿತು. ಪ್ರತಿದಿನ ಈ ಮಾರ್ಗದಲ್ಲಿ ಹಳೆಯ ‘ಗುಜರಿ’ ಬಸ್ಸುಗಳನ್ನು ನಿಯೋಜಿಸುವುದರಿಂದ ನಿರಂತರ ತೊಂದರೆ ಎದುರಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಕಲೇಶಪುರ ಡಿಪ್ಪೋ ವ್ಯವಸ್ಥಾಪಕರಿಗೆ ಹಲವಾರು ಬಾರಿ ಸಮಸ್ಯೆ ತಿಳಿಸಿದರು ಈ ವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಬಸ್‌ಗಳು ಹಳೆಯದಾಗಿದ್ದು, ಮಲೆನಾಡು ಪ್ರದೇಶವಾಗಿರುವ ಈ ಮಾರ್ಗದಲ್ಲಿ ರಸ್ತೆಯು ಇಳಿಜಾರು ಹಾಗೂ ಎತ್ತರದ ಪ್ರದೇಶದಿಂದ ಕೂಡಿದ್ದು ಬಸ್ ಚಾಲಕರು ಜೀವ ಕೈಯಲ್ಲಿ ಹಿಡಿದು ಓಡಿಸಬೇಕಾದ ಪರಿಸ್ಥಿತಿ ಪ್ರತಿದಿನ ನಿರ್ಮಾಣವಾಗಿದೆ. ಬಸ್ ನಲ್ಲಿ ಚಲಿಸುವ ಪ್ರಯಾಣಿಕರ ಗತಿಯೇನು ಎಂಬುದು ಪ್ರಶ್ನೆಯಾಗಿದೆ. ಮಡಿಕೇರಿ-ಸೋಮವಾರಪೇಟೆ ಹಾಗೂ ಸಕಲೇಶಪುರ ಭಾಗದ ಇಬ್ಬರು ಶಾಸಕರು ತಕ್ಷಣವೇ ಗಮನಹರಿಸಿ ಹೊಸ ಬಸ್ಸುಗಳನ್ನು ನಿಯೋಜಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರ : ಟ್ರೇಡ್ಸ್ ಹಾಗೂ ಇಎಸ್‍ಎಂ ಯೋಜನೆ ಕುರಿತು ಅರಿವು ಕಾರ್ಯಾಗಾರ*
Next Article *ಮೈಸೂರಿನ ನಗರ ಕೇಂದ್ರಾಲಯಕ್ಕೆ ಎಸ್‌ಎಲ್‌ ಭೈರಪ್ಪ ಹೆಸರಿಡಲು ಯದುವೀರ್‌ ಮನವಿ : ಮುಖ್ಯಮಂತ್ರಿಗೆ ಪತ್ರ ಬರೆದಿರುವ ಮೈಸೂರು-ಕೊಡಗು ಸಂಸದರು*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.