Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.24 ರಿಂದ ಸ್ವಚ್ಛ ಕಾವೇರಿಗಾಗಿ ಕಾವೇರಿ ಜಾಗೃತಿ ರಥಯಾತ್ರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.24 ರಿಂದ ಸ್ವಚ್ಛ ಕಾವೇರಿಗಾಗಿ ಕಾವೇರಿ ಜಾಗೃತಿ ರಥಯಾತ್ರೆ*

ಅಕ್ಟೋಬರ್ 10, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.10 NEWS DESK : ಸ್ವಚ್ಛ ಕಾವೇರಿಗಾಗಿ ಅ.24 ರಿಂದ ನ.16ರ ವರೆಗೆ ಕಾವೇರಿ ಜಾಗೃತಿ ರಥಯಾತ್ರೆ ನಡೆಯಲಿದೆ ಎಂದು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ರಾಜ್ಯ ಸಂಚಾಲಕ ಹಾಗೂ ಕಾವೇರಿ ರಿವರ್ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಸಲುವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ, ಅಖಿಲ ಭಾರತ ಸನ್ಯಾಸಿ ಸಂಘ, ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್, ಕಾವೇರಿ ರಿವರ್ ಸೇವಾ ಟ್ರಸ್ಟ್ ಹಾಗೂ ನಮಾಮಿ ಕಾವೇರಿ ಸಹಯೋಗದೊಂದಿಗೆ ಅ.24 ರಿಂದ ನ.16ರ ವರೆಗೆ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ತಲಕಾವೇರಿಯಿಂದ ಪೊಂಪ್‌ಹಾರ್ ವರೆಗೆ ಯಾತ್ರೆ ಕೈಗೊಳ್ಳಲಾಗಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ ಸಾಧುಸಂತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಅ.23 ರಂದು ಮಧ್ಯಾಹ್ನ 2 ಗಂಟೆಗೆ ಸಾಧು ಸಂತರ ತಂಡ ಕಾವೇರಿ ಮಾತೆಯ ರಥದೊಂದಿಗೆ ಮೈಸೂರು ಮೂಲಕ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಅ.24 ರಂದು ಬೆಳಗ್ಗೆ 8 ಗಂಟೆಗೆ ತಲಕಾವೇರಿ ಕ್ಷೇತ್ರದಲ್ಲಿ ಪೂಜಾ ಕಾರ್ಯಕ್ರಮ ಜರುಗಲಿದ್ದು, 9 ಗಂಟೆಗೆ ವಿರಾಜಪೇಟೆ ಅರಮೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ದಿವ್ಯ ಸಾನಿಧ್ಯದಲ್ಲಿ ಕಾವೇರಿ ಜಾಗೃತಿ ಯಾತ್ರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಚಾಲನೆ ನೀಡಲಿದ್ದಾರೆ. ವನ್ಯ ಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯ ಕಾರ್ಯಕ್ರಮದ ಭಿತ್ತಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಬಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಶಾಶ್ವತಿ ಧಾರ್ಮಿಕ ಕ್ರೀಯಾ ಕೇಂದ್ರದ ಮುಖ್ಯಸ್ಥರು ಹಾಗೂ ಕಾವೇರಿ ಜಾಗೃತಿ ತೀರ್ಥಯಾತ್ರೆ ಸಮಿತಿ ಮುಖ್ಯಸ್ಥರಾದ ಡಾ.ಭಾನುಪ್ರಕಾಶ್ ಶರ್ಮ, ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸ್ಥಾಪಕ ಅಧ್ಯಕ್ಷರಾದ ಗಣೇಶ ಸ್ವರೂಪಾನಂದ ಸ್ವಾಮೀಜಿ, ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ಜಾಗೃತಿ ರಥಯಾತ್ರೆಯ ಸ್ಥಾಪಕ ಸಂಚಾಲಕರಾದ ರಮಾನಂದ ಸ್ವಾಮೀಜಿ, ಅಖಿಲ ಭಾರತ ಸನ್ಯಾಸಿ ಸಂಘದ ಪ್ರಧಾನ ಕಾರ್ಯದರ್ಶಿ ವೇದಾಂತನಂದ ಸ್ವಾಮೀಜಿ, ಖಜಾಂಚಿ ಶಿವರಾಮಾನಂದ ಸ್ವಾಮೀಜಿ, ಕಾವೇರಿ ಜಾಗೃತಿ ತೀರ್ಥಯಾತ್ರೆ ಸಂಯೋಜಕ ಬಾಲರಘುನಾಥನಂದ ಸ್ವಾಮೀಜಿ, ತಮಿಳುನಾಡು ಕಾವೇರಿ ಜಾಗೃತಿ ಯಾತ್ರೆ ಪ್ರಾಂತ ಸಂಚಾಲಕ ವಾಸು ರಾಮಚಂದ್ರನ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಪ್ರಾಂತ ಸಂಚಾಲಕ ಎಂ.