Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*
  • *ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡಿನಲ್ಲಿ ಆಯುಧ ಪೂಜೆ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡಿನಲ್ಲಿ ಆಯುಧ ಪೂಜೆ ಸಂಭ್ರಮ*

ಅಕ್ಟೋಬರ್ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೂರ್ನಾಡು ಅ.6 NEWS DESK : ಮೂರ್ನಾಡುವಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯುಧ ಪೂಜಾ ಕಾರ್ಯಕ್ರಮವು ಅತಿ ವಿಜೃಂಭಣೆಯಿಂದ ಜರುಗಿತು. ಮೂರ್ನಾಡು ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಿರ್ಮಿಸಲಾದ ಭವ್ಯ ಅಲಂಕೃತ ವೇದಿಕೆಯಲ್ಲಿ 32ನೇ ವರ್ಷದ ಆಯುಧ ಪೂಜೆಯ ಕಾರ್ಯಕ್ರಮಗಳಲ್ಲಿ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯನ್ನು ನೆರವೇರಿತು. ನಂತರ ಮುಖ್ಯ ರಸ್ತೆಯಲ್ಲಿ ಸಾಗಿದ ಮೆರವಣಿಗೆಯಲ್ಲಿ ವಿಶೇಷವಾಗಿ ಅಲಂಕೃತಗೊಂಡ ವಾಹನಗಳಲ್ಲಿ ಏಳುಮಲೆ ಮುದ್ದು ಮಾದಪ್ಪ, ಬಡವರ ಗುಡಿಸಲು ಮನೆ, ಕೊಡಗಿನ ಕಾವೇರಿ ಮಾತೆ, ಪರಿಶುದ್ದ ಗಾಳಿಗೆ ಅಗ್ರಸ್ಥಾನ ಪಡೆದ ಮಡಿಕೇರಿ, ಶಬರಿಮಲೆ ಅಯ್ಯಪ್ಪ, ಈಸಲ ಕಪ್ ನಮ್ದೆ ಚಿನ್ನಸ್ವಾಮಿ ಕ್ರೀಡಾಂಗಣ, ವಿಷ್ಣುವಿನ ವರಾಹರೂಪಂ, ಜಸ್ಟೀಸ್ ಫಾರ್ ಸೌಜನ್ಯ, ದೇವಿ ಮಹಾತ್ಮೆ, ಪಿಲಿ ನಲಿಕೆ, ಭೂಲೋಕಕ್ಕೆ ಭೂದೇವಿಯ ಆಗಮನ, ಹೆಂಡತಿಯಿಂದ ವಿಚ್ಛೇದನ ಪಡೆದ ಖುಷಿಗೆ 40 ಲೀಟರ್ ಹಾಲಿನಿಂದ ಸ್ನಾನ ಮಾಡಿದ ಭೂಪ ಹೀಗೆ ಇನ್ನು ಹಲವಾರು ಸ್ತಬ್ದ ಚಿತ್ರಗಳು, ಕಲಾಕೃತಿಗಳು ಮತ್ತು ಕ್ಯಾಲಿಕಟ್‍ನ ಶ್ರೀಹರಿ ಕಲಾ ಸಮಿತಿಯ ಗೊಂಬೆ ಕುಣಿತ ಮತ್ತು ಸುಳ್ಯದ ವಾದ್ಯಗೋಷ್ಠಿಗಳು ವೀಕ್ಷಕರ ಗಮನ ಸೆಳೆದವು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂರ್ನಾಡು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಎಸ್.ಎಂ.