Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾನೂನು ಹೋರಾಟಕ್ಕೆ ಮಡಿಕೇರಿ ದಸರಾ ದಶಮಂಟಪ ಸಮಿತಿ ನಿರ್ಧಾರ*
ಇತ್ತೀಚಿನ ಸುದ್ದಿಗಳು

*ಕಾನೂನು ಹೋರಾಟಕ್ಕೆ ಮಡಿಕೇರಿ ದಸರಾ ದಶಮಂಟಪ ಸಮಿತಿ ನಿರ್ಧಾರ*

October 8, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.8 : ಮಡಿಕೇರಿಯಲ್ಲಿ ನಡೆದ ದಸರಾ ದಶಮಂಟಪಗಳ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಹಿನ್ನೆಲೆ ಕಾನೂನು ಹೋರಾಟ ನಡೆಸಲು ದಶಮಂಟಪ ಸಮಿತಿಗಳು ನಿರ್ಧರಿಸಿವೆ. ದಸರಾ ಸಂದರ್ಭ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂದು ಸಮಿತಿ ವಾದ ಮಂಡಿಸಿದೆ. ರಾತ್ರಿ 10 ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕವನ್ನು ಬಳಸಬಾರದೆಂಬ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಶೋಭಾಯಾತ್ರೆ ಸಂದರ್ಭ ಧ್ವನಿವರ್ಧಕವನ್ನು ಬಳಸಲಾಗಿದೆ ಎಂದು ಆರೋಪಿಸಿ ನಗರ ಠಾಣೆಯಲ್ಲಿ 10 ಮಂಟಪ ಸಮಿತಿಗಳ ಒಟ್ಟು 62 ಮಂದಿ ವಿರುದ್ಧ ಪ್ರತ್ಯೇಕ 10 ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆ ದಶಮಂಟಪಗಳ ಸಮಿತಿ ನೇತೃತ್ವದಲ್ಲಿ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಠಾಣೆಗೆ ಹಾಜರಾಗಿ ವೃತ್ತ ನಿರೀಕ್ಷಕ ಪಿ.ಕೆ.ರಾಜು ಅವರೊಂದಿಗೆ ಸಮಾಲೋಚನೆ ನಡೆಸಿದರು. ಪೊಲೀಸರ ಸೂಚನೆಯಂತೆ ರಾತ್ರಿ 11 ಗಂಟೆಯ ನಂತರ ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಿದ್ದರೂ ಪ್ರಕರಣ ದಾಖಲಿಸಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕೋರ್ಟ್ ಆದೇಶದ ಪ್ರಕಾರ ರಾತ್ರಿ 10 ಗಂಟೆಯ ನಂತರ ಯಾವುದೇ ಕಾರಣಕ್ಕೂ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಇದರ ಉಲ್ಲಂಘನೆ ಸ್ಪಷ್ಟವಾಗಿ ಕಂಡು ಬಂದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಂಗದ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕಾಗಿದೆ ಎಂದು ವೃತ್ತ ನಿರೀಕ್ಷಕ ರಾಜು ಅವರು ಸಲಹೆ ನೀಡಿದರು. ಬಳಿಕ ಸಮಿತಿಯ ಪದಾಧಿಕಾರಿಗಳು ನಿಯಮ ಉಲ್ಲಂಘನೆ ಮಾಡಿದ ಕುರಿತು ವಕೀಲರ ಸಲಹೆಯಂತೆ ಪೊಲೀಸರು ನೀಡಿದ ನೋಟಿಸ್ ಸ್ವೀಕರಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದಶಮಂಟಪ ಸಮಿತಿ ಅಧ್ಯಕ್ಷ ಹರೀಶ್ ಅಣ್ವೇಕರ್, ಮಂಟಪ ಸಮಿತಿಗಳು ನಿಯಮ ಪಾಲಿಸಿವೆ. ಕಥಾ ಸಾರಾಂಶಕ್ಕೆ ಮಾತ್ರ ಧ್ವನಿವರ್ಧಕ ಬಳಸಿಕೊಳ್ಳಲಾಗಿದೆ. ಆದರೂ ಪ್ರಕರಣ ದಾಖಲಿಸಲಾಗಿದೆ, ಮುಂದಿನ ವರ್ಷದಲ್ಲಿ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ಕಾನೂನಾತ್ಮಕ ಹೋರಾಟ ಕೈಗೊಳ್ಳಲಾಗುವುದು. ದಸರಾ ಸಂದರ್ಭ ಧ್ವನಿವರ್ಧಕ ಬಳಕೆಗೆ ವಿನಾಯಿತಿ ನೀಡುವಂತೆ ಮನವಿ ಮಾಡಲಾಗುವುದು. ಇದಕ್ಕಾಗಿ ವಕೀಲರನ್ನು ಕೂಡ ಸಮಿತಿ ನೇಮಿಸಲಿದೆ ಎಂದರು. ಗೌರವಾಧ್ಯಕ್ಷ ಬಿ.ಎಂ.ರಾಜೇಶ್ ಮಾತನಾಡಿ, ವಿನಾಕಾರಣ ಪ್ರಕರಣ ದಾಖಲಿಸಿರುವುದಕ್ಕೆ ಆಕ್ಷೇಪವಿದೆ, ಮಂಟಪ ಸಮಿತಿಗಳು ಒಗ್ಗೂಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಸಲಾಗುವುದು. ಈ ಬಾರಿ ಬಹುತೇಕ ಮಂಟಪಗಳು ನಿಯಮ ಪಾಲಿಸಿವೆ. ಆಚರಣೆಯ ಮೇಲೆ ಹೇರಿರುವ ನಿರ್ಬಂಧವನ್ನು ಪ್ರಶ್ನಿಸಿ ನ್ಯಾಯಾಂಗ ಮೊರೆ ಹೋಗಲಾಗುವುದು ಎಂದು ತಿಳಿಸಿದರು. ಈ ಸಂದರ್ಭ ನಗರ ಠಾಣಾಧಿಕಾರಿ ಅನ್ನಪೂರ್ಣ, ಸಂಚಾರ ವಿಭಾಗದ ಪೊಲೀಸ್ ಠಾಣಾಧಿಕಾರಿ ಶ್ರೀಧರ್ ಸೇರಿದಂತೆ ವಿವಿಧ ಮಂಟಪ ಸಮಿತಿಗಳ ಅಧ್ಯಕ್ಷರುಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಫೀ.ಮಾ.ಕೆ.ಎಂ.ಕಾರ್ಯಪ್ಪ ಸಭಾಂಗಣದ ಪರಿಕಲ್ಪನೆಯ ರೇಖಾ ಕಾಳಯ್ಯ ಇನ್ನಿಲ್ಲ*
Next Article *ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ಪೋಸ್ಟರ್ ಬಿಡುಗಡೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.