ಎನ್.ಚಂದ್ರಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದರು. 11 ಗಂಟೆಗೆ ಭಾಗಮಂಡಲ ಸಂಗಮದಲ್ಲಿ ಕಾವೇರಿ ನದಿಗೆ ಮಹಾ ಆರತಿ, 12.30ಕ್ಕೆ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಲಾಗುವುದು. ಸಂಜೆ 4 ಗಂಟೆಗೆ ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಾವೇರಿ ಆರತಿ ಕ್ಷೇತ್ರದಲ್ಲಿ 178ನೇ ವಿಶೇಷ ಮಹಾ ಆರತಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭ ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಮಠಾಧೀಶರಾದ ಸದಾಶಿವ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಗಣೇಶ ಸ್ವರೂಪಾನಂದ ಗಿರಿ ಸ್ವಾಮೀಜಿ, ರಮಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಜಯಲಕ್ಷ್ಮಿ ಚಂದ್ರ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ.ಸುರೇಶ್, ರಾಮನಾಥಪುರ ಕಾವೇರಿ ನದಿ ಸ್ವಚ್ಛತಾ ಆಂದೋಲನ ಜಿಲ್ಲಾ ಸಂಚಾಲಕ ಎಂ.ಎನ್.ಕುಮಾರಸ್ವಾಮಿ, ನಮಾಮಿ ಕಾವೇರಿ ಸಂಚಾಲಕಿ ವನಿತಾ ಚಂದ್ರಮೋಹನ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಅ.25 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ರಾಮಲಿಂಗೇಶ್ವರ ದೇವಾಲಯದ ಬಳಿ ಕಾವೇರಿ ನದಿಗೆ ಮಹಾ ಆರತಿ ಕಾರ್ಯಕ್ರಮ ನಡೆಯಲಿದ್ದು, ಕಣಿವೆ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಸುರೇಶ್ ಉಪಸ್ಥಿತರಿರಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಕಣಿವೆಯಿಂದ ಶಿರಂಗಾಲ-ಕೊಣನೂರು ಮೂಲಕ ರಾಮನಾಥಪುರ ತೆರಳಿ 12 ಗಂಟೆಗೆ ರಾಮನಾಥಪುರದಲ್ಲಿ ಕಾವೇರಿ ನದಿಗೆ ಮಹಾ ಆರತಿ ಸಲ್ಲಿಸಲಾಗುವುದೆಂದು ತಿಳಿಸಿದರು. ಮಧ್ಯಾಹ್ನ 1 ಗಂಟೆಗೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯದ ಬಳಿ ಮಹಾ ಆರತಿ ನಡೆಯಲಿದೆ. ಅ.26 ರಂದು ತಮಿಳುನಾಡಿನತ್ತ ಯಾತ್ರೆ ಸಾಗಲಿದೆ. ನ.16 ರಂದು ತಮಿಳುನಾಡಿನ ಪೊಂಪ್‌ಹಾರ್ ನಲ್ಲಿ ಕಾವೇರಿ ನದಿ ಮತ್ತು ಬಂಗಾಳಕೊಲ್ಲಿ ಸಮುದ್ರ ಸಂಗಮದಲ್ಲಿ ಆರತಿ ಜರುಗಲಿದ್ದು, ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಚಂದ್ರಮೋಹನ್ ತಿಳಿಸಿದರು. ಕಾವೇರಿ ರಕ್ಷಣೆಯ ಸಂಬಂಧ ಸರ್ಕಾರ ಯೋಜನೆಗಳನ್ನು ಜಾರಿಗೆ ತರಲಿಲ್ಲ. ಆದ್ದರಿಂದ ಕಾವೇರಿಯ ರಕ್ಷಣೆಗಾಗಿ ಸರ್ಕಾರಗಳು ನೂತನ ಯೋಜನೆಗಳನ್ನು ರೂಪಿಸಬೇಕು ಎಂದು ಚಂದ್ರಮೋಹನ್ ಮನವಿ ಮಾಡಿದರು. ಕಾವೇರಿ ತೀರ್ಥಯಾತ್ರಾ ಸಮಿತಿ ಸ್ಥಾಪಕ ಸಂಯೋಜಕ ಚಿ.