Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ : ಮಹರ್ಷಿ ವಾಲ್ಮೀಕಿ ಅವರ ಪರಿಕಲ್ಪನೆ, ದೂರದರ್ಶಿತ್ವ ಸ್ಮರಣೀಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ : ಮಹರ್ಷಿ ವಾಲ್ಮೀಕಿ ಅವರ ಪರಿಕಲ್ಪನೆ, ದೂರದರ್ಶಿತ್ವ ಸ್ಮರಣೀಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಅಕ್ಟೋಬರ್ 8, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.8 NEWS DESK : ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ ಭಾರತೀಯ‌ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.‌ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಇತಿಹಾಸವನ್ನು ಸಾರಿದ್ದಾರೆ. ಮಹಾ ಕಾವ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಮಹರ್ಷಿ ವಾಲ್ಮೀಕಿ ಅವರ ಪರಿಕಲ್ಪನೆ, ದೂರದರ್ಶಿತ್ವ ಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಆಧುನಿಕತೆ ಬೆಳೆದಂತೆ ಭಾರತೀಯ ಹಿಂದಿನ ಇತಿಹಾಸ ಮತ್ತು ಸಂಸ್ಕೃತಿಯನ್ನು ಮರೆಯಬಾರದು. ವಾಲ್ಮೀಕಿ ರಾಮಾಯಣದ ಬಗ್ಗೆ ಅಂತರ್ಜಾಲದಲ್ಲಿ ಸಾಕಷ್ಟು ಮಾಹಿತಿ ದೊರೆಯಲಿದ್ದು, ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ವೆಂಕಟ್ ರಾಜಾ ಅವರು ವಿವರಿಸಿದರು. ವಿದ್ಯಾರ್ಥಿಗಳು ಅಧ್ಯಯನ ಕಡೆ ಹೆಚ್ಚು ಗಮನ ನೀಡಬೇಕು. ನಾಗರಿಕ ಸೇವೆಯ ಹುದ್ದೆ ಪಡೆಯಲು ಶ್ರಮಿಸಬೇಕು. ರಾಷ್ಟ್ರದ ಯಾವುದೇ ಭಾಗದಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ದರರಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಸೇನೆ, ವೈದ್ಯಕೀಯ, ಎಂಜಿನಿಯರಿಂಗ್, ವಕೀಲರು, ಪತ್ರಕರ್ತರು ಹಾಗೆಯೇ ರಾಷ್ಟ್ರ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಮಾತನಾಡಿ ವಾಲ್ಮೀಕಿ ರಾಮಾಯಣವನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದರು. ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಬರೆಯುವ ಮೂಲಕ ಇಡೀ ಭಾರತೀಯ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಆ ನಿಟ್ಟಿನಲ್ಲಿ ಮಹರ್ಷಿ ವಾಲ್ಮೀಕಿ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದು ಧರ್ಮಜ ಉತ್ತಪ್ಪ ಅವರು ನುಡಿದರು. ಮಹರ್ಷಿ ವಾಲ್ಮೀಕಿ ಸೇರಿದಂತೆ ಹಲವು ಮಹಾನ್ ಸಾಧಕರು ಹಾಕಿಕೊಟ್ಟಿರುವ ಹೆಜ್ಜೆ ಗುರುತಿನಂತೆ ನಡೆಯಬೇಕು ಎಂದು ಅವರು ತಿಳಿಸಿದರು. ಚಿಕ್ಕಳುವಾರದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಜಮೀರ್ ಅಹಮದ್ ಅವರು ಮಾತನಾಡಿ ವಾಲ್ಮೀಕಿ ಅವರು ಬೇಡ ಸಮಾಜದಲ್ಲಿ ಹುಟ್ಟಿ ರಾಮಾಯಣ ಬರೆಯುವ ಮೂಲಕ ಇಡೀ ವಿಶ್ವಕ್ಕೆ ಸಮಾಜದಲ್ಲಿನ‌ ಬದುಕಿನ ಬಗ್ಗೆ ವಿವರಿಸಿದ್ದಾರೆ ಎಂದರು. ಮಹರ್ಷಿ ವಾಲ್ಮೀಕಿ ಅವರು ಕ್ರಿ.ಪೂ.