
ವಿರಾಜಪೇಟೆ ಅ.10 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ವಿರಾಜಪೇಟೆ ವತಿಯಿಂದ ನಗರದ ಕಚೇರಿಯಲ್ಲಿ ಆಯುಧ ಮತ್ತು ಕಚೇರಿ ಪೂಜೆ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ವಿವಿಧ ಬಗೆಯ ಹೂವುಗಳಿಂದ ವಿಶೇಷವಾಗಿ ಹಾಗೂ ಬಣ್ಣ ಬಣ್ಣದ ರಂಗೋಲಿಯಿಂದ ಕಚೇರಿಯನ್ನು ಅಲಂಕಾರಿಗೊಳಿಸಲಾಗಿತ್ತು, ಶ್ರೀ ಲಕ್ಷ್ಮಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ, ದೇವಿಗೆ ಹಾಗೂ ಕಚೇರಿ ಸಿಬ್ಬಂದಿಗಳ ವಾಹನಗಳಿಗೆ ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಮಾಡಲಾಯಿತು ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ಜಿಲ್ಲಾ ಯೋಜನಾ ನಿರ್ದೇಶಕಿ ಲೀಲಾವತಿ ಅವರು ಮಾತನಾಡಿ ನವರಾತ್ರಿ ವೇಳೆ ಶಕ್ತಿ ದೇವತೆಗಳ ಆರಾಧನೆ ಮಾಡಿ ಒಂಬತ್ತು ದಿನಗಳ ಕಾಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ಇದರ ಅಂಗವಾಗಿ ಕಛೇರಿಯಲ್ಲಿ ದೇವಿಯ ಆರಾದನೆ ನಡೆಸಲಾಯಿತು. ಶ್ರೀ ಕ್ಷೇತ್ರದ ಮಂಜುನಾಥ ಸ್ವಾಮಿ ಹಾಗೂ ದೇವತೆಗಳ ಅನುಗ್ರಹದಿಂದ ಉತ್ತಮ ಮಳೆ ಬೆಳೆಯಾಗಿ ಕರುನಾಡು ಸಂಪತ್ಭರಿತವಾಗಿರಲಿ ಎಂದು ಆಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾ ಅಧಿಕಾರಿ ಹರೀಶ್, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ, ಸದಸ್ಯರು, ಕಛೇರಿ ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು.









