
ನಾಪೋಕ್ಲು ಅ.11 NEWS DESK : ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಕಾರುಗುಂದ ಗೌಡ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆ ನಡೆಯಿತು. ಒಕ್ಕೂಟದ ಸದಸ್ಯರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ನಂತರ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಾನಪದ ದಸರಾ ವೇದಿಕೆ ಅಲಂಕಾರದಲ್ಲಿ ಭಾಗವಹಿಸಿದ ಒಕ್ಕೂಟದ ಸದಸ್ಯರು ಮಡಿಕೇರಿ ಹಾಗೂ ಗೋಣಿಕೊಪ್ಪಲು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಹಾಗೂ ಮಹಿಳೆಯರ ವಿಭಾಗದ ಹಗ್ಗ ಜಗ್ಗಾಟದಲ್ಲಿ ವಿಜೇತರಾದ ತಂಡಕ್ಕೆ ಅಭಿನಂದನೆ ಸಲ್ಲಿಸಿ ಅವರ ಸಾಧನೆಗೆ ಪ್ರಸಂಸೆ ವ್ಯಕ್ತಪಡಿಸಿದರು. ಪೂಜಾ ವಿಧಿ ವಿಧಾನವನ್ನು ಕೊಟ್ಟೂರು ಶ್ರೀ ಗೋಪಾಲಕೃಷ್ಣ ದೇವಾಲಯದ ಪ್ರಧಾನ ಅರ್ಚಕರಾದ ಮುರಳಿ ಭಟ್ ನೆರವೇರಿಸಿದರು.
ವರದಿ : ದುಗ್ಗಳ ಸದಾನಂದ.









