
ಮಡಿಕೇರಿ ಅ.8 NEWS DESK : ಪೊನ್ನಂಪೇಟೆ ತಾಲ್ಲೂಕು ಟಿ.ಶೆಟ್ಟಿಗೇರಿಯಲ್ಲಿ ರೂ.1 ಕೋಟಿ 60ಲಕ್ಷ ಅನುದಾನದಲ್ಲಿ ವಿದ್ಯುತ್ ಮಾರ್ಗಗಳನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿ ಪೂಜೆ ನೆರೆವೇರಿಸಿದರು. ಇದೀಗ ಕಾಮಗಾರಿ ಆರಂಭಗೊಂಡ ನಾಲ್ಕು ದಿನಗಳಲ್ಲಿ ಅರ್ಧದಷ್ಟು ಪೂರ್ಣಗೊಂಡಿದೆ. ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿದ ಬೆನ್ನಲ್ಲೇ, ಕಾಮಗಾರಿ ವೇಗ ಪಡೆದುಕೊಂಡು, ಇನ್ನು ಒಂದು ವಾರದೊಳಗೆ ಕಾಮಗಾರಿ ಮುಗಿಯುವ ಸಾಧ್ಯತೆ ಇದೆ. ಶಾಸಕ ಪೊನ್ನಣ್ಣ ಅವರ ಕಾರ್ಯಕ್ಷಮತೆಗೆ ಸಾರ್ವಜನಿಕರಿಂದವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.









