
ನಾಪೋಕ್ಲು ಅ.6 NEWS DESK : ಮಡಿಕೇರಿ ದಸರಾ ಕ್ರೀಡಾಕೂಟದ ಮಹಿಳೆಯರ ಹಗ್ಗ ಜಗ್ಗಾಟದ ಸ್ಪರ್ಧೆಯಲ್ಲಿ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಬಹುಮಾನವನ್ನು ತನ್ನದಾಗಿಸಿಕೊಂಡಿದೆ. ಈ ಸಂದರ್ಭ ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಪದಾಧಿಕಾರಿಗಳು ಹಾಗೂ ಸದಸ್ಯರ ಉಪಸ್ಥಿತಿಯಲ್ಲಿ ಬಹುಮಾನವನ್ನು ಸ್ವೀಕರಿಸಿಕೊಳ್ಳಲಾಯಿತು.
ವರದಿ : ದುಗ್ಗಳ ಸದಾನಂದ.