ದಲ್ಲಿಯೇ ಒಳ್ಳೆಯ ನಾಗರಿಕ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ. ಮಹಾನ್ ಮೇಧಾವಿಯಾಗಿದ್ದ ಮಹರ್ಷಿ ವಾಲ್ಮೀಕಿ ಅವರು ಇಡೀ ಮಾನವ ಸಮಾಜಕ್ಕೆ ಸಂಸ್ಕಾರ ಕಲಿಸಿದ್ದಾರೆ ಎಂದರು. ಮಹರ್ಷಿ ವಾಲ್ಮೀಕಿ ಅವರು ಎಲ್ಲರ ಸರ್ವ ಶ್ರೇಷ್ಠ ಮುನಿ ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು. ರಾಮಾಯಣವು ರಾಷ್ಟ್ರದ ಪೌರಾಣಿಕ ಇತಿಹಾಸ ಹೊಂದಿದೆ‌. ರಾಷ್ಟ್ರ ಪ್ರೇಮ ಹಾಗೂ ದೇಶಭಕ್ತಿ ಒಳಗೊಂಡಿದೆ. ಶ್ರೀರಾಮ, ಸೀತೆ ಹಾಗೂ ಲಕ್ಷ್ಮಣರಂತೆ ಬದುಕು ನಡೆಸಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದರು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಶಿಕ್ಷಣದ ಮೂಲಕ ವಿಮೋಚನೆ ಪಡೆಯಬೇಕು. ಸಾಮಾಜಿಕ ಕ್ಷೇತ್ರದಲ್ಲಿ ಬದಲಾವಣೆ ಕಾಣಬೇಕು ಎಂದು ಜಮೀರ್ ಅಹಮದ್ ಅವರು ವಿವರಿಸಿದರು. ವಾಲ್ಮೀಕಿ ನಾಯಕ ಸಂಘದ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಅವರು ಮಾತನಾಡಿ ವಾಲ್ಮೀಕಿ ರಾಮಾಯಣವು ರಾಷ್ಟ್ರದ ಸಂಸ್ಕೃತಿ, ನಾಡು, ನುಡಿ ಹಾಗೂ ಸವೋದರತ್ವ ಹೊಂದಿದ್ದು, ಇದನ್ನು ಅರಿತು ನಡೆದರೆ ರಾಷ್ಟ್ರ ರಾಮರಾಜ್ಯ ಆಗಲಿದೆ ಎಂದು ಅಭಿಪ್ರಾಯಪಟ್ಟರು. ಮಹರ್ಷಿ ವಾಲ್ಮೀಕಿ ಅವರ ತತ್ವ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಬೇಡರ ಕಣ್ಣಪ್ಪ, ಏಕಲವ್ಯ, ಚಿತ್ರದುರ್ಗದ ಕೋಟೆ ಹೀಗೆ ಹಲವು ಐತಿಹ್ಯಗಳನ್ನು ಸಮಾಜದಲ್ಲಿ ಕಾಣಬಹುದಾಗಿದೆ ಎಂದರು. ದಲಿತ ಸಂಘರ್ಷ ಸಮಿತಿ‌ ಜಿಲ್ಲಾ ಘಟಕದ ಅಧ್ಯಕ್ಷರಾದ ದಿವಾಕರ ಅವರು ಮಾತನಾಡಿ ಪ್ರತಿಯೊಬ್ಬರಿಗೂ ಶಿಕ್ಷಣವೇ ಆಸ್ತಿಯಾಗಿದ್ದು, ವಿದ್ಯಾರ್ಥಿಗಳು ಕೇಂದ್ರ ಮತ್ತು ರಾಜ್ಯ ನಾಗರಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ‌ ಪಡೆದು ಯಶಸ್ಸು ಗಳಿಸುವಂತಾಗಬೇಕು ಎಂದರು.
ಐಟಿಡಿಪಿ ಇಲಾಖೆ ಅಧಿಕಾರಿ ಎಸ್.ಹೊನ್ನೆಗೌಡ, ಭಾಗಮಂಡಲ ಲ್ಯಾಂಪ್ ಸೊಸೈಟಿಯ ಮಿಟ್ಟು ರಂಜಿತ್, ಕುರುಬ ಸಮಾಜದ ಜಿಲ್ಲಾ ಅಧ್ಯಕ್ಷರಾದ ಗಂಗಾಧರ, ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರಾದ ಮೇವಾಲಾಲ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶಿವಕುಮಾರ, ಸಮಾಜದ ಮುಖಂಡರಾದ ಪರಮೇಶ್, ಚಂದ್ರು, ದೇವರಾಜು ಇತರರು ಇದ್ದರು. 2024-25 ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ‌ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ನಗದು ಬಹುಮಾನ ನೀಡಲಾಯಿತು. ಹಾಗೆಯೇ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರನ್ನು ಗೌರವಿಸಲಾಯಿತು. ಸಮಗ್ರ ಗಿರಿಜನ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯ ಹಾಗೂ ವಸತಿ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕ ಕಾರ್ಯಕ್ರಮ ನೀಡಿ ಗಮನ ಸೆಳೆದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಬಾಲಕೃಷ್ಣ ರೈ ಸ್ವಾಗತಿಸಿದರು, ಪವನ್ ಕುಮಾರ್ ನಿರೂಪಿಸಿದರು, ತಿತಿಮತಿ‌ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು, ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿನಿಯರು ನಾಡಗೀತೆ ಹಾಡಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.