Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾನ್ ಬೈಲ್ ನಲ್ಲಿ ಸಂಭ್ರಮದ ಓಣಂ ಆಚರಣೆ : ಗಮನ ಸೆಳೆದ ಚಂಡೆವಾದ್ಯ, ಮೆರವಣಿಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾನ್ ಬೈಲ್ ನಲ್ಲಿ ಸಂಭ್ರಮದ ಓಣಂ ಆಚರಣೆ : ಗಮನ ಸೆಳೆದ ಚಂಡೆವಾದ್ಯ, ಮೆರವಣಿಗೆ*

ಅಕ್ಟೋಬರ್ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಣಿವೆ ಅ.13 NEWS DESK : ಓಣಂ ಆಚರಣೆ ಕೇರಳೀಯರ ಪ್ರಮುಖ ಹಬ್ಬವಾಗಿದ್ದು, ಎಲ್ಲರೂ ಒಂದೆಡೆ ಸೇರಿ ಸಂಭ್ರಮಿಸಿ ಸಾಮರಸ್ಯ ಬೆಸೆಯುವ ಹಾಗೂ ಸಂಬಂಧಗಳನ್ನು ಉದ್ದೀಪನಗೊಳಿಸುವ ಆಚರಣೆಯಾಗಿದೆ ಎಂದು ಮಾಜಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು. ನಾಕೂರು ಶಿರಂಗಾಲ ಗ್ರಾಪಂ ವ್ಯಾಪ್ತಿಯ ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಕಾನ್ ಬೈಲ್ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮೂರನೇ ವರ್ಷದ ಓಣಂ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿನ ಯಾವುದೇ ಜಾತಿ ಜನಾಂಗದ ಆಚರಣೆಗಳು ಅವರ ಸಂಪ್ರದಾಯಗಳನ್ನು ಬಿಂಬಿಸುವಂತಿರಬೇಕು. ಮನುಷ್ಯ ಮನುಷ್ಯರಲ್ಲಿ ಉತ್ತಮ ಸಂಬಂಧಗಳ ಉದ್ದೀಪನದ ಜೊತೆಗೆ ದೇಶಭಕ್ತಿ ಹಾಗೂ ದೇಶ ಪ್ರೇಮ ಮೊಳಗಿಸಲು ಇಂತಹ ಅಚರಣೆಗಳು ಕಾರಣೀಭೂತವಾಗುತ್ತವೆ ಎಂದರು. ನಾಕೂರು ಶಿರಂಗಾಲ ಗ್ರಾಪಂ ಅಧ್ಯಕ್ಷ ಮಂದೋಡಿ ಜಗನ್ನಾಥ್ ಮಾತನಾಡಿ ಓಣಂ ಆಚರಣೆ ಹಿಂದೂ ಧರ್ಮೀಯ ಎಲ್ಲರನ್ನು ಒಂದೆಡೆ ಸೇರಿಸುವ ಹಾಗೂ ಸಾಮರಸ್ಯ ಉಂಟುಮಾಡುವ ಆಚರಣೆಯಾಗಿದೆ ಎಂದರು. ಹಿಂದೂ ಮಲೆಯಾಳಿ ಸಮಾಜದ ಸಲಹೆಗಾರ ಟಿ.ಆರ್.ವಾಸುದೇವನ್ ಮಾತನಾಡಿ, ಓಣಂ ಆಚರಣೆಯ ಮೂಲಕ ಮಲೆಯಾಳಿ ಭಾಷಿಗರು ಒಂದೆಡೆ ಸೇರಿ ನಮ್ಮ ಆಚಾರ, ವಿಚಾರಗಳು, ಕಲೆ, ಸಂಸ್ಕೃತಿಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಕೆ.ಬಿ.ರಾಜ, ಉಪಾಧ್ಯಕ್ಷ ಬಿ.ಇ.ಸತೀಶ್, ಸದಸ್ಯರಾದ ಪ್ರೇಮ, ಅರುಣಕುಮಾರಿ, ಸೀತೆ, ಪಿಡಿಒ ಅಸ್ಮಾ, ಕಾನ್ ಬೈಲ್ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಮೂರ್ತಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಾಂತಿ ಬಾಲಕೃಷ್ಣರೈ, ಸೋಮವಾರಪೇಟೆ ತಾಲ್ಲೂಕು ಹಿಂದೂ ಮಲೆಯಾಳಿ ಸಮಾಜದ ಸ್ಥಾಪಕ ಅಧ್ಯಕ್ಷ ಕೆ.