Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗೆ 4ನೇ ಬಾರಿಗೆ ಅತ್ಯುತ್ತಮ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗೆ 4ನೇ ಬಾರಿಗೆ ಅತ್ಯುತ್ತಮ ಪ್ರಶಸ್ತಿ*

ಸೆಪ್ಟೆಂಬರ್ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಸೆ.30 NEWS DESK : ರಾಜ್ಯದ 183 ಪಿಕಾರ್ಡ್ ಬ್ಯಾಂಕುಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ಗೆ ನಾಲ್ಕನೇ ಬಾರಿಗೆ ಕಾಸ್ಕಾರ್ಡ್ ಬ್ಯಾಂಕ್ ನೀಡುವ ಅತ್ಯುತ್ತಮ ಪ್ರಶಸ್ತಿ ಲಭಿಸಿದ್ದು, ವಸೂಲಾತಿಯಲ್ಲಿಯೂ ಎರಡು ಬಾರಿ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು ಬ್ಯಾಂಕ್‍ನ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ತನ್ನ ನೇತೃತ್ವದಲ್ಲಿ ಕಳೆದ ಮೂರು ವರ್ಷಗಳಿಂದ ರಾಜ್ಯದ 183 ಬ್ಯಾಂಕ್‍ಗಳ ಪೈಕಿ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಕಾಸ್ಕಾರ್ಡ್ ಬ್ಯಾಂಕ್ ನೀಡುವ ಅತ್ಯುತ್ತಮ ಪ್ರಶಸ್ತಿ ಭಾಜನವಾಗಿದೆ. ಈ ಸಾಲಿನಲ್ಲಿಯೂ ಎರಡು ಅತ್ಯುತ್ತಮ ಪ್ರಶಸ್ತಿಗಳಾದ ಶೇಕಡವಾರು ಅತೀ ಹೆಚ್ಚು ವಸೂಲಾತಿ (ಶೇ.98.60) ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ನೀಡುವ ಪ್ರಶಸ್ತಿಯನ್ನು 19ನೇ ಬಾರಿ ಪಡೆದಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಸ್ಕಾರ್ಡ್ ಬ್ಯಾಂಕ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಗಿದ್ದು, ಕಾಸ್ಕಾರ್ಡ್ ಬ್ಯಾಂಕ್ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಷಡಕ್ಷರಿ, ಜಿಲ್ಲಾ ನಿರ್ದೇಶಕರು, ಶಾಸಕರಾದ ಎ.ಮಂಜು, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ವಿ.ಕೆ.