Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*
  • *ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.12 ರಂದು ಕೆ.ಎಂ.ಎ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.12 ರಂದು ಕೆ.ಎಂ.ಎ ಪ್ರತಿಭಾ ಪುರಸ್ಕಾರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ*

ಅಕ್ಟೋಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ, ಅ.7 NEWS DESK : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ಅ.12 ರಂದು ಕೆ.ಎಂ.ಎ. ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸಮುದಾಯದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ವಿರಾಜಪೇಟೆಯಲ್ಲಿ ಅಯೋಜಿಸಲಾಗಿದೆ ಎಂದು ಕೆ.ಎಂ.ಎ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10.30 ಗಂಟೆಯಿಂದ ನಡೆಯುವ ಸಮಾರಂಭದಲ್ಲಿ ಅರಮೇರಿ ಶ್ರೀ ಕಳಂಚೇರಿ ಮಠದ ಪೀಠಾಧಿಪತಿಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಆಗಮಿಸಲಿದ್ದಾರೆ. ಬೆಂಗಳೂರಿನ ಹೈಕೋರ್ಟ್ ವಕೀಲರಾಗಿರುವ ಕುವೇoಡ ಹೆಚ್. ಹಿದಾಯತುಲ್ಲಾ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಅವರು ಎಂದು ವಿವರಿಸಿದರು. ರಾಜ್ಯದ ಪ್ರಸಿದ್ಧ ಶಿಕ್ಷಣ ತಜ್ಞರು ಹಾಗೂ ವ್ಯಕ್ತಿತ್ವ-ಕಲಿಕೆ-ಪ್ರೇರಣ ತರಬೇತುದಾರರಾಗಿರುವ ಮೈಸೂರಿನ ಆರ್.ಎ. ಚೇತನ್ ರಾಮ್ ಅವರು ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಕೊಡಗು ಜಿಲ್ಲಾ ಅನುಷ್ಠಾನ ಸಮಿತಿಯ ಸದಸ್ಯರಾದ ನಲ್ವತ್ತೋಕ್ಲಿನ ಪಟ್ಟಿಯಡ ಎ. ಹನೀಫ್ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ ಸೂಫಿ ಹಾಜಿ, ಕೆ.ಎಂ.ಎ. ವತಿಯಿಂದ ಜರುಗುವ ಪ್ರತಿಭಾ ಪುರಸ್ಕಾರ ವಿತರಣೆ ಎಂಬ ವಾರ್ಷಿಕ ಕಾರ್ಯಕ್ರಮ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ಉತ್ತೇಜಿಸುವ ಜೊತೆಗೆ ಸಮುದಾಯದವರನ್ನು ಪ್ರತಿ ವರ್ಷ ಒಂದೆಡೆ ಸೇರಿಸುವ ಪ್ರಯತ್ನವಾಗಿದೆ ಎಂದು ಅವರು ಹೇಳಿದರು.  ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ., ಎಸ್.ಎಸ್. ಎಲ್.ಸಿ. ಹಾಗೂ ಮದರಸಾ ವಿಭಾಗದ 5ನೇ, 7ನೇ ಮತ್ತು 10ನೇ ತರಗತಿಯ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕ ಪಡೆದು ತೇರ್ಗಡೆ ಹೊಂದಿ ವ್ಯಾಸಂಗ ಮುಂದುವರಿಸುತ್ತಿರುವ ಸಂಸ್ಥೆಯ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಈ ಕಾರ್ಯಕ್ರಮದಲ್ಲಿ ಕೆ.ಎಂ.ಎ. ಪ್ರತಿಭಾ ಪುರಸ್ಕಾರವನ್ನು ಪಾರಿತೋಷಕ ಮತ್ತು ನಗದು ಬಹುಮಾನಗಳೊಂದಿಗೆ ನೀಡಿ ಅವರನ್ನು ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹಿಸಲಾಗುವುದು. ಅಲ್ಲದೆ ಕಳೆದ ಸಾಲಿನಲ್ಲಿ ಪದವೀಧರರಾಗಿರುವ ಸದಸ್ಯರ ಮಕ್ಕಳಿಗೆ ಕೆ.