ನಾ.ಸೋಮೇಶ್ ಮಾತನಾಡಿ, ಕಾವೇರಿ ಪವಿತ್ರ ನದಿ. ಆದರೆ, ಇಂದು ಹೆಚ್ಚಾಗಿ ತ್ಯಾಜ್ಯಗಳು ಸೇರ್ಪಡೆಗೊಂಡು ಮಲೀನಗೊಳ್ಳುತ್ತಿದ್ದಾಳೆ. ಅದನ್ನು ಕಾಪಾಡುವ ದೃಷ್ಠಿಯಿಂದ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ಯಾತ್ರೆ ಸಂದರ್ಭ ಜನರಲ್ಲಿ ಅರಿವು ಜಾಗೃತಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮಾಹಿತಿ ನೀಡಿದರು. ನದಿ ತೀರಗಳು ಸಂಸ್ಕೃತಿಗಳ ಉಗಮ ಸ್ಥಾನ. ನಮ್ಮ ದೇಶದಲ್ಲಿ ನದಿಗೆ ತಾಯಿ, ದೇವತೆ ಸ್ಥಾನ ನೀಡಿ ಪೂಜಿಸಲಾಗುತ್ತಿದೆ. ದಕ್ಷಿಣ ಭಾರತದ ಕೋಟ್ಯಂತರ ಜನ ಜನುವಾರುಗಳಿಗೆ ಜೀವಜಲವಾಗಿರುವ ಕಾವೇರಿ ನದಿ ತನ್ನ ಒಡನಿನಲ್ಲಿ ಬಹುತೇಕ ಕಲುಷಿತೆಯನ್ನು ಹೊತ್ತು ತವರೂರಾದ ಕೊಡಗು ಜಿಲ್ಲೆಯ ಮೂಲದಿಂದಲೇ ಹರಿಯುತ್ತಿದೆ. ಆದ್ದರಿಂದ ಜನರಿಗೆ ನದಿ ಸಂರಕ್ಷಣೆಯ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಲು ಸ್ವಚ್ಚತಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಕಾವೇರಿ ಮಾತೆ ಜನ್ಮಭೂಮಿ ಕೊಡಗಿನಲ್ಲಿ ಮಲೀನವಾಗುತ್ತಿದ್ದು, ಜಿಲ್ಲಾಡಳಿತ ಕಾವೇರಿ ನದಿಯ ಪವಿತ್ರೆಯನ್ನು ಮಾಲಿನ್ಯವನ್ನು ಕೆಡದಂತೆ ಕ್ರಮ ಕೈಗೊಳ್ಳಬೇಕೆಂದರು. ಶುದ್ಧ ಕುಡಿಯುವ ನೀರಿನ ಸೇವನೆಯಿಂದ ಮನುಷ್ಯನೊಂದಿಗೆ ಇತರೆ ಜೀವಿಗಳು ಬದಕಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಖ್ಯಸ್ಥರು ಕಾವೇರಿ ನದಿಯ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಮತ್ತು ಕಾವೇರಿ ಸಂರಕ್ಷಣೆಗೆ ಪ್ರತಿಯೊಬ್ಬರು ಪಣತೊಡಬೇಕು ಎಂದು ಹೇಳಿದರು. ಕುಶಾಲನಗರ ಕೊಡವ ಸಮಾಜ ಅಧ್ಯಕ್ಷ ವಾಂಚೀರ ಮನು ನಂಜುಂಡ ಮಾತನಾಡಿ ಕೊಡಗಿನಲ್ಲಿ ಕಾವೇರಿ ನದಿಯನ್ನು ದೇವತೆಯಾಗಿ ಪೂಜಿಸಲಾಗುತ್ತಿದೆ. ತೀರ್ಥ ರೂಪಿಣಿಯಾಗಿ ಹರಿಯುತ್ತಿರುವ ಕಾವೇರಿ ನದಿಯನ್ನು ನದಿಗೆ ತ್ಯಾಜ್ಯಗಳನ್ನು ಹಾಕಿ ನೀರನ್ನು ಮಾಲಿನ್ಯಗೊಳಿಸುವುದು ಸರಿಯಲ್ಲ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು. ಕುಶಾಲನಗರ ನಮಾಮಿ ಕಾವೇರಿ ಅಧ್ಯಕ್ಷರಾದ ವನಿತಾ ಚಂದ್ರಮೋಹನ್ ಮಾತನಾಡಿ, ಸಾರ್ವಜನಿಕರಿಗೆ ಕಾವೇರಿ ನದಿಯ ಮೇಲೆ ಭಕ್ತಿ ಭಾವ ಮೂಡಬೇಕು. ಈ ನಿಟ್ಟಿನಲ್ಲಿ ಸ್ವಚ್ಛ ಕಾವೇರಿಗಾಗಿ ಕುಶಾಲನಗರದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿ ಹುಣ್ಣಿಮೆಯಂದು ಕಾವೇರಿ ನದಿಗೆ ಮಹಾ ಆರತಿ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕುಶಾಲನಗರ ಗೌಡ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ಆರ್ಯ ವೈಶ್ಯ ಮಂಡಳಿ ನಿರ್ದೇಶಕ ವಿ.ವೈಶಾಕ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.