ಪ್ರಸನ್ನ ಕುಮಾರ್ ಹಾಗೂ ಆಡಳಿತ ಮಂಡಳಿಯವರು ಹಾಜರಿದ್ದರು ಎಂದರು. ಬ್ಯಾಂಕ್ ಸತತವಾಗಿ ಹತ್ತೊಂಬತ್ತು ವರ್ಷಗಳಿಂದ ಲಾಭದಲ್ಲಿದ್ದು, ಸದಸ್ಯರಿಗೆ ಶೇ.8 ರಷ್ಟು ಡಿವಿಡೆಂಟ್ ನೀಡಿದೆ. ಅಲ್ಲದೆ ಆಕರ್ಷಕ ಬಡ್ಡಿ ದರದಲ್ಲಿ ನಿಶ್ಚಿತ ಠೇವಣಿಯನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು. ಬ್ಯಾಂಕ್ 2024-25ನೇ ಸಾಲಿನಲ್ಲಿ 89,15,56,631 ವ್ಯವಹಾರ ಮಾಡಿದೆ. ಬ್ಯಾಂಕಿನಲ್ಲಿ ಠೇವಣಿ ರೂ.10,51,03,560 ಠೇವಣಿ ಸಂಗ್ರಹವಾಗಿರುತ್ತದೆ. ಸಾಲದ ಹೊರಬಾಕಿ ರೂ.25,22,64,253 ಇದ್ದು, ಪ್ರಸಕ್ತ ಸಾಲಿನಲ್ಲಿ ರೂ.2,00,83,928 ರಷ್ಟು ಲಾಭ ಗಳಿಸಿದೆ ಎಂದು ಮನು ಮುತ್ತಪ್ಪ ಹೇಳಿದರು. 1957 ಫೆಬ್ರವರಿ 13 ರಂದು 25 ಸದಸ್ಯರ ರೂ.3,000 ಷೇರು ಬಂಡವಾಳದೊಂದಿಗೆ ಆರಂಭಗೊಂಡ ಮಡಿಕೇರಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್, ಇಂದು 2772 ಸದಸ್ಯರನ್ನು ಹೊಂದಿದ್ದು, ಪಾಲು ಬಂಡವಾಳ ರೂ.160.60 ಲಕ್ಷ ಇರುತ್ತದೆ. ತಾಲ್ಲೂಕಿನ ಖಾಲಿ ಜಮ್ಮಾ ಬಾಣೆ ಜಮೀನಿಗೆ ಸಾಲ ಸೌಲಭ್ಯವನ್ನು ನೀಡಿದ ಪ್ರಥಮ ಬ್ಯಾಂಕ್ ಆಗಿದ್ದು, ಇದರಿಂದ ತಾಲ್ಲೂಕಿನ ಸಾವಿರಾರು ಎಕರೆಯಲ್ಲಿ ಕಾಫಿ ತೋಟ ಹಾಗೂ ಕಾಳಮೆಣಸು, ಅಡಿಕೆ, ತೆಂಗು, ರಬ್ಬರ್ ಸಂಸ್ಕರಣ ಘಟಕ, ಟ್ರಾಕ್ಟ್‍ರ್, ಸ್ವೀಂಕ್ಲರ್ ಸೆಟ್, ವಾಹನ ಸಾಲ, ರಬ್ಬರ್ ತೋಟದ ಅಭಿವೃದ್ಧಿಗೆ ಇನ್ನಿತರ ಸಾಲ ನೀಡಿದೆ ಎಂದು ತಿಳಿಸಿದರು. ಇದರ ಜೊತೆಗೆ ಸಕಾಲದಲ್ಲಿ ಯಾವುದೇ ಪ್ರತಿಫಲಾಪೇಕ್ಷ ಇಲ್ಲದೆ ಸಾಲ ಮರುಪಾತಿ ಮಾಡುತ್ತೀರುವ ಸದಸ್ಯರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯದಲ್ಲಿಯೇ ಬ್ಯಾಂಕಾಗಿ ಚಾಲ್ತಿ ಕಂತನ್ನು ಮರುಪಾವತಿ ಮಾಡುವ ಸಾಲ ಪಡೆದ ಸದಸ್ಯರಿಗೆ ಲಾಭದಲ್ಲಿ ಕಾದಿರಿಸಿದ ಮೊಬಲಗಿನಿಂದ ರೂ.5 ಸಾವಿರ ವರೆಗೆ ಬಡ್ಡಿ ರಿಯಾಯ್ತಿ ನೀಡುತ್ತಿರುವುದು ಬ್ಯಾಂಕಿಗೆ ಹೆಗ್ಗಳಿಕೆಯಾಗಿದೆ ಎಂದರು. ಪ್ರತಿವರ್ಷ ಸಾಲ ಪಡೆದ ರೈತ ಸದಸ್ಯರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದು ಮನು ಮುತ್ತಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ, ನಿರ್ದೇಶಕರಾದ ಹೆಚ್.ಆರ್.ವಾಸಪ್ಪ, ಅಲ್ಲಾರಂಡ ಬೀನಾ ಬೊಳ್ಳಮ್ಮ, ಪ್ರಬಾರÀ ವ್ಯವಸ್ಥಾಪಕರಾದ ಕೆ.ಎನ್.ಸುಪರ್ಣ ಹಾಗೂ ಸಿಬ್ಬಂದಿ ತೊತ್ತಿಯನ ಎ.ಚಂದ್ರಶೇಖರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.