Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ದಸರಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ : ಕಬಡ್ಡಿ…ಕಬಡ್ಡಿ… ರೈಡ್ ಮಾಡಿ ಗಮನ ಸೆಳೆದ ಶಾಸಕದ್ವಯರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ದಸರಾ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ : ಕಬಡ್ಡಿ…ಕಬಡ್ಡಿ… ರೈಡ್ ಮಾಡಿ ಗಮನ ಸೆಳೆದ ಶಾಸಕದ್ವಯರು*

ಅಕ್ಟೋಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 NEWS DESK : ಮಡಿಕೇರಿ ನಗರ ದಸರಾ ಕ್ರೀಡಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಆಯೋಜಿತ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಗೆ ಭಾನುವಾರ ಸಂಜೆ ಜಿಲ್ಲೆಯ ಶಾಸಕದ್ವಯರು ಜ್ಯೋತಿ ಬೆಳಗಿ, ರೈಡ್ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ಮಡಿಕೇರಿ ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ಅವರ ಅಧ್ಯಕ್ಷತೆಯಲ್ಲಿ ಆಯೋಜಿತ ಉದ್ಘಾಟನಾ ಸಮಾರಂಭದಲ್ಲಿ ಜ್ಯೋತಿ ಬೆಳಗಿ ಸಮಾರಂಭ ಉದ್ಘಾಟಿಸಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಮಾತನಾಡಿ, ಕೊಡಗು ಜಿಲ್ಲೆ ಅಸಂಖ್ಯ ಕ್ರೀಡಾಪಟುಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನೀಡಿದ ಖ್ಯಾತಿಯನ್ನು ಹೊಂದಿದೆ. ಕ್ರೀಡಾ ಚಟುವಟಿಕೆಗಳನ್ನು ಪ್ರತಿಯೊಬ್ಬರು ತೊಡಗಿಸಿಕೊಳ್ಳುವುದು ಅವಶ್ಯವೆಂದ ಅವರು, ಇಂತಹ ಕ್ರೀಡಾ ಚಟುವಟಿಕೆಗಳು ನಮ್ಮ ಆರೋಗ್ಯವನ್ನು ಕಾಪಾಡುವುದಲ್ಲದೆ ಸಮಚಿತ್ತತೆಯಿಂದ ಬದುಕನ್ನು ಎದುರಿಸಲು ಸಹಕಾರಿಯಾಗಿದೆಯೆಂದು ನುಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಮಳೆಯ ಕಾರಣದಿಂದ ದಸರಾ ಸಂದರ್ಭ ನಡೆಯಬೇಕಿದ್ದ ಕಬಡ್ಡಿ ಪಂದ್ಯಾವಳಿಯನ್ನು ಇಂದು ಆಯೋಜಿಸಲಾಗುತ್ತಿದೆ. ಇಂತಹ ಕ್ರೀಡಾಕೂಟಗಳಲ್ಲಿ ಗೆಲುವು ಸೋಲಿಗೂ ಮಿಗಿಲಾಗಿ ಪಾಲ್ಗೊಳ್ಳುವಿಕೆ ಅತ್ಯಂತ ಪ್ರಮುಖವಾಗುತ್ತದೆಂದು ಅಭಿಪ್ರಾಯಿಸಿದರು. ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಬಿ.ಕೆ.ಅರುಣ್ ಕುಮಾರ್ ಮಾತನಾಡಿ, ಕ್ರೀಡಾ ಚಟುವಟಿಕೆಗಳು ನಮಗೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ನಮ್ಮಲ್ಲಿ ಮೂಡಿಸುತ್ತದೆಂದು ನುಡಿದರು. :: ಶಾಸಕದ್ವಯರಿಂದ ಕಬಡ್ಡಿ…ಕಬಡ್ಡಿ..! :: ಸಭಾ ಕಾರ್ಯಕ್ರಮದ ಬಳಿಕ ಆಯೋಜಿತ ಪತ್ರಕರ್ತರ ತಂಡ ಮತ್ತು ದಸರಾ ಕ್ರೀಡಾ ಸಮಿತಿ ತಂಡಗಳ ನಡುವಣ ಪ್ರದರ್ಶನ ಪಂದ್ಯಕ್ಕೆ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಅವರು, ತಾವೇ ‘ಕಬಡ್ಡಿ…ಕಬಡ್ಡಿ…’ ಎನ್ನುತ್ತ ರೈಡ್ ಮಾಡಿ ಗಮನ ಸೆಳೆÉದರು. ಸಭಾ ಕಾರ್ಯಕ್ರಮದಲ್ಲಿ ನಗರಸಭಾ ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಾಜಿ ಎಂಎಲ್‍ಸಿ ವೀಣಾ ಅಚ್ಚಯ್ಯ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ, ಮಡಿಕೇರಿ ನಗರ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಮಡಿಕೇರಿ ಯುವ ದಸರಾ ಸಮಿತಿ ಅಧ್ಯಕ್ಷ ಕವನ್ ಕೊತ್ತೋಳಿ, ನಗರಸಭಾ ಸದಸ್ಯೆ ಚಿತ್ರಾವತಿ, ನಗರಸಭಾ ನಾಮ ನಿರ್ದೇಶಿತ ಸದಸ್ಯರಾದ ಸದಾ ಮುದ್ದಪ್ಪ, ಜಿ.ಸಿ. ಜಗದೀಶ್, ದಶ ಮಂಟಪ ಸಮಿತಿ ಅಧ್ಯಕ್ಷರಾದ ಹರೀಶ್ ಅಣ್ವೇಕರ್, ಪ್ರಮುಖರಾದ ಪ್ರಕಾಶ್ ಆಚಾರ್ಯ, ಜಿ.ಕೆ.ಜಗದೀಶ್, ಕ್ರೀಡಾ ಸಮಿತಿಯ ರವಿ ಕರ್ಕೆರ, ಪ್ರಸನ್ನ ಭಟ್ ಮೊದಲಾದವರು ಉಪಸ್ಥಿತರಿದ್ದರು. :: ರೋಚಕ ಪ್ರದರ್ಶನ ಪಂದ್ಯ :: ದಸರಾ ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕರ್ಕೆರ ನೇತೃತ್ವದ ತಂಡ ಹಾಗೂ ಮಂಜು ನೇತೃತ್ವದ ಪತ್ರಕರ್ತರ ಸಂಘದ ನಡುವಿನ ಪ್ರದರ್ಶನ ಪಂದ್ಯ ಕುತೂಹಲಕಾರಿಯಾಗಿ ನಡೆದು, ಅಲ್ಪ ಅಂತರದಿಂದ ಕ್ರೀಡಾ ಸಮಿತಿ ತಂಡ ಗೆಲುವನ್ನು ದಾಖಲಿಸಿತು.ಪಂದ್ಯಾವಳಿಯಲ್ಲಿ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳ ತಂಡಗಳು ಪಾಲ್ಗೊಂಡಿದ್ದು, ಪ್ರಶಸ್ತಿಗಾಗಿ ಪೈಪೋಟಿ ನಡೆಸಿದವು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.