
ಮಡಿಕೇರಿ NEWS DESK ಅ.1 : ನಗರದ ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ 107ನೇ ವರ್ಷದ ಉತ್ಸವ ಆಚರಣೆಗೆ ಸಜ್ಜಾಗುತ್ತಿದೆ ಎಂದು ದೇಚೂರು ಶ್ರೀ ರಾಮಮಂದಿರ ದೇವಾಲಯ ದಸರಾ ಮಂಟಪ ಸಮಿತಿ ಅಧ್ಯಕ್ಷ ಎ.ವೇಣುಗೋಪಾಲ್ ತಿಳಿಸಿದ್ದಾರೆ. 1 ಟ್ರ್ಯಾಕ್ಟರ್ ನ್ನು ಬಳಸಲಾಗುತ್ತಿದ್ದು, ಶ್ರೀರಾಮಾಂಜನೇಯ ವೈಭವ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ. ದಿಂಡಿಗಲ್ ಜೇಮ್ಸ್ ಲೈಟಿಂಗ್ ಬೋರ್ಡ್ ಅಳವಡಿಸಲಿದ್ದು, ಧ್ವನಿವರ್ಧಕ ಹಾಗೂ ಸ್ಟುಡಿಯೋ ಸೆಟ್ಟಿಂಗ್ಸ್ ವ್ಯವಸ್ಥೆಯನ್ನು ಸೋಮವಾರಪೇಟೆಯ ನಂದಿ ಸೌಂಡ್ಸ್ ನವರು ಮಾಡಲಿದ್ದಾರೆ. ಪ್ಲಾಟ್ ಫಾರಂನ್ನು ಸಮಿತಿ ಸದಸ್ಯರೆ ನಿರ್ಮಾಣ ಮಾಡಲಿದ್ದು, ಟ್ರ್ಯಾಕ್ಟರ್ ಸೆಟ್ಟಿಂಗ್ಸ್ ನ್ನು ಮಡಿಕೇರಿಯ ಅರುಣ ಮತ್ತು ತಂಡ ಮಾಡಲಿದೆ. 6 ಕಲಾಕೃತಿಗಳನ್ನು ಬಳಸಲಾಗುತ್ತಿದ್ದು, ಹುದುಬೂರಿನ ಮಹದೇವಪ್ಪ ಅಂಡ್ ಸನ್ಸ್ ಕಲಾಕೃತಿಗಳನ್ನು ತಯಾರಿಸಲಿದ್ದಾರೆ. ಒಟ್ಟು ರೂ.13 ಲಕ್ಷ ವೆಚ್ಚದಲ್ಲಿ ಮಂಟಪವನ್ನು ಹೊರತರಲಾಗುತ್ತಿದ್ದು, ಮಂಗಳೂರಿನ ಟೀಂ ಎಸ್‌ವಿ ಮಂಟಪವನ್ನು ಮುನ್ನಡೆಸಲಿದೆ ಎಂದು ವೇಣುಗೋಪಾಲ್ ಮಾಹಿತಿ ನೀಡಿದರು.