ಡಿ.ಪ್ರಕಾಶ್, ಕಾಫಿ ಬೆಳೆಗಾರರಾದ ನೀಲಮ್ಮ ಪೆಮ್ಮಯ್ಯ, ಅಡಿಕೇರಿ ಧರ್ಮಪ್ಪ, ಧರ್ಮಸ್ಥಳ ಯೋಜನೆಯ ಸೇವಾ ಪ್ರತಿನಿಧಿ ಯಶೋಧ, ನಾಕೂರು ಶಿರಂಗಾಲ ಕೊಡವ ಕೂಟದ ಅಧ್ಯಕ್ಷ ಯಶು ತಮ್ಮಯ್ಯ, ಗೌಡ ಸಮಾಜದ ಅಧ್ಯಕ್ಷ ಎಂ.ಎಂ.ಕಾರ್ಯಪ್ಪ, ಬೆಳ್ಳರಿಕಮ್ಮ ದೇವಾಲಯ ಸಮಿತಿ ಅಧ್ಯಕ್ಷ ಕೆ.ಪಿ.ಬೋಪಯ್ಯ, ಮಳೂರು ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಹೆಚ್.ಬಿ.ಗಣೇಶ್, ಕಾಂಗ್ರೆಸ್ ಮುಖಂಡರಾದ ಪಿ.ಎಂ.ಬಿಜು, ಸ್ಯಾಮ್ಸನ್, ಕಾನ್ ಬೈಲ್ ರಾಮಮಂದಿರ ಅಧ್ಯಕ್ಷ ಬಿ.ಜಿ.ನರೇಂದ್ರ, ವಿ.ಕೆ.ಗಂಗಾಧರ್ ಇದ್ದರು. ಇದೇ ಸಂದರ್ಭ ಮಲೆಯಾಳಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಬಳಿಕ ಸಮಾಜದ ಮಕ್ಕಳಿಗೆ ನೃತ್ಯ ಸ್ಪರ್ಧೆ ಹಾಗೂ ಮಹಿಳೆಯರಿಗೆ ಪೂಕಳಂ ಬಿಡಿಸುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ತಾಪಂ ಮಾಜಿ ಸದಸ್ಯ ರಾದ ಶಂಕರನಾರಾಯಣ ಸ್ವಾಗತಿಸಿದರು. ಕೆ.ಎಂ.ವಿನೀಶ್ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನಾ ಬೆಳಗ್ಗೆ ಕಲ್ಲೂರು ಗ್ರಾಮದ ಬಸವೇಶ್ವರ ದೇವಾಲಯದ ಆವರಣದಿಂದ ಚಂಡೆವಾದ್ಯದೊಂದಿಗೆ ಹಮ್ಮಿಕೊಂಡಿದ್ದ ಓಣಂ ಮೆರವಣಿಗೆಯನ್ನು ಸಮಾಜದ ಅಧ್ಯಕ್ಷ ಕೆ.ಬಿ.ರಾಜ. ಹಾಗೂ ಗ್ರಾಪಂ ಸದಸ್ಯೆ ರಾಧಾಮಣಿ ಉದ್ಘಾಟಿಸಿದರು. ಕಲ್ಲೂರಿನಿಂದ ಹೊರಟ ಮೆರವಣಿಗೆ ಕಾನ್ ಬೈಲು ಸರ್ಕಾರಿ ಪ್ರಾಥಮಿಕ ಶಾಲೆಯ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆಯಲ್ಲಿ ಮಲೆಯಾಳಿ ಸಮಾಜದ ಮಹಿಳೆಯರು,ಮಕ್ಕಳು ಹಾಗೂ ಪುರುಷರು ಸಾಂಪ್ರದಾಯಿಕ ಉಡುಗೆ ತೊಟ್ಟು ಹೆಜ್ಜೆ ಇಟ್ಟರು. ಕಾರ್ಯಕ್ರಮದಲ್ಲಿ ಮಾವೇಲಿ ಛದ್ಮವೇಶಧಾರಿಯಾಗಿ ಕೇರಳದ ಮಟ್ಟಾನೂರಿನ ಅಭಿ ಗಮನ ಸೆಳೆದರು. ಕಾರ್ಯಕ್ರಮಕ್ಕೂ ಮುನ್ನಾ ಶಾಲಾ ಕೊಠಡಿಯಲ್ಲಿ ಸಮಾಜದ ಮಹಿಳೆಯರು ಹಾಗೂ ಮಕ್ಕಳು ಶ್ರದ್ಧಾಭಕ್ತಿಯಿಂದ ಬಿಡಿಸಿದ್ದ ಪೂಕಳಂ ನೋಡುಗರ ಗಮನ ಸೆಳೆಯಿತು. ಕೇರಳದ ರಾಧಾಕೃಷ್ಣನ್ ತಂಡದವರು ಸಿದ್ದಪಡಿಸಿದ್ದ ಓಣಂ ಸದ್ಯ ನೆರೆದಿದ್ದ ಸಮಸ್ತರ ಬಾಯಿ ರುಚಿ ಇಮ್ಮಡಿಗೊಳಿಸಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.