ದೇಚಮ್ಮ ಮಾತನಾಡಿ, ಭಾರತ ಸನಾತನ ಸಂಸ್ಕøತಿಯ ಅದ್ಧೂರಿಯ ಹಬ್ಬವೆಂದರೆ ದಸರಾ ಹಬ್ಬವಾಗಿದೆ. ಹಿಂದು ಸಂಸ್ಕೃತಿ ಯಲ್ಲಿ ಎರಡು ನವರಾತ್ರಿಗಳು ಬರುತ್ತದೆ. ಒಂದು ಶರವನ್ನಾವರಾತ್ರಿ ಮತ್ತು ವಸಂತ ನವರಾತ್ರಿ. ಆದರೆ ಶರವನ್ನಾವರಾತ್ರಿ ಹೆಚ್ಚು ಪ್ರಸಿದ್ಧಿ ಪಡೆದುಕೊಂಡಿದೆ. ವಿಜಯದಶಮಿಯ 9ನೇ ದಿನದ ಆಯುಧಪೂಜೆಯ ಮಹತ್ವ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ತಮ್ಮ ಜೀವನಕ್ಕೆ ಆಧಾರವಾದ ಪರಿಕರಗಳನ್ನು ಪೂಜಿಸಿ ಅದಕ್ಕೆ ಗೌರವವನ್ನು ನೀಡುವ ಮೂಲಕ ಎಲ್ಲರೂ ಆಯೂಧ ಪೂಜೆಯನ್ನು ನೆರವೇರಿಸುವುದು ಗಮನಾರ್ಹವಾಗಿದೆ ಎಂದು ಆಯುಧ ಪೂಜೆಯ ಪೌರಾಣಿಕ ಹಿನ್ನಲೆಯನ್ನು ಹೇಳಿದರು. ಸಂಘದ ಸದಸ್ಯರು ಸಮಾಜಮುಖಿ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಕುಶನ್‍ರೈ, ವಿರಾಜಪೇಟೆಯ ಲಯನ್ಸ್ ಕ್ಲಬ್‍ನ ಅಧ್ಯಕ್ಷ ಮತ್ತು ವಕೀಲರಾದ ಬಿ.ಎ.ಕೃಷ್ಣಮೂರ್ತಿ, ಮೂರ್ನಾಡು ಮಾರುತಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮುಂಡಂಡ ಅಪ್ಪಚ್ಚು, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ.ಚಂದ್ರಶೇಖರ್, ಮೂರ್ನಾಡು ಕಂದಾಯ ಇಲಾಖೆಯ ಗ್ರಾಮಾಡಳಿತಾಧಿಕಾರಿ ಅಕ್ಷತ ಬಿ.ಶೆಟ್ಟಿ, ಬೆಂಗಳೂರಿನ ಸಿಗ್ಮಾ ನೆಟ್‍ವರ್ಕ್‍ನ ಮಾಲೀಕ ಅವರೆಮಾದಂಡ ಶರಣ್ ಪೂಣಚ್ಚ ಮತ್ತು ಮೂರ್ನಾಡು ಪೊಲೀಸ್‍ಉಪಠಾಣಾಧಿಕಾರಿ ಪಟ್ರಪಂಡ ಮೊಣ್ಣಪ್ಪ ಅವರುಗಳು ಮಾತನಾಡಿದರು. ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಕರವಂಡ ಕೆ. ಸಜನ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಬಿ.ಎಸ್.ರೇಖಾ ಬಾಲು, ಸಂಘದ ಗೌರವಾಧ್ಯಕ್ಷ ಎನ್.ಕೆ.ಕುಂಞರಾಮ, ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು, ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ, ಮೂರ್ನಾಡು ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಬಿ.ಎಸ್. ಪುಷ್ಪಾವತಿ, ಮೂರ್ನಾಡು ಮುಸ್ಲಿಂ ಜಮಾಅತ್‍ನಅಧ್ಯಕ್ಷ ಕೆ.ಎ. ಅಬ್ದುಲ್ ಮಜೀದ್, ಸಂಘದ ಉಪಾಧ್ಯಕ್ಷ ಅಶ್ವಥ್ ರೈ, ಕಾರ್ಯದರ್ಶಿ ಎನ್.ಎನ್.ಶರಣು, ಖಜಾಂಚಿ ಹೆಚ್.