Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಯವ ಸಮಾಜದ ಮಹಾಸಭೆ : ಶಿಕ್ಷಣಕ್ಕೆ ಆದ್ಯತೆ ನೀಡಲು ಗಣ್ಯರ ಕರೆ*
ಇತ್ತೀಚಿನ ಸುದ್ದಿಗಳು

*ಕೊಯವ ಸಮಾಜದ ಮಹಾಸಭೆ : ಶಿಕ್ಷಣಕ್ಕೆ ಆದ್ಯತೆ ನೀಡಲು ಗಣ್ಯರ ಕರೆ*

October 8, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಅ.8 NEWS DESK : ಕೊಯವ ಸಮಾಜದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಮೂರ್ನಾಡಿನ ಪ್ರಗತಿ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಇಬ್ಬರು ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.  ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಸೇನಾಧಿಕಾರಿ ಹಾಗೂ ನಿವೃತ್ತ ಪೊಲೀಸ್ ಉಪಠಾಣಾಧಿಕಾರಿ ಜಿಲ್ಲಂಡ ಸನ್ನು ಚೀಯಣ್ಣ ಅವರು, ಭಾರತೀಯ ಸೇನೆಯಲ್ಲಿ ಸೇವೆ ಮಾಡುವುದು ಮಹಾಭಾಗ್ಯದ ಕೆಲಸ. ಶಿಸ್ತು, ಸಮಯ ಪಾಲನೆ, ನಿಷ್ಠೆ, ಪ್ರಾಮಾಣಿಕತೆ, ದೇಶಾಭಿಮಾನವನ್ನು ಮೈಗೂಡಿಸಿಕೊಂಡು ಸೇವೆ ಮಾಡಿದರೆ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು. ಯುವ ಪೀಳಿಗೆ ಉನ್ನತ ಶಿಕ್ಷಣ ಪಡೆದು ಸೇನೆಯಲ್ಲಿ ಸೇವೆ ಸಲ್ಲಿಸಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಮತ್ತು ಇರುವ ಅವಕಾಶಗಳನ್ನು ಬಳಸಿಕೊಂಡು ಸೈನಿಕರಿಂದ ಅಧಿಕಾರಿಯವರೆಗೆ ಬಡ್ತಿ ಹೊಂದಲು ಸಾಧ್ಯವಿದೆ ಎಂದು ಸಲಹೆ ನೀಡಿದರು. ನಿವೃತ್ತ ಎಎಸ್‍ಐ ನೇಂದುಮಂಡ ಪ್ರಕಾಶ್ ಮಾತನಾಡಿ, ದೇಶದ ಗಡಿಯ ಭದ್ರತೆ ಎಷ್ಟು ಮುಖ್ಯವೋ, ದೇಶದ ಆಂತರಿಕ ಭದ್ರತೆಯೂ ಅಷ್ಟೇ ಮುಖ್ಯ ಎಂದು ಹೇಳಿದರು. ಕಾನೂನಿನ ಚೌಕಟ್ಟಿನಡಿ ಜನಾನುರಾಗಿಯಾಗಿ ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದರೆ ಮಾತ್ರ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ. ನನ್ನ ಕರ್ತವ್ಯದ ದಿನಗಳಲ್ಲಿ ನಿಷ್ಠೆಯಿಂದ ಕೆಲಸ ನಿರ್ವಹಿಸಿದ ತೃಪ್ತಿ ನನಗಿದೆ. ಇಂದಿನ ಯುವ ಸಮೂಹ ಓದಿನಲ್ಲಿ ಹೆಚ್ಚಿನ ಆಸಕ್ತಿ ತೋರಿ ಉನ್ನತ ಶಿಕ್ಷಣ ಪಡೆಯಬೇಕು. ವಿವಿಧ ಇಲಾಖೆಗಳಲ್ಲಿ ಒಳ್ಳೆಯ ಕೆಲಸ ಗಿಟ್ಟಿಸಿಕೊಂಡು ಪೋಷಕರಿಗೆ ಹಾಗೂ ಸಮಾಜಕ್ಕೆ ಹೆಸರು ತರುವಂತಾಗಬೇಕು ಎಂದು ಕರೆ ನೀಡಿದರು. ಕೊಯವ ಸಮಾಜದ ಉಪಾಧ್ಯಕ್ಷ ಹಾಗೂ ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಮಾತನಾಡಿ, ಸಮಾಜ ಬಾಂಧವರು ಸರಕಾರದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಜಾತಿ ಜನಗಣತಿಯ ಸಮೀಕ್ಷೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ ಜಾತಿಯ ಕಾಲಂನಲ್ಲಿ ‘ಕೊಯವ’ ಎಂದು ಉಪಕಾಲಂನಲ್ಲಿ ಏನೂ ಬರೆಯದೆ ಖಾಲಿಬಿಟ್ಟು, ಧರ್ಮದ ಕಾಲಂನಲ್ಲಿ ಹಿಂದೂ ಎಂದು ನಮೂದಿಸುವಂತೆ ಮನವಿ ಮಾಡಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ಜಿಲ್ಲಂಡ ಮಾದಪ್ಪ ಅವರು ವರ್ಷಕ್ಕೆ ಒಂದು ಬಾರಿ ಸಮಾಜದ ಸದಸ್ಯರು ಒಂದೇ ವೇದಿಕೆಯಡಿ ಸೇರುವುದರಿಂದ ಪರಸ್ಪರ ಅವಿನಾಭಾವ ಸಂಬಂಧ ಹೆಚ್ಚುತ್ತದೆ ಮತ್ತು ನಮ್ಮಲ್ಲಿ ಏನೇ ಗೊಂದಲಗಳಿದ್ದರೂ ಬಗೆ ಹರಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಸದಸ್ಯರ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆಯಲು ಸಮಾಜದಿಂದ ನೀಡಲ್ಪಡುವ ದತ್ತಿನಿಧಿಯ ಪ್ರೋತ್ಸಾಹಧನ ಸಹಕಾರಿಯಾಗಲಿದೆ ಎಂದು ಹೇಳಿದರು. ಸಮಾಜಕ್ಕೆ ಸ್ವಂತ ಕಟ್ಟಡದ ಅಗತ್ಯವಿದೆ, ಈಗಾಗಲೇ ಖರೀದಿಸಿರುವ ನಿವೇಶನದಲ್ಲಿ ಆದಷ್ಟು ಶೀಘ್ರ ಸರಕಾರದ ಅನುದಾನ ಪಡೆದು ಕಟ್ಟಡ ನಿರ್ಮಿಸಲಾಗುವುದು ಎಂದರು. ಸಮಾಜದ ನಿರ್ದೇಶಕರಾದ ಕಾಂಞಂಗಡ ಸುಬ್ಬಯ್ಯ, ಮಲ್ಲಂಡ ಮಹೇಶ್, ಮೇಚಿರ ಹರೀಶ್, ತೋರೆರ ನಳಿನಿ ಅಯ್ಯಪ್ಪ, ನೇಂದುಮಂಡ ಗೀತ ನಾಣಯ್ಯ, ಈರಮಂಡ ದಮಯಂತಿ, ಪುದಿಯೊಕ್ಕಡ ರೆಮಿತ ಸುಜಯ್ ಉಪಸ್ಥಿತರಿದ್ದರು. ಮೇಚಿರ ದೀಪ್ತಿ ಪ್ರಾರ್ಥಿಸಿ, ಅಧ್ಯಕ್ಷ ಜಿಲ್ಲಂಡ ಮಾದಪ್ಪ ಸ್ವಾಗತಿಸಿ, ಅಚ್ಚಪಂಡ ಧರ್ಮಾವತಿ ನಿರೂಪಿಸಿದರು ಹಾಗೂ ಕಳ್ಳೀರ ನಾಣಯ್ಯ ವಂದಿಸಿದರು. ಸಮಾಜದ ಗೌರವ ಕಾರ್ಯದರ್ಶಿ ತೋರೆರ ಕಾಶಿ ಕಾರ್ಯಪ್ಪ ಅವರು ಕಳೆದ ಮಹಾಸಭೆಯ ವರದಿ ಮತ್ತು 2024-25ನೇ ಸಾಲಿನ ಲೆಕ್ಕಪತ್ರ ಮಂಡಿಸಿ ಅಂಗೀಕಾರ ಪಡೆದರು. 10ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ನಾಯಮಂಡ ತನ್ಮಯಿ, ದ್ವಿತೀಯ ಪಿಯುಸಿಯ ಮೇಚಿರ ಶಿಲ್ಪ ಮತ್ತು ಅಚ್ಚಪಂಡ ಪ್ರಜ್ಞ, ಪದವಿಯ ಮೇಚಿರ ದೀಪ್ತಿ ಹರೀಶ್ ಹಾಗೂ ಮೇಚಿರ ತ್ರಿವೇಣಿ ಅವರಿಗೆ ಸಮಾಜದ ದತ್ತಿನಿಧಿಯಿಂದ ಪ್ರೋತ್ಸಾಹ ಧನ ವಿತರಿಸಲಾಯಿತು. ನವೆಂಬರ್ ತಿಂಗಳ ಅಂತ್ಯದಲ್ಲಿ ನಡೆಯುವ ಕೊಡವ ಭಾಷಿಕ 21 ಜನಾಂಗಗಳ ಕ್ರೀಡಾಕೂಟದಲ್ಲಿ ಸಮಾಜದ ವತಿಯಿಂದ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ಡಾ.ಮೇಚಿರ ಸುಭಾಷ್ ನಾಣಯ್ಯ ಅವರು ಟಿ-ಶರ್ಟ್‍ಗಳನ್ನು ವಿತರಿಸಿ ಶುಭ ಹಾರೈಸಿದರು. ಸಭೆಯ ನಂತರ ಕೈಲ್‍ಪೋಳ್ದ್ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು, ಕೊಡವ ಹಾಡುಗಾರಿಕೆ, ಉಮ್ಮತ್ತಾಟ್, ಮಾಲಗತ್ತಾಟ್ ಕಾರ್ಯಕ್ರಮಗಳು ನಡೆದವು.

 

 

 

Share. Facebook Twitter Pinterest LinkedIn Tumblr Email WhatsApp
Previous Article*ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ*
Next Article *ಅ.17 ರಂದು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.