Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪ : ಪೌರ ಕಾರ್ಮಿಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪ : ಪೌರ ಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.9 NEWS DESK : ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಕಾರ್ಕಳದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರಾದ ಮಾರುತಿ, ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠ ಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ’ ಎಂದು ಕರೆ ನೀಡಿದರು. ಸಂಸ್ಥೆಯ ಸಹ ಸಂಸ್ಥಾಪಕರಾದ ಎಸ್.ಎಲ್.ಅಶ್ವತ್ ಪ್ರಾಸ್ತಾವಿಕ ಮಾತನಾಡಿ ‘ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಮುಖ್ಯ ಅತಿಥಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರಗಳಲ್ಲಿ ಬೆಳೆದ ಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ’ ಎಂದರು. ಉದ್ಯಮಿ ವಿಜಯ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ’ ಎಂದು ಹೇಳಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ರವರು ‘ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ’ ಎಂದರು. ನಂದಿನಿ ಶೆಟ್ಟಿ, ನ್ಯಾಯವಾದಿ ಮತ್ತು ನೋಟರಿ, ಕಾರ್ಕಳ ಇವರು ‘ಎನ್.ಎಸ್.ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ’ ಎಂದು ಅಭಿಪ್ರಾಯಪಟ್ಟರು. ವರ್ಮ ಅಜ್ರಿ, ವಿಶ್ರಾಂತ ಪ್ರಾಂಶುಪಾಲರು, ಎಂ.ಪಿ.ಎಂ ಕಾಲೇಜು, ಕಾರ್ಕಳ ಇವರು’ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು’ ಎಂದು ಹೇಳಿದರು. ಅನ್ನಪೂರ್ಣ ಕಾಮತ್, ಪ್ರಾಂಶುಪಾಲರು, ಸರಕಾರಿ ಪದವಿಪೂರ್ವ ಕಾಲೇಜು, ಕಾರ್ಕಳ ಇವರು ಎನ್.ಎಸ್.ಎಸ್ ಘಟಕದ ವತಿಯಿಂದ ನಡೆದ ಕಾರ್ಯವೈಖರಿಗಳನ್ನು ಶ್ಲಾಘಿಸಿ, ವಂದಿಸುತ್ತಾ ‘ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್.ಎಸ್.ಎಸ್ ಕೇವಲ ಕಾರ್ಯಕ್ರಮವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ’ ಎಂದರು. :: ಪೌರ ಕಾರ್ಮಿಕರಿಗೆ ಸನ್ಮಾನ :: ಸಮಾರೋಪ ಕಾರ್ಯಕ್ರಮದಲ್ಲಿ 25 ವರ್ಷಗಳಿಗಿಂತಲೂ ಸುದೀರ್ಘ ಅವಧಿಯಿಂದ ಪೌರಕಾರ್ಮಿಕರಾಗಿ ದುಡಿದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸುಧೀರ್, ಪೂವಪ್ಪ, ರವಿ, ನಾಗೇಶ್, ಸಂಜೀವ ಇವರನ್ನು ಎನ್.ಎಸ್.ಎಸ್ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು. ಅತಿಥಿಗಳ ಸಮ್ಮುಖದಲ್ಲಿ ಶಿಬಿರವಾಣಿಯನ್ನು ಬಿಡುಗಡೆಗೊಳಿಸಲಾಯಿತು.ವಿದ್ಯಾರ್ಥಿಗಳಾದ ಹಿತ ಮತ್ತು ಅಕ್ಷರ್ 7 ದಿನಗಳ ಎನ್.ಎಸ್.ಎಸ್ ಘಟಕದ ಅನುಭವಗಳ ಕುರಿತು ಮಾತನಾಡಿದರು. ಎಲ್ಲಾ ಅತಿಥಿಗಳನ್ನು ಕಾರ್ಯಕ್ರಮದ ಸವಿನೆನಪಿನ ದ್ಯೋತಕವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ವಿದ್ವಾನ್ ಗಣಪತಿ ಭಟ್, ಆದರ್ಶ ಎಂ.ಕೆ ರವರು ಗೌರವ ಉಪಸ್ಥಿತಿ ವಹಿಸಿದ್ದರು. ಉಪನ್ಯಾಸಕರಾದ ಸಂತೋಷ್ ಸ್ವಾಗತಿಸಿ, ಶಿಬಿರಾಧಿಕಾರಿ ಉಮೇಶ್ ವಂದನಾರ್ಪಣೆಗೈದರು. ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.