Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
  • *ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*
  • *ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 
  • *ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*
  • *ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*
  • *ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾವೇರಿ ತುಲಾಸಂಕ್ರಮಣ ಬಂದರೂ ದುರಸ್ತಿಯಾಗದ ಮಡಿಕೇರಿ- ತಲಕಾವೇರಿ ರಸ್ತೆ*
ಇತ್ತೀಚಿನ ಸುದ್ದಿಗಳು

*ಕಾವೇರಿ ತುಲಾಸಂಕ್ರಮಣ ಬಂದರೂ ದುರಸ್ತಿಯಾಗದ ಮಡಿಕೇರಿ- ತಲಕಾವೇರಿ ರಸ್ತೆ*

October 10, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.10 : ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿಯಲ್ಲಿ ಅ.17 ರಂದು ಕಾವೇರಿ ತೀರ್ಥೋದ್ಭವವಾಗುತ್ತಿದೆ. ಆದರೆ ಕಾವೇರಿ ತುಲಾಸಂಕ್ರಮಣ ಬಂದರೂ ಮಡಿಕೇರಿ– ತಲಕಾವೇರಿ ರಸ್ತೆಯ ದುರಸ್ತಿ ಕಾರ್ಯಕ್ಕೆ ಆಡಳಿತ ವ್ಯವಸ್ಥೆ ಕ್ರಮ ಕೈಗೊಂಡಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ವಕ್ತಾರ ತಳೂರು ಕಿಶೋರ್ ಕುಮಾರ್ ಅವರು ತಲಕಾವೇರಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ, ತಲಕಾವೇರಿ ಜಾತ್ರೆಗೆ ಬರುವ ಭಕ್ತರಿಗೆ ಸುಗಮ ಸಂಚಾರಕ್ಕೆ ರಸ್ತೆ ದುರಸ್ತಿ ಕಾರ್ಯವೇ ನಡೆದಿಲ್ಲ. ರಸ್ತೆ ಬದಿ ಕಾಡು ತುಂಬಿದ್ದು, ಕಾಡು ಕಡಿಯುವ ಕಾರ್ಯ ಕೂಡ ನಡೆದಿಲ್ಲ. ರಸ್ತೆಗೆ ಮಣ್ಣು ಹಾಕದಂತೆ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದರೂ ಗುಂಡಿ ಮುಚ್ಚಲೆಂದು ಮಣ್ಣು ಸುರಿಯಲಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರಕಾರದಿಂದ ಕೊಡಗಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಟೀಕಿಸಿದರು. ರಸ್ತೆಗಳ ಅಭಿವೃದ್ಧಿ ಕುರಿತು ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಧಿಕ ಮಳೆಯಾದ ಕಾರಣ ಶಾಲೆಗಳಿಗೆ ಹೆಚ್ಚಿನ ರಜೆಗಳನ್ನು ನೀಡಲಾಗಿತ್ತು. ಪರಿಣಾಮ ಪಠ್ಯ ಚಟುವಟಿಕೆಗೆ ಹಿನ್ನಡೆಯಾಗಿದೆ. ಇದರ ನಡುವೆ ಜಾತಿ ಜನಗಣತಿ ಹೆಸರಿನಲ್ಲಿ ಶಿಕ್ಷಕರನ್ನು ಒತ್ತಡದಲ್ಲಿ ದುಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ಅತಿ ಮಳೆಯ ಕಾರಣ ಕಾಫಿ ಫಸಲು ಸಂಪೂರ್ಣವಾಗಿ ನಾಶವಾಗಿದೆ. ಕೊಡಗಿನಲ್ಲಿ ಬೆಳೆ ನಷ್ಟ ಆಗಿಲ್ಲ ಎಂದು ಕೆಲವು ಅಧಿಕಾರಿಗಳು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ ತಳೂರು ಕಿಶೋರ್ ಕುಮಾರ್ ಕೇಂದ್ರದ ಎನ್‌ಡಿಆರ್‌ಎಫ್ ಹಣ ಏನಾಯ್ತು ಎಂದು ಪ್ರಶ್ನಿಸಿದರು. ಕಾಟಕೇರಿಯ ಹರ್ ಮಂದಿರ ಶಾಲೆಯಲ್ಲಿ ನಡೆದ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಜೀವ ದಹನವಾದ ವಿದ್ಯಾರ್ಥಿಯ ಕುಟುಂಬಕ್ಕೆ ಸರಕಾರದಿಂದ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮನು ಮಂಜುನಾಥ್, ಪ್ರಮುಖರಾದ ಕೂಪದಿರ ದೊರೆ ಮಾದಪ್ಪ, ಎಂ.ಪಿ.ಬಾಲಕೃಷ್ಣ ಹಾಗೂ ಎಂ.ಜೆ.ಅನುದೀಪ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆ : ನಾಯಕತ್ವ ಗುಣವನ್ನು ಬೆಳೆಸಲು ಎನ್ಎಸ್ಎಸ್  ಉತ್ತಮ ವೇದಿಕೆ  : ನೆಲ್ಲಚಂಡ ಕಿರಣ್ ಕಾರ್ಯಪ್ಪ* 
Next Article *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ರಾಷ್ಟ್ರಮಟ್ಟದ ಗ್ರಂಥಾಲಯ ಕಾರ್ಯಾಗಾರ*

Recommended: Website design development company services in Mangalore Forex Trading Teacher in India

Related Posts

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು,…

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026

*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ* 

February 12, 2026

*ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ‌ ನೀತಿ ಖಂಡಿಸಿ ಕುಶಾಲನಗರದಲ್ಲಿ ಪ್ರತಿಭಟನೆ*

February 12, 2026

*ವಿರಾಜಪೇಟೆ ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ಮುಕ್ಕಾಟಿ ವಾಸು ಗಣಪತಿ ಆಯ್ಕೆ*

February 12, 2026

*ಪುಲ್ವಾಮ ಯೋಧರ ಶ್ರದ್ದಾಂಜಲಿ ಕಾರ್ಯಕ್ರಮಕ್ಕೆ ಆಹ್ವಾನ*

February 12, 2026

*ಕಾವೇರಿ ಶಾಲೆಯಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.