Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಯತ್ನ : ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಯತ್ನ : ಕಠಿಣ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ*

ಅಕ್ಟೋಬರ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.8 NEWS DESK : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯಲು ಪ್ರಯತ್ನಿಸಿದ ಪ್ರಕರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲಿನ ದಾಳಿ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಮೂಲಕ ದಾಳಿಯ ಪ್ರಯತ್ನದ ಹಿಂದಿರುವ ಹುನ್ನಾರವನ್ನು ಬಯಲಿಗೆಳೆಯಬೇಕು ಮತ್ತು ಕೃತ್ಯವೆಸಗಿದ ವಕೀಲನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗ ಕೆಲವು ಸನಾತನವಾದಿಗಳು ಇದನ್ನು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ನೀಡುವುದನ್ನು ಒಪ್ಪದ ಮನೋಸ್ಥಿತಿಗಳು ಇಂದಿಗೂ ಇರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ದೇಶದ ಕಾನೂನಿನ ಮೇಲೆ ಅಪಾರ ಗೌರವ ಹೊಂದಿರುವ ನ್ಯಾಯಮೂರ್ತಿ ಗವಾಯಿ ಅವರು ಉತ್ತರ ಪ್ರದೇಶ ಸರಕಾರದ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿದ್ದರು. ಅಲ್ಲದೆ ಯಾವುದೇ ಪ್ರಕರಣವಿದ್ದರೂ ಸಂವಿಧಾನದಡಿ ಆದೇಶ ನೀಡುತ್ತಿದ್ದರು. ಇದನ್ನು ಸಹಿಸದ ವ್ಯಕ್ತಿಗಳು ದಾಳಿ ನಡೆಸುವಂತಹ ಹೇಡಿತನದ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದ ಸಂವಿಧಾನ ಈ ರೀತಿಯ ಬೆಳವಣಿಗೆಗಳಿಗೆ ಎಲ್ಲೂ ಅವಕಾಶ ನೀಡಿಲ್ಲ. ತಪ್ಪೆಸಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯಗಳು ನಡೆಯದಂತೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಾಯತ್ರಿ ನರಸಿಂಹ ಒತ್ತಾಯಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.