


ವಿರಾಜಪೇಟೆ ಅ.6 : NEWS DESK : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ ವ್ಯವಸ್ಥೆ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್ ಹಾಗೂ ಇಂಟರ್ನ್ ಷಿಪ್, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್ ಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ. ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್ ಗಳಲ್ಲೂ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತಿದೆ. ಜೊತೆಗೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕೇಂದ್ರಿತ ಕಾರ್ಯಕ್ರಮಗಳನ್ನು ಪ್ರತಿ ವರ್ಷವೂ ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಿರಾಜಪೇಟೆಯಲ್ಲಿಯೇ ಕಲಿಯುವ ಅವಕಾಶವಿದ್ದು, ಈ ಶೈಕ್ಷಣಿಕ ಸಾಲಿಗೆ ಪ್ರಥಮ ಎಂ.ಕಾಂ ತರಗತಿಗೆ ಪ್ರವೇಶಾತಿಯು ಆರಂಭಗೊಂಡಿದೆ. ವಿದ್ಯಾರ್ಥಿಗಳು ಕಾಲೇಜಿನ ವೇಳೆಯಲ್ಲಿ ಆಗಮಿಸಿ ಪ್ರವೇಶಾತಿಯನ್ನು ಪಡೆದುಕೊಳ್ಳಬೇಕಾಗಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಹಾಗೂ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.










