Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ದಿ. ಎಸ್.ಎಲ್.ಭೈರಪ್ಪ ಅವರಿಗೆ ಸಲ್ಲುತ್ತದೆ :  ಉಷಾ ಪ್ರೀತಂ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿ ದಿ. ಎಸ್.ಎಲ್.ಭೈರಪ್ಪ ಅವರಿಗೆ ಸಲ್ಲುತ್ತದೆ :  ಉಷಾ ಪ್ರೀತಂ*

ಅಕ್ಟೋಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.10 NEWS DESK : ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಕೀರ್ತಿಯು ದಿ. ಎಸ್.ಎಲ್. ಭೈರಪ್ಪ ಅವರಿಗೆ ಸಲ್ಲುತ್ತದೆ ಎಂದು ಪತ್ರಕರ್ತರು ಹಾಗೂ ಬರಹಗಾರರಾದ ಉಷಾ ಪ್ರೀತಂ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಪುರಭವನದ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಪತ್ರಕರ್ತರ ವೇದಿಕೆ ವಿರಾಜಪೇಟೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ದಿ. ಎಸ್.ಎಲ್. ಭೈರಪ್ಪ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡುತಿದ್ದರು. ಕನ್ನಡ ಭಾಷೆ ನಾಡು ನುಡಿಗೆ ಸಂಬಂಧಿಸಿದಂತೆ ಕೊಡುಗೆಯನ್ನು ನೀಡಿದವರಲ್ಲಿ ದಿ. ಎಸ್. ಎಲ್. ಭೈರಪ್ಪ ರವರು ಅಗ್ರಗಣ್ಯರು. ಸಾಹಿತ್ಯ ಲೋಕದಲ್ಲಿ ಸದಾ ಅವಿಸ್ಮರಣಿಯವಾಗಿ ಉಳಿದಿದ್ದಾರೆ. ಮಾತ್ರವಲ್ಲದೆ ತಮ್ಮದೇ ಆದ ಶೈಲಿಯಲ್ಲಿ ಕೃತಿಯ ರಚನೆಯನ್ನು ಮಾಡಿರುತ್ತಾರೆ. ಕವಿಗಳು ಹಾಗೂ ಸಾಹಿತಿಗಳನ್ನು ಇಂದಿನ ದಿವಸಗಳಲ್ಲಿ ಜಾತಿಯ ಲೆಕ್ಕಾಚಾರದಲ್ಲಿ ನೋಡುತ್ತಿರುವುದು ವಿಷಾದನೀಯ. ಸಾಹಿತಿಗಳು ಒಂದು ನಿರ್ದಿಷ್ಟ ಜಾತಿಗೆ ಸಂಬಂಧಿಸಿದವರಾಗಿರದೆ ಒಂದು ನಾಡಿಗೆ ಸಂಬಂಧಿಸಿದವರಾಗಿರುತ್ತಾರೆ ಎಂದರು. ಎಸ್. ಎಲ್. ಭೈರಪ್ಪ ಅವರ ಪ್ರಮುಖ ಕೃತಿಗಳನ್ನು ಹಾಗೂ ಅದರಲ್ಲಿ ಅಡಗಿರುವ ಅಂಶಗಳನ್ನುಉದಾಹರಣೆ ಸಮೇತ ವಿವರಿಸಿದರು. ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪಟ್ಟಡ ಪೂವಣ್ಣ ರವರು ಮಾತನಾಡುತ್ತಾ ಕನ್ನಡ ಸಾರ ಸ್ವತ ಲೋಕಕ್ಕೆ ಎಸ್. ಎಲ್. ಭೈರಪ್ಪ ಅವರ ಅಗಲಿಕೆಯು ತುಂಬಲಾರದ ನಷ್ಟವಾಗಿದೆ. ಅವರ ಕೃತಿಗಳನ್ನು ಸಂಪೂರ್ಣವಾಗಿ ಓದಿದಾಗ ಮಾತ್ರ ಅದರಲ್ಲಿರುವ ಪ್ರೌಢಿಮೆ ಕಾಣಸಿಗುತ್ತದೆ. ಇಂದಿನ ವಿದ್ಯಾರ್ಥಿಗಳು ಸಾಹಿತ್ಯದ ಪುಸ್ತಕಗಳನ್ನು ಓದಲು ಹಿಂದೇಟು ಹಾಕುತ್ತಿರುವುದು ವಿಷಾದನೀಯ ಎಂದರು. ಎಸ್. ಎಲ್. ಭೈರಪ್ಪ ಅವರ ಕೃತಿಗಳಲ್ಲಿ ರಚಿತವಾಗಿರುವ ಪ್ರಮುಖ ಅಂಶವನ್ನು ವಿವರಿಸಿದರು. ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಅರ್ಜುನ್ ಮಾತನಾಡಿ ಎಸ್. ಎಲ್. ಭೈರಪ್ಪ ಅವರ ಕೃತಿಗಳು ವಿಮರ್ಶೆ ಗೆ ಒಳಪಡುವ ವಿಚಾರವನ್ನು ಒಳಗೊಂಡಿದೆ. ಅತ್ಯಂತ ಹೆಚ್ಚು ವಿಮರ್ಶೆಗೆ ಒಳಗಾದ ಕೃತಿಗಳು ಭೈರಪ್ಪರದ್ದಾಗಿವೆ ಎಂದರು.ಸಭೆಯ ಅಧ್ಯಕ್ಷತೆ ವಹಿಸಿದ್ದ ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರು ಹಾಗೂ ಪುರಸಭಾ ಸದಸ್ಯರಾದ ರಾಜೇಶ್ ಪದ್ಮನಾಭ್ ಮಾತನಾಡಿ ಎಸ್. ಎಲ್. ಭೈರಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ತನ್ನದೇ ಆದಂತಹ ಮೇರು ವ್ಯಕ್ತಿತ್ವದಿಂದ ಗುರುತಿಸಲ್ಪಟ್ಟವರು. ಕನ್ನಡ ಸಾಹಿತ್ಯ ಪ್ರಪಂಚಕ್ಕೆ ಸಾಹಿತ್ಯ ಕೃಷಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಪರಂಪರೆಗೆ ತಮ್ಮ ಸೇವೆಯನ್ನು ಸಲ್ಲಿಸಿರುವ ಜೊತೆಗೆ ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದ್ದಾರೆ ಎಂದರು. ಈ ಸಭೆಯಲ್ಲಿ ನಿವೃತ್ತ ಪ್ರಾಂಶುಪಾಲರಾದ ಪಟ್ಟಡ ಪೂವಣ್ಣ ರವರು ಎಸ್ ಎಲ್ ಭೈರಪ್ಪ ಅವರ ಜ್ಞಾಪಕಾರ್ಥ ಶಾಲೆ ಕಾಲೇಜುಗಳಲ್ಲಿ ಉಪನ್ಯಾಸವನ್ನು ನಡೆಸಲು ಹತ್ತು ಸಾವಿರ ರೂಗಳ ದತ್ತಿನಿದಿಯನ್ನು ನೀಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಮಂಜುನಾಥ್, ಸಾವಿತ್ರಿ ಹೆಚ್. ಜಿ., ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಪತ್ರಕರ್ತರ ವೇದಿಕೆಯ ಸದಸ್ಯರುಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.