Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಕೈಜೋಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಕೈಜೋಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ*

ಅಕ್ಟೋಬರ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.9 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಇತರೆ ಚುನಾವಣೆ ವಿಷಯಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸಭೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಹಿನ್ನೆಲೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ ಜಿಲ್ಲೆಯಲ್ಲಿಯೂ ಸಹ ಪೂರ್ವ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು. 2002 ರಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗಿತ್ತು, ಆ ದಿಸೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರನ್ನು ನೇಮಿಸಿಕೊಳ್ಳುವಂತಾಗಬೇಕು ಎಂದು ಕೋರಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧಿಸಿದಂತೆ ನಮೂನೆ-6 ರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನಮೂನೆ-07 ಮತದಾರರ ಪಟ್ಟಿಯಿಂದ ಹೆಸರು ತೆಗೆಯುವುದು, ನಮೂನೆ-08 ರಲ್ಲಿ ತಿದ್ದುಪಡಿ, ಸ್ಥಳಾಂತರ, ಎಪಿಕ್ ಕಾರ್ಡ್ ಬದಲಾವಣೆ, ಪಿಡಬ್ಲ್ಯುಡಿ ಮಾರ್ಕಿಂಗ್(ವಿಕಲಚೇತನರನ್ನು ಗುರುತಿಸುವುದು) ಈ ಕೆಲಸವನ್ನು ಬೂತ್ ಮಟ್ಟದ ಏಜೆಂಟರು ಮಾಡಿದ್ದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯ ಸಮರ್ಪಕವಾಗಲಿದೆ ಎಂದರು. ಬೂತ್ ಮಟ್ಟದಲ್ಲಿ ಮತದಾರರ ವಿವರ, ನಮೂನೆ-6, 07 ಮತ್ತು 08 ರ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಲಹೆ ನೀಡಿದರು. ವಿವಿಧ ರಾಜಕೀಯ ಪಕ್ಷಗಳು ತಾವು ನೇಮಕ ಮಾಡುವ ಬೂತ್ ಮಟ್ಟದ ಏಜೆನ್ಸಿಗಳ ಪಟ್ಟಿಯನ್ನು ಜಿಲ್ಲಾ ಚುನಾವಣಾ ಕಚೇರಿಗೆ ಒದಗಿಸುವಂತಾಗಬೇಕು. ಆ ನಿಟ್ಟಿನಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಎಲ್ಲೆಡೆ ಜಾಗೃತಿ ಮೂಡಿಸುವಂತಾಗಬೇಕು ಎಂದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ವಿವಿಧ ಪಕ್ಷದ ಪ್ರಮುಖರಾದ ತೆನ್ನಿರಾ ಮೈನಾ(ಕಾಂಗ್ರೆಸ್), ಸಜ್ಜಿಲ್ ಕೃಷ್ಣ(ಬಿಜೆಪಿ), ಗುಲಾಬಿ ಜನಾರ್ದನ(ಜೆಡಿಎಸ್), ರಮೇಶ್(ಸಿಪಿಐಎಂ), ಸೋಮಪ್ಪ(ಸಿಪಿಐ), ಪೃಥ್ವಿ(ಎಎಪಿ) ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಾಗೂ ಬೂತ್ ಮಟ್ಟದ ಏಜೆಂಟರ ನೇಮಕ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.