Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಅಕ್ಟೋಬರ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.10 NEWS DESK : ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯವಾಗಿದ್ದು, ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25 ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದರು. ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕು/ ಬರೆಸಿರಬೇಕು ಎಂದು ಜಿಲ್ಲಾಧಿಕಾರಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ 5 ಸಾವಿರ, ಎರಡನೇ ಹಂತದಲ್ಲಿ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದು ಪಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಅವರು ತಿಳಿಸಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಸ್ಥಳೀಯ ಸಂಸ್ಥೆ ವ್ಯಾಪ್ತಿಯ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಅವರು ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿದೇಶಕರಾದ ಕುಮಾರ ಅವರು ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಅನುಷ್ಠಾನ ಬಗ್ಗೆ ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಪಶುಪಾಲನಾ ಇಲಾಖೆಯ ಉಪ ನಿದೇಶಕರಾದ ಲಿಂಗರಾಜ ದೊಡ್ಡಮನಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜ್ಯೋತಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ ನಾಯಕ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಎಸ್.ಎಸ್.ದೀಪಕ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಪೌರಾಯುಕ್ತರಾದ ಎಚ್.ಆರ್.ರಮೇಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.