Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*
  • *ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*
  • *ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*
  • *ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ಸನ್ಮಾನ : ಸ್ಥಳೀಯ ಕಲಾವಿದರ ದೊಡ್ಡ ಮಟ್ಟದ ಸಾಧನೆ ಶ್ಲಾಘನೀಯ : ಸಂಸದ ಯದುವೀರ್ ಒಡೆಯರ್ ಮೆಚ್ಚುಗೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಷ್ಟ್ರ ಪ್ರಶಸ್ತಿ ವಿಜೇತ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪಗೆ ಸನ್ಮಾನ : ಸ್ಥಳೀಯ ಕಲಾವಿದರ ದೊಡ್ಡ ಮಟ್ಟದ ಸಾಧನೆ ಶ್ಲಾಘನೀಯ : ಸಂಸದ ಯದುವೀರ್ ಒಡೆಯರ್ ಮೆಚ್ಚುಗೆ

ಅಕ್ಟೋಬರ್ 7, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.7 NEWS DESK : ಚಲನಚಿತ್ರ ಕ್ಷೇತ್ರದಲ್ಲಿ ಸ್ಥಳೀಯ ಕಲಾವಿದರು ದೊಡ್ಡ ಮಟ್ಟದ ಸಾಧನೆ ಮಾಡುತ್ತಿದ್ದು, ಇದು ಶ್ಲಾಘನೀಯ. ಕಲಾವಿದರಿಗೆ ಪ್ರೋತ್ಸಾಹ ಮತ್ತು ಉತ್ತೇಜನ ನೀಡುವ ಅಗತ್ಯವಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಅವರು ತಿಳಿಸಿದ್ದಾರೆ. ಕೊಡಗು ಕಲಾವಿದರ ಸಂಘ ಮತ್ತು ಗೋಣಿಕೊಪ್ಪ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಸಿನಿಮಾದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿರಾಜಪೇಟೆ ಕೊಡವ ಸಮಾಜದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದರು ಪ್ರತಿಯೊಬ್ಬರ ಜೀವನಕ್ಕೆ ಅರ್ಥ ಸಿಗುವುದು ಕಲೆಯಿಂದ, ಕಲೆಯ ಬೆಳವಣಿಗೆಗೆ ಶ್ರಮಿಸುವ ಕಲಾವಿದರನ್ನು ಸನ್ಮಾನಿಸಿ ಪ್ರೋತ್ಸಾಹಿಸುವುದು ಅತ್ಯಂತ ಮಹತ್ವದ ಕೆಲಸವಾಗಿದೆ ಎಂದರು. ಚಲನಚಿತ್ರ ಕ್ಷೇತ್ರದಲ್ಲಿ ಭಾರತೀಯರ ಕೊಡುಗೆ ಮಹತ್ವದ್ದಾಗಿದೆ. ಹಿಂದಿನ ಕಾಲದಲ್ಲಿ ಚಲನಚಿತ್ರಗಳಿಗೆ ಅಷ್ಟೊಂದು ಪ್ರೋತ್ಸಾಹ ಇರಲಿಲ್ಲ. ಆದರೆ ಇಂದು ಸ್ಥಳೀಯ ಕಲಾವಿದರು ದೊಡ್ಡಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಸಾಧನೆಗೆ ಹಾಗೂ ಸಾಧಿಸಿದ ಕಲಾವಿದರಿಗೆ ಪ್ರೋತ್ಸಾಹ ದೊರಕುತ್ತಿರುವುದು ಶ್ಲಾಘನೀಯ. ಭವಿಷ್ಯದಲ್ಲೂ ಪ್ರೋತ್ಸಾಹ ದೊರಕುವಂತಾಗಲಿ ಎಂದರು. ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗದೆ ಸ್ವದೇಶಿ ಉತ್ಪನ್ನಗಳು ಹಾಗೂ ಸ್ವದೇಶಿ ಕಲೆಗಳಿಗೆ ಪ್ರೋತ್ಸಾಹ ನೀಡಬೇಕು. ಕೊಡಗಿನ ಕಲಾವಿದರಿಗೆ ಹಾಗೂ ರಾಜ್ಯದ ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವಂತಾಗಬೇಕು ಎಂದು ಯದುವೀರ್ ಒಡೆಯರ್ ಹೇಳಿದರು. ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಅವರು ಮಾತನಾಡಿ, ಕೊಡವರು ಸಣ್ಣ ಸಮುದಾಯಕ್ಕೆ ಸೇರಿದವರಾಗಿದ್ದರೂ ಎಲ್ಲಾ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಇಂದು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಲಭಿಸಿರುವುದು ಕೊಡವರಿಗೆ ಸಂತಸದ ವಿಚಾರ ಎಂದು ಹರ್ಷ ವ್ಯಕ್ತಪಡಿಸಿದರು. ಕೊಡವ ಚಲನಚಿತ್ರಗಳಿಗೆ ಜನರ ಸಹಕಾರದ ಅಗತ್ಯವಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೊಡವ ಚಿತ್ರಗಳನ್ನು ನೋಡಿ ಕೊಡವ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದು ಕರೆ ನೀಡಿದರು. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್ ಮಾತನಾಡಿ, ಹಲವು ಘಟಾನುಘಟಿ ನಿರ್ದೇಶಕರ ನಡುವೆಯೂ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿರುವುದು ದೊಡ್ಡ ಸಾಧನೆಯಾಗಿದೆ. ಮುಂದಿನ ದಿನಗಳಲ್ಲಿಯೂ ಮತ್ತಷ್ಟು ಚಲನಚಿತ್ರಗಳನ್ನು ನಿರ್ದೇಶಿಸುವಂತಾಗಲಿ ಎಂದು ಶುಭ ಹಾರೈಸಿದರು. ಕೊಡಗಿನಲ್ಲಿ ಉತ್ತಮ ಚಿತ್ರಮಂದಿರದ ಅಗತ್ಯವಿದ್ದು, ಸರಕಾರದ ಗಮನ ಸೆಳೆದು ಸ್ಥಳೀಯ ಪ್ರತಿಭೆಗಳನ್ನು ಪ್ರೋತ್ಸಾಹಿಸಿ ವೇದಿಕೆ ಕಲ್ಪಿಸಬೇಕು ಎಂದರು. ಬೆಂಗಳೂರು ಕೊಡವ ಸಮಾಜದಿಂದ ಯುವ ಪ್ರತಿಭೆಗಳಿಗೆ ಕ್ರೀಡಾ ಕೇಂದ್ರ ಆರಂಭಿಸುವ ಯೋಜನೆಯಿದ್ದು, ಕೊಡವ ಭಾಷೆ ಉಳಿವಿಗೆ, ಸಾಹಿತ್ಯದ ಬೆಳವಣಿಗೆಗೆ ಸಹಕಾರ ನೀಡಲಾಗುವುದು. ಅಲ್ಲದೆ ಬರಹಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹರಿದಾಸ ಅಪ್ಪಚ್ಚಕವಿ ಅವರ ಜನ್ಮದಿನಾಚರಣೆಯಂದು ಪುಸ್ತಕ ಬಿಡುಗಡೆ ಮಾಡಲಾಗುವುದೆಂದು ತಿಳಿಸಿದರು. ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಎಸ್.ಅರುಣ್ ಮಾಚಯ್ಯ ಅವರು ಮಾತನಾಡಿ, ‘ಕಂದೀಲು’ ಚಲನಚಿತ್ರ ಬಡತನ, ಹಳ್ಳಿಯ ಜೀವನ, ರೈತನ ದುಡಿಮೆಯನ್ನು ಪ್ರತಿಬಿಂಬಿಸುತ್ತದೆ. ‘ಕಂದೀಲು’ ಎಂಬ ಹೆಸರೇ ವಿಸ್ಮಯ ಮೂಡಿಸುತ್ತದೆ. ಇದು ಗ್ರಾಮಾಂತರ ಮಂದಿಯ ಜೀವನದ ಮೇಲೆ ಬೆಳಕು ಚೆಲ್ಲಿದೆ. ಹಳ್ಳಿಯ ಸೊಗಡನ್ನು ಸಾರುವ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರವೆಂದರು. ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಅವರು ಮಾತನಾಡಿ, ನಮ್ಮದೇ ಊರಲ್ಲಿ, ನಮ್ಮ ಕೆಲಸಕ್ಕೆ ಪ್ರೋತ್ಸಾಹ ದೊರೆಯುತ್ತಿರುವುದು ಸಂತೋಷ. ಹಲವು ಸವಾಲುಗಳ ನಡುವೆ ಕುಟುಂಬದ ಬೆಂಬಲದಿಂದ ಮುಂದೆ ಬರಲು ಸಾಧ್ಯವಾಯಿತು ಎಂದು ಹೇಳಿದರು. ಚಿತ್ರರಂಗ ನನ್ನ ಆಯ್ಕೆಯ ವಿಷಯವಲ್ಲ. 2004ರಲ್ಲಿ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರ ಸ್ವಸ್ತಿಕ್ ಎಂಟ್ರೈಮೆಂಟ್ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿ ‘ರಂಗ ಪ್ರವೇಶ’ ಕನ್ನಡ ಚಲನಚಿತ್ರದ ಮೂಲಕ ನಿರ್ದೇಶನಕ್ಕಿಳಿದೆ, ಎರಡನೇ ಚಲನಚಿತ್ರ ‘ಕಂದೀಲು’ ಮೂಲಕ ಕೊಡಗಿನ ಪ್ರಥಮ ಮಹಿಳಾ ನಿರ್ದೇಶಕಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದೇನೆ. ಇದೀಗ ರಾಷ್ಟ್ರ ಪ್ರಶಸ್ತಿ ದೊರೆತ್ತಿರುವುದರಿಂದ ನನ್ನ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರ ಜೀವನದಲ್ಲಿ ಸಕರಾತ್ಮಕ ಹಾಗೂ ನಕರಾತ್ಮಕತೆ ಇದ್ದೆ ಇರುತ್ತದೆ. ಹೀಗಿದ್ದರೂ ತಮ್ಮ ದಿನನಿತ್ಯದ ಕೆಲಸದಲ್ಲಿ ಶೇಕಡ ನೂರರಷ್ಟು ತೊಡಗಿಸಿಕೊಳ್ಳುವುದು ನಿಜವಾದ ಸಾಧನೆ ಎಂದು ಯಶೋಧ ಪ್ರಕಾಶ್ ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾವೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ ಅವರು ಹಲವು ವರ್ಷಗಳ ಹಿಂದೆ ಕೊಡಗಿನಲ್ಲಿ ಸಿನಿಮಾ ಎಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚು ಇತ್ತು. ಹೆಣ್ಣು ಮಕ್ಕಳನ್ನು ಚಿತ್ರರಂಗಕ್ಕೆ ಬಿಡುತ್ತಿರಲಿಲ್ಲ, ಆದರೆ ಸಣ್ಣುವಂಡ ಶಶಿಕಲಾ ಅವರು ಕನ್ನಡ ಸಿನಿಮಾಕ್ಕೆ ಮೊದಲ ಕೊಡವ ಮಹಿಳೆಯಾಗಿ ಪಾದಾರ್ಪಣೆ ಮಾಡಿ ಕೊಡವರಿಗೆ ಸ್ಫೂರ್ತಿಯಾಗಿದ್ದಾರೆ. ಅಂದಿನಿಂದ ಇಂದಿನವರೆಗೆ ಸಮುದಾಯದ ಹಲವು ಮಂದಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಇಂದು ನಿರ್ಮಾಪಕಿಯಾಗಿ ಯಶೋಧ ಪ್ರಕಾಶ್ ಅವರು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲೂ ಮತ್ತಷ್ಟು ಯುವ ಪ್ರತಿಭೆಗಳು ಚಿತ್ರರಂಗದಲ್ಲಿ ಸಾಧನೆ ಮಾಡುವಂತಾಗಲಿ ಎಂದರು. ಸಮಾಜ ಸೇವಕ ನೆರವಂಡ ಉಮೇಶ್ ಅವರು ಮಾತನಾಡಿ ಚಿತ್ರರಂಗ ಸಾಗರದ ಮಾದರಿಯ ಜಗತ್ತು. ಇಂತಹ ಜಗತ್ತಿನಲ್ಲಿ ಅನೇಕ ಸವಾಲುಗಳ ನಡುವೆಯೂ ರಾಷ್ಟ್ರೀಯ ಪ್ರಶಸ್ತಿ ಪಡೆದಿರುವುದು ಶ್ಲಾಘನೀಯ ಎಂದರು. ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಚಿತ್ರದ ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಬಾಲ ನಟಿ ಕುಶಿ ಕಾವೇರಮ್ಮ ಉಪಸ್ಥಿತರಿದ್ದರು. ಪೊಡಮಾಡ ಭವಾನಿ ನಾಣಯ್ಯ ಪ್ರಾರ್ಥಿಸಿ, ಕರ್ನಾಟಕ ಜಾನಪದ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಬಿ.ಜಿ.ಅನಂತಶಯನ ಸ್ವಾಗತಿಸಿ, ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ ಹಾಗೂ ಈರಮಂಡ ಹರಿಣಿ ವಿಜಯ್ ನಿರೂಪಿಸಿದರು. *ಸನ್ಮಾನ* ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ‘ಕಂದೀಲು’ ಕನ್ನಡ ಸಿನಿಮಾದ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್, ನಿರ್ಮಾಪಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ, ಸಂಸದ ಯದುವೀರ್ ಒಡೆಯರ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚೆರಿಯಪಂಡ ಸುರೇಶ್, ‘ಕಂದೀಲು’ ಚಿತ್ರದ ಬಾಲನಟಿ ಈರಮಂಡ ಕುಶಿ ಕಾವೇರಮ್ಮ, ರಾಜ್ಯ ಪ್ರಶಸ್ತಿ ವಿಜೇತ ‘ನಾಡ ಪೆದ ಆಶಾ’ ಕೊಡವ ಚಲನಚಿತ್ರದ ನಿರ್ಮಾಪಕಿ ಹಾಗೂ ನಾಯಕಿ ಈರಮಂಡ ಹರಿಣಿ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ವಿವಿಧ ಕಲಾ ತಂಡಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*45 ನೇ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳ ಸಾಧನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ಗ್ರಾಮೀಣ ಪ್ರತಿಭೆಗಳಿಗೆ ಕೆಇಎ ನೀಡಲಿದೆ ‘ನೀಟ್’ ಬಲ: ಸರ್ಕಾರಿ ಕಾಲೇಜುಗಳಲ್ಲೇ ಉಚಿತ ತರಬೇತಿ; ಸಚಿವರಿಂದ ಮಹತ್ವದ ಘೋಷಣೆ!*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 17, 2026: ನಗರ ಪ್ರದೇಶದ ಶ್ರೀಮಂತ ವಿದ್ಯಾರ್ಥಿಗಳಂತೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೋಚಿಂಗ್ ಪಡೆಯಲು ಸಾಧ್ಯವಾಗದ…

*ಅಧಿವೇಶನದಲ್ಲಿ ಡಿಸಿಎಂ ಜೊತೆ ಶಾಸಕ ಎ.ಎಸ್.ಪೊನ್ನಣ್ಣ ಸಮಾಲೋಚನೆ*

ಮಾರ್ಚ್ 17, 2026

*ರಾಜ್ಯದಲ್ಲಿ ಬದಲಾದ ಹವಾಮಾನ: ಹಲವೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಬೀದರ್‌ನಲ್ಲಿ ಸಿಡಿಲಿಗೆ ರೈತ ಬಲಿ!*

ಮಾರ್ಚ್ 17, 2026

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.