ಎಂ.ಎ. ಪದವಿ ಪುರಸ್ಕಾರ ನೀಡಿ ಗೌರವಿಸಲಾಗುವುದು. ಜೊತೆಗೆ ಸರಕಾರಿ ಶಾಲೆಗಳಲ್ಲಿ ಓದಿ ಕಳೆದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ, ಕಳೆದ ಎಸ್.ಎಸ್.ಎಲ್. ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಇಡೀ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವ ತಲಾ ಓರ್ವ ಸಾಧಕ ವಿದ್ಯಾರ್ಥಿಗೆ ಮತ್ತು ಈ ಎರಡು ವಿಭಾಗಗಳಲ್ಲೂ ಅತೀ ಹೆಚ್ಚಿನ ಅಂಕ ಪಡೆದ ಜಿಲ್ಲೆಯ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳಿಗೆ ಕೆ.ಎಂ.ಎ. ವಿಶೇಷ ಪ್ರತಿಭಾ ಪುರಸ್ಕಾರ-2025 ನೀಡಿ ಗೌರವಿಸಲಾಗುವುದು ಎಂದು ಸೂಫಿ ಹಾಜಿ ತಿಳಿಸಿದರು. ಹೊಸ ತಲೆಮಾರಿಗೆ ಪ್ರೇರಣೆ ಮೂಡಿಸಲು ಪ್ರತಿ ವರ್ಷ ಸಮುದಾಯದ ಹಿರಿಯ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಸಂಪ್ರದಾಯವಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ಶತಾಯುಷಿ ಕುಂಜಿಲದ ಪುದುರೆಕಾರಂಡ ಹುಸೈನಾರ್ ಹಾಜಿ, ಹಿರಿಯ ವಿದ್ವಾಂಸರಾದ ಕುಂಜಿಲದ ಪಾಯಡತಂಡ ಹುಸೈನ್ ಮುಸ್ಲಿಯಾರ್, ನಿವೃತ್ತ ಕೃಷಿ ಅಧಿಕಾರಿ ಬೇಟೋಳಿ ಗ್ರಾಮದ ಪುಡಿಯಂಡ ಎಂ. ಸಾದಲಿ ಹಾಜಿ, ರಾತೀಬ್ ಖಲ್ಫರಾದ ಐಮಂಗಳದ ಕೂತಂಬಟ್ಟಿರ ಹುಸೈನ್, ಕಳೆದ ನೀಟ್ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಜೋಯಿಪೆರ ಐ. ಮೊಹಮ್ಮದ್ ಸಫ್ವಾನ್ ಮತ್ತು ತಮ್ಮ ಚೊಚ್ಚಲ ಕೃತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದ ದುದ್ದಿಯಂಡ ಮುಸ್ಕಾನ್ ಅವರನ್ನು ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಕೆ.ಎಂ.ಎ. ನಿರ್ದೇಶಕರಾದ ಕೇಂಗೋಟಂಡ ಎಸ್. ಸೂಫಿ, ಆಲೀರ ಹೆಚ್. ಅಬ್ದುಲ್ ಲತೀಫ್ ಮತ್ತು ದುದ್ದಿಯಂಡ ಹೆಚ್. ಮೊಯ್ದು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆದಿವಾಸಿಗಳ ಹಕ್ಕಿಗಾಗಿ ಆಗ್ರಹಿಸಿ ಪ್ರತಿಭಟನೆ : ಲೈನ್ ಮನೆಗಳಿಂದ ಮುಕ್ತಗೊಳಿಸಲು ಒತ್ತಾಯ*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು*

ಮಾರ್ಚ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಮಾ.17 : ಹೊಸ ವರ್ಷದ ಆರಂಭ ಮತ್ತು ಸಮೃದ್ಧಿಯ ಸಂಕೇತವಾದ ಯುಗಾದಿ ಹಬ್ಬದ ಪ್ರಯುಕ್ತ ಕುಶಾಲನಗರದ…

*ಪಾಕ್-ಅಫ್ಘಾನ್ ಯುದ್ಧ ಭೀಕರ: ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ; 400 ಮಂದಿ ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ!*

ಮಾರ್ಚ್ 17, 2026

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.