ಹೆಚ್. ಜಯಂತ್‍ಕುಮಾರ್, ಸಹ ಕಾರ್ಯದರ್ಶಿ ದಿನೇಶ್‍ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಸಂಜೀವಿನಿ ಘನ ತ್ಯಾಜ್ಯ ವಿಂಗಡಣಾಘಟಕದ ಮಹಿಳಾ ಸಿಬ್ಬಂದಿಗಳು ಮತ್ತು ಕಳೆದ ಸಾಲಿನಲ್ಲಿ 10ನೇ ತರಗತಿಯಲ್ಲಿಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಲಂಕೃತಗೊಂಡ ಮೋಟಾರು ರಹಿತ ದ್ವಿಚಕ್ರ(ಸೈಕಲ್), ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ, ಆರುಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ನಗದು ಬಹುಮಾನ ಹಾಗೂ ಪಾರಿತೋಷಕಗಳನ್ನು ಮುಖ್ಯ ಅತಿಥಿಗಳು ವಿತರಿಸಿದರು. ಸುಕನ್ಯ ಪ್ರಾರ್ಥಿಸಿದರು. ಅಶ್ವಥ್‍ರೈ ಸ್ವಾಗತಿಸಿ, ಎನ್.ಎನ್.ಶರಣು ವರದಿ ವಾಚಿಸಿ, ಕಿಶೋರ್‍ರೈ ಕತ್ತಲೆಕಾಡು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಂಘದ ವತಿಯಿಂದ ನೆರೆದಿದ್ದ ಎಲ್ಲಾ ಸಾರ್ವಜನಿಕರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಭಾಕಾರ್ಯಕ್ರಮದ ನಂತರ ವಿನೋದ್‍ಕರ್ಕೆರ ಅವರ ಮೈಸೂರಿನ ಸಿಗ್ನೇಚರ್ ಡ್ಯಾನ್ಸ್ ಕಂಪನಿಯ ಡಿಕೆಡಿ ವಿಜೇತ ರಾಹುಲ್‍ರಾವ್ ಮತ್ತು ಸಂಗಡಿಗರಿಂದ ಜರುಗಿದ ನೃತ್ಯಗಳು, ಮೂರ್ನಾಡಿನ ಜಲಜ ನಾಗರಾಜ್ ಅವರ ಭಾರತೀಯ ನೃತ್ಯ ಕಲಾ ಶಾಲೆಯ ಕಲಾವಿದರ ಭರತನಾಟ್ಯ, ಜಾನಪದ ನೃತ್ಯಗಳು ಹಾಗೂ ಮೂರ್ನಾಡಿನ ಚರಣ್ ರವರ ಸ್ಟೆಪ್‍ಅಪ್ ಗ್ರೂಪ್‍ನ ಕಲಾವಿದರ ನೃತ್ಯ ಕಾರ್ಯಕ್ರಮಗಳು ನೆರೆದಿದ್ದ ಜನರ ಮನಸೂರೆಗೊಂಡವು.

ವರದಿ : ಟಿ.ಸಿ. ನಾಗರಾಜ್, ಮೂರ್ನಾಡು 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾರ್ಯವೈಖರಿಗೆ ಮೆಚ್ಚುಗೆ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಗೆ ಕೊಡುಗೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಮರಾಠ, ಮರಾಟಿ ಸಮಾಜ ಸೇವಾ ಸಂಘ, ಅಂಬಾಭವಾನಿ ಯುವಕ-ಯುವತಿ ಕ್ರೀಡಾ ಸಂಘದಿಂದ ಮಾ.21 ಮತ್ತು 22 ರಂದು ಕ್ರೀಡಾಕೂಟ*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.17 : ಕೊಡಗು ಜಿಲ್ಲಾ ಮರಾಠ, ಮರಾಟಿ ಸಮಾಜ ಸೇವಾ ಸಂಘ, ತಾಳತ್ತಮನೆಯ ಅಂಬಾಭವಾನಿ ಯುವಕ-ಯುವತಿ…

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.